Connect with us

ದಿನದ ಸುದ್ದಿ

ನರೇಗಾ ಜಾಬ್ ಕಾರ್ಡ ಇರುವ ಹಿರೇಬಾಗೇವಾಡಿ ಪ್ರತಿ ಕುಟುಂಬಕ್ಕೆ 2 ಸಾವಿರ: ಸಿಎಂ

Published

on

ಸುದ್ದಿದಿನ, ಬೆಳಗಾವಿ : ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದೆ. ಆದರೆ ತಮ್ಮ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಒಂದೇ ಊರಿನಲ್ಲಿ 37 ಪ್ರಕರಣಗಳು ಕಂಡುಬಂದಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಜನರು ಅನಿವಾರ್ಯವಾಗಿ ಬೀದಿಗೆ ಇಳಿಯುತ್ತಿದ್ದಾರೆ ಎಂದು ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ವಿವರಿಸಿದರು.

ಜಿಲ್ಲೆಯ ಜನಪ್ರತಿನಿಧಿಗಳ ಜತೆ ಶನಿವಾರ(ಮೇ 2) ಸಿಎಂ ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.

ಗ್ರಾಮದ 4000 ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಆದ್ದರಿಂದ ಸರ್ಕಾರದ ವತಿಯಿಂದಲೇ ಹಾಲು, ದಿನಸಿ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಕಾರ್ಮಿಕ ಇಲಾಖೆಯ ವತಿಯಿಂದ ಮಾನವೀಯತೆ ದೃಷ್ಟಿಯಿಂದ ಎಲ್ಲ ಕುಟುಂಬಗಳಿಗೆ ಕಿಟ್ ನೀಡಲು ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಈಗಾಗಲೇ ಪಡಿತರ ಮತ್ತು ಪಿಂಚಣಿ ಕೂಡ ಎರಡು ತಿಂಗಳು ಮುಂಚಿತವಾಗಿ ನೀಡಲಾಗಿದೆ. ದಾನಿಗಳಿಂದ ನೆರವು ಪಡೆದುಕೊಂಡು ಜನರಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.

ನರೇಗಾ ಜಾಬ್ ಕಾರ್ಡ ಇರುವ ಹಿರೇಬಾಗೇವಾಡಿಯ ಪ್ರತಿ ಕುಟುಂಬಕ್ಕೆ ಕಾರ್ಮಿಕ ಇಲಾಖೆಯ ವತಿಯಿಂದ ತಲಾ ಎರಡು ಸಾವಿರ ರೂಪಾಯಿ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.
ಈ ಬಗ್ಗೆ ಸ್ಥಳೀಯವಾಗಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ತಿಳಿಸಿದರು.
ಹಣದ ಬದಲು ಅಗತ್ಯವಿರುವ ಆಹಾರಧಾನ್ಯಗಳ ಕಿಟ್ ನೀಡುವ ಕುರಿತು ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ವಿಧಾನ ಸಭಾ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಶಾಸಕರಾದ ಪಿ.ರಾಜೀವ, ದುರ್ಯೋಧನ ಐಹೊಳೆ, ಅನಿಲ್ ಬೆನಕೆ, ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ದೊಡಗೌಡ್ರ, ಮಹೇಶ್ ಕುಮಠಳ್ಳಿ, ಮಹಾದೇವಪ್ಪ ಯಾದವಾಡ, ಮಹಾಂತೇಶ ಕೌಜಲಗಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಡಾ‌‌‌.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲೆಯಲ್ಲಿ 11 ಕಂಟೈನ್ಮೆಂಟ್ ಝೋನ್ ಇದ್ದು, ಅದರಲ್ಲಿ ಬೆಳಗುಂದಿಯನ್ನು ಡಿನೋಟಿಫೈ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಗರಿಷ್ಠ ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ವಿವರಿಸಿದರು.
ಹಿರೇಬಾಗೇವಾಡಿಯಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ 2000 ಕಿಟ್ ವಿತರಿಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್,ಜಿಲ್ಲೆಯ ಕೋವಿಡ್-19 ಉಸ್ತುವಾರಿ ಅಧಿಕಾರಿ ರಾಜೇಂದ್ರ ಚೋಳನ್, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. , ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ಮನದೀಪ್‌ ರಾಯ್‌ ನಿಧನ

Published

on

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್‌ ರಾಯ್‌ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್‌ ರಾಯ್‌ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್‌ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.

ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

Published

on

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.

ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

Trending