Connect with us

ದಿನದ ಸುದ್ದಿ

ದಾವಣಗೆರೆ | ಲಾಕ್ ಡೌನ್ ವೇಳೆ ತಹಸೀಲ್ದಾರ್ ವರ್ಗಾವಣೆ

Published

on

ಸುದ್ದಿದಿನ, ದಾವಣಗೆರೆ :  ಸರ್ವೋತ್ತಮ ಪ್ರಶಸ್ತಿ ಪುರಸ್ಕೃತ ತಹಶೀಲ್ದಾರ್ ಸಂತೋಷ್ ಕುಮಾರ್‌ ರನ್ನು ಸರಕಾರ ಲಾಕ್ ಡೌನ್ ವೇಳೆ ವರ್ಗಾವಣೆ‌ ಮಾಡಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

ಲಾಕ್ ಡೌನ್ ಸಮಯದಲ್ಲಿ‌ ತಹಶೀಲ್ದಾರ್ ಸಂತೋಷ್ ಕುಮಾರ್‌ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಪೌರ ಕಾರ್ಮಿಕರ ಜೊತೆ ಕೈ ಜೋಡಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಮಾರ್ಗದರ್ಶನದಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿದ್ದರು.

ಲಾಕ್ ಡೌನ್ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಶುರು ಮಾಡುತ್ತಿದ್ದ ತಹಶೀಲ್ದಾರ್ ಸಂತೋಷ್ ಕುಮಾರ್ ಅವರು ಜನರಿಗೆ ಅರಿವು ಮೂಡಿಸಿ ಜಾಗೃತ ಪಡಿಸಿದ್ದರು. ಜನರು ಗುಂಪು ಗುಂಪಾಗಿ ಸೇರುವುದನ್ನ ತಪ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಮಾರುಕಟ್ಟೆಯಲ್ಲಿ ಜನ ಜನಂಗುಳಿ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದರು.

ಅಂಗಡಿಗಳ ಮೇಲೆ ದಾಳಿ ಮಾಡಿ ನಿಷೇಧ ಹೇರಿದ್ದ ವಸ್ತುಗಳ ಮಾರಾಟಕ್ಕೆ ಬ್ರೇಕ್ ಹಾಕಿದ್ದು, ಜನರಿಂದ ಪ್ರಶಂಸೆ ಮಾತುಗಳು ವ್ಯಕ್ತವಾಗಿದ್ದವು. ಕಾರ್ಮಿಕರು,ಬಡವರು, ಅಲೆಮಾರಿಗಳು ಕೆಲಸವಿಲ್ಲದೇ ಊಟಕ್ಕೂ ಪರದಾಡುತ್ತಿದ್ದ ವೇಳೆ ತಹಶೀಲ್ದಾರ್ ಸಂತೋಷ್ ಕುಮಾರ್, ದಾವಣಗೆರೆ ನಗರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಹಾಗೂ ಗೋಣಿವಾಡ ಕ್ರಾಸ್ ಗೆ ತೆರಳಿ ಅಲೆಮಾರಿಗಳಿಗೆ ಆಹಾರ ಸಾಮಾಗ್ರಿ‌ ವಿತರಿಸಿದ್ದರು. ಅಲ್ಲದೇ ಸಾಮಾಜಿಕ ಕಾರ್ಯಕರ್ತರು, ಸಂಘ ಸಂಸ್ಥೆಗಳೊಂದಿಗೆ ಕೈ ಜೋಡಿಸಿ ಹತ್ತಾರು ಕುಟುಂಬಗಳಿಗೆ ನೆರವು ನೀಡಿದ್ದು, ಜನ ಮನ್ನಣೆಗಳಿಸಿದ್ದರು.

  • ದಾವಣಗೆರೆ ತಾಲೂಕ್ ನಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್ ಜನರ ಬಳಿಯೇ ಹೋಗಿ ಅವರ ಸಮಸ್ಯೆಗೆ ಸ್ಪಂದಿಸುತ್ತಿದ್ದರು. ಅವರ ವರ್ಗಾವಣೆಗೆ ನಮ್ಮ‌ ವಿರೋಧ ಇದೆ. ಏಕಾಏಕಿ ಕಾರಣವಿಲ್ಲದೇ ಸ್ಥಳ ಕೂಡ ತೋರಿಸದೇ ವರ್ಗಾವಣೆ ಮಾಡಿದ್ದು ಎಷ್ಟು ಸರಿ. ಇನ್ನಾದರೂ‌‌ ಪ್ರಾಮಾಣಿಕ ಅಧಿಕಾರಿಗಳನ್ನು ಸರಕಾರ ಜಿಲ್ಲೆಯಲ್ಲಿ‌ ಉಳಿಸಲಿ.

| ಬಾಡಾದ ಆನಂದ್ ರಾಜ್, ಶೋಷಿತ ವರ್ಗಗಳ‌ ಒಕ್ಕೂಟದ ಜಿಲ್ಲಾಧ್ಯಕ್ಷ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ಮನದೀಪ್‌ ರಾಯ್‌ ನಿಧನ

Published

on

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್‌ ರಾಯ್‌ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್‌ ರಾಯ್‌ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್‌ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.

ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

Published

on

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.

ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

Trending