Connect with us

ದಿನದ ಸುದ್ದಿ

ಏನಿದು ‘ಹೆಲಿಕಾಪ್ಟರ್ ಮನಿ’..? ಮಿಸ್ ಮಾಡ್ದೆ ಓದಿ

Published

on

ಕೊರೊನಾ ಬಂದ ಮೇಲೆ ಬಿಸಿನೆಸ್‍ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ.

ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೆಸಿಆರ್ ಈ ಸಲಹೆ ನೀಡಿದ್ದೇ ತಡ ದೇಶವ್ಯಾಪಿ ‘ಹೆಲಿಕಾಪ್ಟರ್ ಮನಿ’ ಬಗ್ಗೆ ಚರ್ಚೆ ನಡೆಯುತ್ತಿದೆ.

ಏನಿದು ಹೆಲಿಕಾಪ್ಟರ್ ಮನಿ..?

ಹೆಲಿಕಾಪ್ಟರ್ ಮೂಲಕ ಹಣವನ್ನು ಉದುರಿಸುವ ಕಲ್ಪನೆಗೆ ಹೆಲಿಕಾಪ್ಟರ್ ಮನಿ ಎಂದು ಕರೆಯಲಾಗುತ್ತದೆ. ಸುಲಭವಾಗಿ ಜನರಿಗೆ ತನ್ನ ಆರ್ಥಿಕ ನೀತಿಯ ಕಲ್ಪನೆ ಅರ್ಥವಾಗಲೆಂದು ಅಮೆರಿಕಾದ ಅರ್ಥಶಾಸ್ತ್ರಜ್ಞ ಮಿಲ್ಟನ್ ಫ್ರೈಡ್‍ಮ್ಯಾನ್ ಈ ಹೆಸರನ್ನು ನೀಡಿದ್ದಾರೆ. ಹೆಲಿಕಾಪ್ಟರ್ ನಿಂದ ಹಣವನ್ನು ಉದುರಿಸುವುದು ಅಂದರೆ ನಿಜ ಅರ್ಥದಲ್ಲಿ ಮೇಲಿನಿಂದ ಹಣ ಹಾಕುವುದಲ್ಲ. ಹೆಚ್ಚಿನ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಮುದ್ರಿಸಿ ಜನರ ಕೈಗೆ ಸಿಗುವುಂತೆ ಮಾಡುವುದೇ ಈ ಕಲ್ಪನೆಯ ತಿರುಳು.

ಆರ್‌ಬಿಐ ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿ ಕೇಂದ್ರ ಸರ್ಕಾರಕ್ಕೆ ನೀಡಬೇಕು. ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಣ ನೀಡುವುದರ ಜೊತೆ ಜನರ/ ನೆಲಕಚ್ಚಿರುವ ಉದ್ಯಮಗಳಿಗೆ ಪ್ಯಾಕೇಜ್ ಘೋಷಣೆ ಮಾಡಿ ಹಣ ತಲುಪುವಂತೆ ಮಾಡಬೇಕು. ಈ ರೀತಿ ದಿಢೀರ್ ಆಗಿ ಹಣದ ಹೊಳೆ ಹರಿದಾಗ ವ್ಯವಹಾರ ಹೆಚ್ಚಾಗುತ್ತದೆ. ಹಣಕಾಸು ವ್ಯವಹಾರ ಹೆಚ್ಚಾಗುತ್ತಿದ್ದಂತೆ ಆರ್ಥಿಕತೆ ಮೇಲಕ್ಕೆ ಏರಬಹುದು ಎಂಬ ಲೆಕ್ಕಾಚಾರ ಇದರಲ್ಲಿ ಅಡಗಿದೆ. ದೇಶದ ಶೇ.5ರಷ್ಟು ಜಿಡಿಪಿಯ ನೆರವನ್ನು ಇದರಿಂದ ಪಡೆಯಬಹುದು ಎಂದು ಆರ್ಥಿಕ ತಜ್ಞರು ಸಲಹೆ ನೀಡಿದ್ದಾರೆ.

ಇದು ಸಾಧ್ಯವೇ..?

ಒಂದು ದೇಶ ಸಿಕ್ಕಪಟ್ಟೆ ಕರೆನ್ಸಿ ನೋಟುಗಳನ್ನು ಮುದ್ರಿಸುವಂತಿಲ್ಲ. ಅದಕ್ಕೂ ಒಂದು ಮಾನದಂಡವಿದೆ. ದೇಶದ ಆರ್ಥಿಕ ಬೆಳವಣಿಗೆ ದರ(ಜಿಡಿಪಿ)ಯನ್ನು ಲೆಕ್ಕ ಹಾಕಲಾಗುತ್ತದೆ. ಇದರ ಜೊತೆ ಭದ್ರತೆಗಾಗಿ ಜೊತೆ ಚಿನ್ನವನ್ನು ಇಡಬೇಕಾಗುತ್ತದೆ. ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿದರೆ ವಸ್ತುವಿನ ಬೆಲೆ ದಿಢೀರ್ ಹೆಚ್ಚಾಗುತ್ತದೆ

ಹೆಲಿಕಾಪ್ಟರ್ ಮನಿ’ ಎಫೆಕ್ಟ್ ಏನು..?

ಬಹುತೇಕ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ದಿನನಿತ್ಯದ ಜೀವನ ದುಬಾರಿಯಾಗುತ್ತದೆ. ರೂಪಾಯಿ ಮೌಲ್ಯ ಕುಸಿಯುತ್ತದೆ ಹಣದುಬ್ಬರ ಉಂಟಾಗುತ್ತದೆ.

ಕೇಂದ್ರ ಸರ್ಕಾರ ಮಾಡಬಹುದೇ..?

ಮೋದಿ ಸರ್ಕಾರ ಭ್ರಷ್ಟಾಚಾರ, ಕಪ್ಪು ಹಣ, ಉಗ್ರಗಾಮಿ ಚಟುವಟಿಕೆಗಳನ್ನು ಮಟ್ಟ ಹಾಕಲು 2016ರ ನವೆಂಬರ್ ನಲ್ಲಿ 500, 1 ಸಾವಿರ ರೂ. ನೋಟುಗಳನ್ನು ನಿಷೇಧಿಸಿದೆ. ಇದರ ಬೆನ್ನಲ್ಲೇ ಬಿಡುಗಡೆಯಾದ 2 ಸಾವಿರ ರೂ. ನೋಟುಗಳ ಮುದ್ರಣವನ್ನು ಸಹ ಕಡಿಮೆ ಮಾಡಿದೆ. ಡಿಜಿಟಲ್ ವ್ಯವಹಾರಕ್ಕೆ ಸರ್ಕಾರ ಜಾಸ್ತಿ ಒತ್ತು ನೀಡುತ್ತಿರುವಾಗ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸುತ್ತಾ? ಇಲ್ಲವೋ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಹಿಂದೆ ಜಾರಿ ಆಗಿದ್ಯಾ..?

ಆಫ್ರಿಕಾ ಖಂಡದಲ್ಲಿರುವ ಜಿಂಬಾಬ್ವೆ ಮತ್ತು ದಕ್ಷಿಣ ಅಮೆರಿಕ ಖಂಡದಲ್ಲಿರುವ ವೆನೆಜುವೆಲಾ ದೇಶಗಳು ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿತ್ತು. ಭಾರೀ ಪ್ರಮಾಣದಲ್ಲಿ ಮುದ್ರಿಸಿ ಪರಿಣಾಮ ಹಣಗಳು ಜನರ ಕೈಗೆ ಸೇರಿತ್ತು. ಪರಿಣಾಮ ವಸ್ತುಗಳ ಬೆಲೆ ಭಾರೀ ಏರಿಕೆ ಆಗಿತ್ತು. ಆಹಾರ ಪದಾರ್ಥಗಳನ್ನು ಖರೀದಿಸಲು ಮೂಟೆಗಟ್ಟಲೇ ಹಣವನ್ನು ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ದಿನದ ಸುದ್ದಿ

ನಟ ಮನದೀಪ್‌ ರಾಯ್‌ ನಿಧನ

Published

on

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್‌ ರಾಯ್‌ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್‌ ರಾಯ್‌ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್‌ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.

ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

Published

on

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.

ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

Trending