ದಿನದ ಸುದ್ದಿ
ದಾವಣಗೆರೆ | ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹೋಟೆಲ್ ತೆರೆಯಲು ಅನುಮತಿ

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಾಮಿಕ ರೋಗವು ತ್ರೀವ್ರತರವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಸರ್ಕಾರವು ಹಲವು ರೀತಿಯ ಪ್ರಯತ್ನಗಳಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ತಲುಪಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನಗಳ ಚಾಲನೆಗೆ ಅವಕಾಶ ನೀಡಲಾಗಿರುತ್ತದೆ.
ವಾಹನ ಚಾಲಕರಿಗೆ ಮತ್ತು ಅವರ ಸಹಾಯಕರಿಗೆ ಊಟೋಪಚಾರಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈ ಕೆಳಕಂಡ ಹೋಟೆಲ್ ಮತ್ತು ಡಾಬಾಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ಹೋಟೆಲ್ ಮತ್ತು ಡಾಬಾಗಳ ವಿವರ
- ಗ್ರೀನ್ ಪಾಯಿಂಟ್ ಪಂಜಾಬಿ ಡಾಬಾ, ಕುಂದುವಾಡ ಹತ್ತಿರ ದಾವಣಗೆರೆ ಮಾಲೀಕರು ಅಬ್ದುಲ್ ರಜಾಕ್ ದೂ.ಸಂ. 9844027001.
- ಶಾಂತಿಸಾಗರ ಡಾಬಾ ಪಂಚಮಸಾಲಿ ಮಠದ ಹತ್ತಿರ ದಾವಣಗೆರೆ ಮಾಲೀಕರು ರುದ್ರೇಶ್. ಹೆಚ್.ವಿ ದೂ.ಸಂ. 9945134846.
- ಬಸವೇಶ್ವರ ಹೋಟೆಲ್ ಅಣ್ಣಾಪುರ ಗ್ರಾಮ ದಾವಣಗೆರೆ ಮಾಲೀಕರು ರೇವಣ್ಣಸಿದ್ದಪ್ಪ ದೂ.ಸಂ. 886110388.
- ಪೃಥ್ವಿ ಡಾಬಾ ಬಾಡಾ ಗ್ರಾಮ ದಾವಣಗೆರೆ ಮಾಲೀಕರು ರೇವಣ್ಣಸಿದ್ದಪ್ಪ ಜೆ.ಜೆ ದೂ.ಸಂ 7619258791.
- ಸಂಜನ ಹೋಟೆಲ್ ಗರಗ ಕ್ರಾಸ್, ಚನ್ನಗಿರಿ ಮಾಲೀಕರು ಹೆಚ್.ವಿ ಮಂಜುನಾಥ ದೂ.ಸಂ. 9632457981.
- ಮಲ್ನಾಡುಸಿರಿ ಫ್ಯಾಮಿಲಿ ರೆಸ್ಟೋರೆಂಟ್ ದುದುರಕಟ್ಟೆ, ಚನ್ನಗಿರಿ ಮಾಲೀಕರು ರಾಹುಲ್.ಜೆ ದೂ.ಸಂ. 9380100677.
- ಬಿಂದಾಸ್ ಡಾಬಾ ಆನಗೋಡು ಹತ್ತಿರ. ದಾವಣಗೆರೆ ಮಾಲೀಕರು ಮಹಮ್ಮದ್ ರಫೀಕ್ ದೂ.ಸಂ. 8431664377.
- ಕಿರಣ್ ರೆಡ್ಡಿ ಫ್ಯಾಮಿಲಿ ರೆಸ್ಟೋರೆಂಟ್ ದೊಣ್ಣೇಹಳ್ಳಿ ಹತ್ತಿರ ಜಗಳೂರು ಮಾಲೀಕರು ಕಿರಣ್ ರೆಡ್ಡಿ ದೂ.ಸಂ. 9686780638.
- ಸಾಗರ ಸಕಾರ ಡಾಬಾ ಹನಗವಾಡಿ ಕ್ರಾಸ್ ಹತ್ತಿರ ಹರಿಹರ ಮಾಲೀಕರು ಸೈಯದ್ ಅಲ್ತಾಫ್ ದೂ.ಸಂ. 8618653670.
- ಅಮೃತ ಹೋಟೆಲ್ ಹದಡಿ ಗ್ರಾಮ, ದಾವಣಗೆರೆ ಮಾಲೀಕರು ಸಿ.ಹೆಚ್ ನಾಗರಾಜ್, ಮರಿಯಮ್ಮನದೇವಿ ಖಾನವಳಿ ಹಿರೇಮಳಲಿ ರಸ್ತೆ ನಲ್ಲೂರುಮಾಲೀಕರುಎನ್.ಪರಮೇಶ್ವರಪ್ಪ ದೂ.ಸಂ. 9481508631.
- ಬಸವೇಶ್ವರ ಹೋಟೆಲ್ ತ್ಯಾವಣಿಗೆ, ಚನ್ನಗಿರಿ ಮಾಲೀಕರು ಜಿ.ಶಿವಕುಮಾರ್ ದೂ.ಸಂ.9972036741.
- ಸಂತೋಷ್ ಫ್ಯಾಮಿಲಿ ರೆಸ್ಟೋರೆಂಟ್ ದೇವನಾಯಕನಹಳ್ಳಿ, ಹೊನ್ನಾಳಿ ಮಾಲೀಕರು ಎ.ಎನ್.ಸಂತೋಷ್ ದೂ.ಸಂ.9481781717.
- ಹೊಯ್ಸಳ ಡಾಬಾ ಸುರಹೊನ್ನೆ ನ್ಯಾಮತಿ ಮಾಲೀಕರು ಸಂಗಮೇಶ್ ದೂ.ಸಂ. 9591814339.
- ಈಟರ್ಸ್ ಫ್ಯಾಮಿಲಿ ರೆಸ್ಟೋರೆಂಟ್ ಗೊಲ್ಲರಹಳ್ಳಿ ದಾವಣಗೆರೆ ಮಾಲೀಕರು ಅವಿನಾಶ್ ದೂ.ಸಂ.9986935295.
ಈ ಹೋಟೆಲ್ಗಳಿಗೆ ಮಾತ್ರ ಅನುಮತಿಯನ್ನು ನೀಡಲಾಗಿದೆ. ಹೋಟೆಲ್ ಮಾಲೀಕರಿಗೆ ಕೆಲ ಷರತ್ತುಗಳು ಮತ್ತು ನಿಯಮಗಳನ್ನು ಸೂಚಿಸಲಾಗಿದೆ.ಗ್ರಾಹಕರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದು, ಪರಿಶುದ್ದತೆ, ನೈರ್ಮಲ್ಯ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮತ್ತು ಸ್ತಾನಿಟೈಜರ್ ಬಳಕೆ ಕಡ್ಡಾಯವಾಗಿರುತ್ತದೆ ಮತ್ತು ಕೆಲಸ ನಿರ್ವಹಿಸುವವರೆಲ್ಲರು ಕಡ್ಡಾಯವಾಗಿ ಮಾಸ್ಕ್ಗಳನ್ನು ಧರಿಸಕ್ಕದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳತಕ್ಕದ್ದು.
ಮಾಲೀಕರುಗಳು ಸೇರಿದಂತೆ ಕೆಲಸಗಾರರಿಗೆ ಕೆಮ್ಮು, ಶೀತ, ಜ್ವರದ ಲಕ್ಷಣ ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸಬೇಕು. ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳಲ್ಲಿ ಸ್ಯಾನಿಟೈಸರ್/ಸೋಪ್ ವ್ಯವಸ್ಯೆ ಮಾಡಬೇಕು. ಊಟ/ಉಪಾಹಾರಗಳನ್ನು ಗ್ರಾಹಕರಿಗೆ ಪಾರ್ಸಲ್ ಮೂಲಕ ಮಾತ್ರ ಮಾರಾಟ ಮಾಡುವುದು ಕಡ್ಡಾಯವಾಗಿರುತ್ತದೆ. ಕುಳಿತು ತಿನ್ನುವುದಕ್ಕೆ ಅವಕಾಶವಿರುವುದಿಲ್ಲ.
ಈ ಷರತ್ತುಗಳನ್ನು ಉಲ್ಲಂಘಿಸುವವರ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರವರೆಗೆ ಕಾನೂನುಗಳನ್ವಯ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
