Connect with us

ದಿನದ ಸುದ್ದಿ

ದಾವಣಗೆರೆ | ಇಸ್ಪೀಟ್ ಆಡುತ್ತಿದ್ದ ಶಿಕ್ಷಣ ಇಲಾಖೆ ಸಿಬ್ಬಂದಿ ಬಂಧನ : ಡಿಡಿಪಿಐ ಗೆ ವರದಿ ಕೇಳಿದ ಆಯುಕ್ತರು

Published

on

ಸುದ್ದಿದಿನ ,ದಾವಣಗೆರೆ : ನಗರದ‌ ಶಿಕ್ಷ ಣ ಇಲಾಖೆ ಸಿಬ್ಬಂದಿಗಳು ಪಿ.ಬಿ.ರಸ್ತೆಯಲ್ಲಿರುವ ಬಿಲಾಲ್‌ ಕಾಂಪೌಂಡ್‌ನಲ್ಲಿ ಇಸ್ಪೀಟ್‌ ಆಡುತ್ತಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಆಯುಕ್ತ ಜಗದೀಶ್‌ ಡಿಡಿಪಿಐ ‌ಪರಮೇಶ್ವರ ಅವರಿಗೆ ಕೇಳಿದ್ದಾರೆ.

ಘಟನೆ ವಿವರ

ನಗರ ಉಪ ವಿಭಾಗದ ಡಿವೈಎಸ್ಪಿ ನಾಗೇಶ್‌ ಐತಾಳ್‌, ದಕ್ಷಿಣ ವೃತ್ತ ಸಿಪಿಐ ತಿಮ್ಮಣ್ಣ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪಿಎಸ್‌ಐ ವೀರೇಶ್‌ ನೇತೃತ್ವದಲ್ಲಿ ಶನಿವಾರ ದಾಳಿ ನಡೆಸಿ, ಇಸ್ಪೀಟ್ ಆಡುತ್ತಿದ್ದ, ಬಿಇಒ ಉತ್ತರ ವಲಯ ಕಚೇರಿ ಅಧೀಕ್ಷ ಕ ಎಚ್‌.ಎಸ್‌. ಬಸವರಾಜ, ಇದೇ ಕಚೇರಿಯ ಎಸಿಒ ಎಸ್‌. ಸೋಮಶೇಖರಪ್ಪ, ಪ್ರಥಮ ದರ್ಜೆ ಸಹಾಯಕ ಸುಧಾಕರ, ದ್ವಿತೀಯ ದರ್ಜೆ ಸಹಾಯಕ ಎಸ್‌.ಕೊಟ್ರೇಶ , ಎಸ್‌ಡಿಎ ಮಲ್ಲಿಕಾರ್ಜುನ, ಶಿಕ್ಷ ಕ ಕೆ.ಎಂ. ವೃಷಭೇಂದ್ರಪ್ಪ, ತಾಲೂಕು ಪಂಚಾಯಿತಿ ಕಚೇರಿ ಪ್ರಥಮ ದರ್ಜೆ ಸಹಾಯಕ ಎಲ್‌.ಆನಂದ , ಚಾಲಕ ಕೆ. ಹರ್ಷವರ್ಧನ ಇವರುಗಳನ್ನು ಬಂದಿಸಿ, ಅವರಿಂದ ಇಸ್ಪೀಟ್ ಆಟಕ್ಕೆ ಬಳಸಿದ 38,150 ರೂ. ನಗದನ್ನು ವಶಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ 269, 87 ಕೆಪಿ ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ.

ವಿಷಯ ತಿಳಿದ ಆಯುಕ್ತ ಜಗದೀಶ್‌ ಪ್ರಕರಣ ಸಂಬಂಧ ಸಂಪೂರ್ಣ ವರದಿ ನೀಡಬೇಕೆಂದು ಸೂಚಿಸಿದ ಹಿನ್ನೆಲೆಯಲ್ಲಿ, ಆಯಕ್ತರ ಆದೇಶನುಸಾರ ಡಿಡಿಪಿಐ ಪರಮೇಶ್ವರ ಕೆಟಿಜೆನಗರ ಪೊಲೀಸ್‌ ಠಾಣೆಗೆ ಪತ್ರ ಬರೆದಿದ್ದು, ಮಾಹಿತಿ ಬಂದ ಮೇಲೆ ಅದನ್ನು ಆಯುಕ್ತರಿಗೆ ಕಳುಹಿಸಿ ಅವರ ಆದೇಶನುಸಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬಂಧಿತರನ್ನು ಕೋವಿಡ್‌-19 ಡ್ಯೂಟಿಗೆ ನೇಮಿಸಲಾಗಿತ್ತು

ಕೋವಿಡ್‌-19 ಸಂಬಂಧ ದಾವಣಗೆರೆ ಉತ್ತರಕ್ಕೆ ಅಧೀಕ್ಷಕ ಬಸವರಾಜ್‌, ದ್ವೀತಿಯ ದರ್ಜೆ ಸಹಾಯಕ ಮಲ್ಲಿಕಾರ್ಜುನ್‌ ಮಠದ್‌ ಅವರನ್ನು ನೇಮಕ ಮಾಡಲಾಗಿತ್ತು. ಇವರು ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ದಾಖಲಾಗುವ ರೋಗಿಗಳ ಮಾಹಿತಿ ಪಡೆಯಬೇಕಾಗಿತ್ತು. ಇನ್ನು ಉತ್ತರವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಥಮ ದರ್ಜೆ ಸಹಾಯಕ ಸುಧಾಕರ್‌, ದ್ವೀತಿಯ ದರ್ಜೆ ಸಹಾಯಕ ಕೊಟ್ರೇಶ್‌ರನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ವಾರ್‌ ರೂಂಗೆ ಹೆಚ್ಚುವರಿ ಸಿಬ್ಬಂದಿಗಳಾಗಿ ನಿಯೋಜಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ಮನದೀಪ್‌ ರಾಯ್‌ ನಿಧನ

Published

on

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್‌ ರಾಯ್‌ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್‌ ರಾಯ್‌ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್‌ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.

ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

Published

on

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.

ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

Trending