ದಿನದ ಸುದ್ದಿ
ದಾವಣಗೆರೆ | ಜಿಲ್ಲೆಯಲ್ಲಿ ಮಾ.29 ರಂದು ದೃಢಪಟ್ಟ ಮತ್ತೊಂದು ಕೋವಿಡ್-19 ಪ್ರಕರಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಾ.29 ರಂದು ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ ಬಂದಿರುವ ಮಾಹಿತಿಯನ್ನು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಘಟಕ ನೀಡಿದ್ದು, ಈ ಸೋಂಕಿತ ವ್ಯಕ್ತಿಯು ಚಿತ್ರದುರ್ಗ ತಾಲ್ಲ್ಲೂಕಿನ ಭೀಮಸಮುದ್ರ ಗ್ರಾಮದ ಮನೆಯಲ್ಲಿ ಮಾ. 17 ರಿಂದ 23 ರವರೆಗೆ ಪ್ರತ್ಯೇಕ ಅವಲೋಕನದಲ್ಲಿ ಇರುತ್ತಾರೆ. ಮಾ. 24 ರಂದು ಭೀಮಸಮುದ್ರದಿಂದ ದಾವಣಗೆರೆ ಜೆ.ಎಂ.ಐ.ಟಿ. ಗೆಸ್ಟ್ ಹೌಸ್ಗೆ ಬಂದು ಪ್ರತ್ಯೇಕ ಕೊಠಡಿಯಲ್ಲಿ ತಂಗಿರುತ್ತಾರೆ.
ಈ ಮಾಹಿತಿಯು ಗೆಸ್ಟ್ ಹೌಸನಲ್ಲಿ ವಾಸವಿದ್ದ ಸಿಬ್ಬಂದಿಯಿಂದ ತಿಳಿದು ಬಂದಿದ್ದು, ಅದೇ ದಿನ ಜಿಲ್ಲಾ ಆರ್.ಆರ್.ಟಿ. ತಂಡ ಮತ್ತು ಸ್ಥಳಿಯ ಆರ್ಯೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯವರು ತಕ್ಷಣ ಆ ವ್ಯಕ್ತಿಯನ್ನು ಭೇಟಿ ಮಾಡಿ ತಪಾಸಣೆ ನಡೆಸಿದಾಗ, ಆ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದೇ ಇದ್ದುದ್ದರಿಂದ ಅವರನ್ನು ಉಳಿದ 7 ದಿನಗಳ ಕಾಲ ಗೆಸ್ಟ್ ಹೌಸನಲ್ಲಿ ಪ್ರತ್ಯೇಕಿಸಿ ಅವಲೋಕನದಲ್ಲಿ ಇಡಲಾಗಿದೆ.
ಈ ವ್ಕಕ್ತಿಯು ಚಿತ್ರದುರ್ಗದ ಭೀಮಸಮುದ್ರದ ಅವರ ಮನೆಯಲ್ಲಿ ಇದ್ದ ಪಿ-32 ಪ್ರಕರಣದ ನೇರ ಸಂಪರ್ಕದಲ್ಲಿ ಇದ್ದ ಕಾರಣ ನಿಯಮಾನುಸಾರ ಮಾ. 26 ರಂದು ಗಂಟಲುದ್ರವವನ್ನು ತೆಗೆದು ಶಿವಮೊಗ್ಗದ ವಿ.ಆರ್.ಡಿ.ಎಲ್ ಪ್ರಯೋಗ ಶಾಲೆಗೆ ಕಳುಹಿಸಲಾಗಿದ್ದು, ಮಾ. 28 ರಂದು ಸಂಜೆ 7.00 ಗಂಟೆ ವ್ಯಕ್ತಿಯು ಗಂಟಲು ದ್ರವದ ಮಾದರಿಯನ್ನು ಪ್ರಾಥಮಿಕ ಫಲಿತಾಂಶ ಪಾಸಿಟಿವ್ ಎಂದು ಬಂದಿದ್ದು, ತಕ್ಷಣವೇ ದಾವಣಗೆರೆಯ ಎಸ್.ಎಸ್.ಐ.ಎಂ.ಎಸ್ ಆಸ್ವತ್ರೆಗೆ ದಾಖಲಿಸಿದ್ದಾರೆ.
ಮಾ.28 ರಂದು ರಾಜ್ಯ ಸರ್ವೇಕ್ಷಣಾ ಘಟಕದ ನಿರ್ದೇಶನದಂತೆ ಕೋವಿಡ್-19 ಖಚಿತಪಟ್ಟ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ವೇಕ್ಷಣಾ ಘಟಕದ ಮಾರ್ಗಸೂಚಿಯಂತೆ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಿದ್ದು, ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಮತ್ತು ಈ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 8 ಮಂದಿಯಯನ್ನು ಗುರುತಿಸಿದ್ದು ಅವರ ರೋಗ ಲಕ್ಷಣಗಳ ತಪಾಸಣೆ ನಡೆಸಲಾಗುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಈ ವ್ಯಕ್ತಿಯ ಪ್ರಯಾಣದ ವಿವರ ಈ ಕೆಳಕಂಡತಿದೆ
ದಾವಣಗೆರೆ ನಗರದ ಈ ವ್ಯಕ್ತಿಯೊಬ್ಬರು ಅಮೇರಿಕಾದ ಚಿಕಾಗೋ ನಗರದ ಹತ್ತಿರದ ಪ್ರಡ್ಯೂ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು, ಮಾ. 15 ರಂದು ಹಾಸ್ಟಲ್ನಿಂದ ಉಬರ್ ಕ್ಯಾಬನಲ್ಲಿ ಹೊರಟು ಚಿಕಾಗೋ ತಲುಪಿದ್ದಾರೆ. ಅಲ್ಲಿಂದ ಏರ್ ಇಂಡಿಯಾ ಎ.ಐ-126 ವಿಮಾನದಲ್ಲಿ ಸೀಟ್ ಸಂಖ್ಯೆ-12 ಹೆಚ್ ರಲ್ಲಿ ಪ್ರಯಾಣಿಸಿ ಮಾ 17 ರಂದು ಬೆಳಗಿನ ಜಾವ 12.30 ಕ್ಕೆ ನವದೆಹಲಿ ತಲುಪಿರುತ್ತಾರೆ. (ಈ ವಿಮಾನವು 4 ಗಂಟೆ ತಡವಾಗಿ ಆಗಮಿಸಿರುತ್ತದೆ)
ನವದೆಹಲಿಯಿಂದ ಏರ್ಇಂಡಿಯಾ ವಿಮಾನ ಎ.ಐ.-504 ಸಿಟ್ಸಂಖ್ಯೆ ಡಿ 17 ರಲ್ಲಿ ಪ್ರಯಾಣಿಸಿ ಬೆಂಗಳೂರಿಗೆ 3.00 ಗಂಟೆಗೆ ತಲುಪಿರುತ್ತಾರೆ, ಬೆಂಗಳೂರು ವಿಮಾನ ನಿಲ್ದಾಣದಿಂದ 4.00 ಗಂಟೆಗೆ ಸ್ವಂತ ಕಾರಿನಲ್ಲಿ ಹೊರಟು ಅದೇ ದಿನ ಬೆಳಿಗ್ಗೆ 10.00 ಗಂಟೆಗೆ ಚಿತ್ರದುರ್ಗದ ಭೀಮಸಮುದ್ರ ಗ್ರಾಮಕ್ಕೆ ತಲುಪಿರುತ್ತಾರೆ. ಅಲ್ಲಿ ತಮ್ಮ ಸ್ವಂತ ಮನೆಯಲ್ಲಿ ಪ್ರತ್ಯೆಕವಾಗಿ ತಂಗಿದ್ದು ಮತ್ತು ಚಿತ್ರದುರ್ಗ ಸರ್ವೇಕ್ಷಣಾ ತಂಡದ ಅವಲೋಕನದಲ್ಲಿ ಇರುತ್ತಾರೆ. ಸದರಿ ವ್ಯಕ್ತಿಯು ಚಿತ್ರದುರ್ಗ ಜಿಲ್ಲೆಯಿಂದ ಹೊರಟು ದಾವಣಗೆರೆ ಜಿಲ್ಲೆಗೆ ಬಂದಿರುವ ಮಾಹಿತಿಯು ಲಭ್ಯವಾದ ತಕ್ಷಣವೇ ಕೋವಿಡ್-19 ರ ಮಾರ್ಗಸೂಚಿಗಳ ಅನ್ವಯ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಜಿಲ್ಲಾಡಳಿತದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಕೊಳ್ಳಲಾದ ಮುಂಜಾಗ್ರತಾ ಕ್ರಮಗಳು ಇಂತಿವೆ
- ಈಗಾಗಲೇ ಕೇಂದ್ರ /ರಾಜ್ಯ ಸರ್ಕಾರದ ಆದೇಶದಂತೆ ದಿನಾಂಕ: 14.04.2020 ರವರೆಗೆ ಲಾಕ್ ಡೌನ್ ಘೋಷಣೆ ಅಗಿರುತ್ತದೆ.
- ಜಿಲ್ಲಾಡಳಿತದಿಂದ ಲಾಕ್ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದೆ.
- ಈವರೆಗೆ ಜಿಲ್ಲೆಯಲ್ಲಿ ವಿದೇಶ ಪ್ರಯಾಣ ಹಿನ್ನಲೆ ಇರುವ ಎಲ್ಲಾ ವ್ಯಕ್ತಿಗಳನ್ನು ಸಂಪರ್ಕಿಸಿ ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ.
- ಸೋಂಕು ದೃಡಪಟ್ಟ ವ್ಯಕ್ತಿಯನ್ನು ಎಸ್.ಎಸ್.ಐ.ಎಂ.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದೆ. ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 5 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾರಿಗೂ ಯಾವುದೇ ಲಕ್ಷಣ ಇರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಮನೆಯಲ್ಲೆ 14 ದಿನಗಳ ಕಾಲ ಅವಲೋಕನದಲ್ಲಿ ಇಡಲಾಗುವುದು. ಕಾಲ ಕಾಲಕ್ಕೆ ರಾಜ್ಯ ಸರ್ಕಾರದ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.
ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಈಗಾಗಲೇ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶ ಮತ್ತು ಸುತ್ತೋಲೆಗಳ ಅನ್ವಯ ಮನೆಗಳಲ್ಲೆ ಇದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಸೂಚಿಸಿದೆ ಮತ್ತು ಕೋವಿಡ್-19 ನಿಯಂತ್ರಣ ತರುವಲ್ಲಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
