Connect with us

ದಿನದ ಸುದ್ದಿ

ಡಿಸೆಂಬರ್ 29ರಂದು ಕುಪ್ಪಳಿಯಲ್ಲಿ ‘ವಿಶ್ವಮಾನವ’ ದಿನಾಚರಣೆ : ‘ಮಂತ್ರಮಾಂಗಲ್ಯ’ ಇಂಗ್ಲೀಷ್ ಆವೃತ್ತಿಯ ಪುಸ್ತಕ ಬಿಡುಗಡೆ

Published

on

ಸುದ್ದಿದಿನ,ಶಿವಮೊಗ್ಗ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಮತ್ತು ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 9.45ಕ್ಕೆ ಕುಪ್ಪಳಿಯ ಹೇಮಾಂಗಣದಲ್ಲಿ ಕುವೆಂಪು ಅವರ 115ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಹಾಗೂ ಕುವೆಂಪು ಸಾಹಿತ್ಯ ಅಧ್ಯಯನ ಶಿಬಿರ ಮತ್ತು ಸಾಂಸ್ಕøತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 9.45ಕ್ಕೆ ಅತಿಥಿಗಳಿಂದ ಕವಿಶೈಲದಲ್ಲಿ ಕವಿನಮನ, 10.15ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿ, ಪಂಜಾಬಿ ಸಾಹಿತಿ ಡಾ.ಅಜೀತ್ ಕೌರ್ ಮತ್ತು ಗುರುಬಚನ್ ಸಿಂಗವ ಭುಲ್ಲರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು ಹಾಗೂ ಮಂತ್ರಮಾಂಗಲ್ಯ ಇಂಗ್ಲೀಷ್ ಆವೃತ್ತಿಯ ಪುಸ್ತಕ ಬಿಡುಗಡೆ ಮಾಡುವರು.

ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗಾಂಧಿ-150 ಪುಸ್ತಕ ಬಿಡುಗಡೆಗೊಳಿಸುವರು.

ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ಅವರು 2020ರ ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಹಂ.ಪ.ನಾಗರಾಜಯ್ಯ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ. ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಸಿ.ನಾರಾಯಣಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.

ಅಂದು ಮಧ್ಯಾಹ್ನ 2.30ಕ್ಕೆ ಸಾಹಿತ್ಯ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಸಾಹಿತಿ ಪ್ರೊ. ಓ.ಎಲ್.ನಾಗಭೂಷಣಸ್ವಾಮಿ ಶಿಬಿರವನ್ನು ಉದ್ಘಾಟಿಸುವರು.

ಸಂಜೆ 6ಗಂಟೆಗೆ ಕೋಲಾರದ ಶ್ರೀ ಜಯನಾಟ್ಯಂ ಕಲಾ ಅಕಾಡೆಮಿ ಅವರಿಂದ ವಿದ್ವಾನ್ ಕೋಲಾರ್ ರಮೇಶ್ ಅವರ ನಿರ್ದೇಶನದಲ್ಲಿ ಶ್ರೀ ರಾಮಾಯಣ ದರ್ಶನಂ ನ್ಯತ್ಯರೂಪಕ ಹಾಗೂ ಬೆಂಗಳೂರಿನ ರಾಷ್ಟ್ರೀಯ ನಾಟಕ ಶಾಲೆ ಇವರಿಂದ ಕುವೆಂಪು ವಿರಚಿತ ಬೆರಳ್‍ಗೆ ಕೊರಳ್ ನಾಟಕವನ್ನು ಚೆನ್ನೈನ ಪ್ರಸನ್ನ ರಾಮಸ್ವಾಮಿ ಅವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ತೀರ್ಥಹಳ್ಳಿಯ ನಟಮಿತ್ರರು ಸಹಕಾರ ನೀಡುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ಮನದೀಪ್‌ ರಾಯ್‌ ನಿಧನ

Published

on

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್‌ ರಾಯ್‌ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್‌ ರಾಯ್‌ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್‌ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.

ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

Published

on

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.

ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

Trending