Connect with us

ದಿನದ ಸುದ್ದಿ

ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್

Published

on

ಸುದ್ದಿದಿನ,ದಾವಣಗೆರೆ: ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತು ಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.

ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಡೀ ಜಗತ್ತನ್ನು ಕಣ್ಣಿಗೆ ಕಾಣದೊಂದು ವೈರಾಣು ನಡುಗಿಸುತ್ತಿದೆ. ವಿಶ್ವದಲ್ಲಿ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಕೊರೊನಾ ನಿಯಂತ್ರಣ ಮಾಡುತ್ತಾ ಇದೆ. ದೇಶದಲ್ಲಿ ಸುಮಾರು 60 ಸಾವಿರ ಪಾಸಿಟಿವ್ ಪ್ರಕರಣಗಳಿದ್ದು, ನಮ್ಮ ರಾಜ್ಯ 13 ನೇ ಸ್ಥಾನದಲ್ಲಿ ಇದೆ.

ಮಾನ್ಯ ಮುಖ್ಯಮಂತ್ರಿಗಳು ಆರಂಭದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತಿದೆ. ಜೀವ ಉಳಿಸುವ ಜೊತೆಗೆ ಜನಜೀವನ ಸುಧಾರಣೆ ಎರಡೂ ಕೆಲಸಗಳನ್ನು ಸಮತೋಲನದಿಂದ ಸರಿದೂಗಿಸಬೇಕಿದೆ. ಕೊರೊನಾ ಕೂಡ ಇರುತ್ತದೆ. ಆದರೆ ನಾವು ಅದರಿಂದ ದೂರ ಇರಬೇಕು.

ನಾಲ್ಕು ಟಿ

ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‍ಮೆಂಟ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದ ಕೈಯಲ್ಲಿಲ್ಲ ಬದಲಾಗಿ ಎಲ್ಲ ಜನತೆ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಕೊರೊನಾ ಸಾಮಾಜಿಕ ಕಳಂಕ ಅಲ್ಲ,ಅನಗತ್ಯ ಆತಂಕ ಬೇಡ

ಕೊರೊನಾ ರೋಗಕ್ಕೆ ನಿಖರವಾದ ಚಿಕಿತ್ಸೆ ಇಲ್ಲ. ಎಷ್ಟೋ ಅಂತೆ-ಕಂತೆಗಳು ಆಗಿ ಹೋಗಿವೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿದಿನ ಹೊಸ ಮಾರ್ಗಸೂಚಿಗಳನ್ನು ನೀಡುವ ಮೂಲಕ ಕೊರೊನಾ ನಿಯಂತ್ರಣದಲ್ಲಿ ಶ್ರಮ ವಹಿಸುತ್ತಿದೆ.

ಕೊರೊನಾ ಸಾಮಾಜಿಕ ಕಳಂಕ ಅಲ್ಲ. ಯಾರಿಗೆ ಬೇಕಾದರೂ ಬರಬಹುದು. ಸೋಂಕಿನ ಬಗ್ಗೆ ಭಯ ಬೇಡ. ಯಾವ ವೈರಾಣುವೂ ಜನರನ್ನು ಸೋಲಿಸಿಲ್ಲ. ಬದಲಾಗಿ ಜನರು ವೈರಾಣುವನ್ನು ಸೋಲಿಸಿದ್ದಾರೆ. ಕೊರೊನಾವನ್ನೂ ಸೋಲಿಸಲು ಸ್ವಲ್ಪ ಸಮಯ ಬೇಕು. ಆದ ಕಾರಣ ಜನರು ಅಂತರ ಕಾಯ್ದುಕೊಳ್ಳುವ ಮೂಲಕ, ಸ್ವಚ್ಚತೆ, ಮಾಸ್ಕ್ ಧರಿಸುವ ಮೂಲಕ ಹಾಗೂ ಸರ್ಕಾರದ ನಿಯಮ, ಸೂಚನೆಗಳನ್ನು ಪಾಲಿಸುವ ಮೂಲಕ ಕೊರೊನಾ ನಿಗ್ರಹಿಸಲು ಸಹಕರಿಸಬೇಕು.

ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯ ತುಂಬಬೇಕು

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಬಂದ ಪ್ರಕರಣಗಳ ಪೈಕಿ ಈಗಾಗಲೇ ಶೇ.50 ಗುಣಮುಖರಾಗಿದ್ದಾರೆ. ಶೇ 80 ರಷ್ಟು ಜನರು ಚಿಕಿತ್ಸೆ ಇಲ್ಲದೆಯೇ ಗುಣಮುಖರಾಗುತ್ತಾರೆ. ಮರಣ ಪ್ರಮಾಣ ಶೇ.3.1 ರಷ್ಟಿದ್ದು, ಅದರಲ್ಲೂ ಹೃದಯ ತೊಂದರೆ, ಕ್ಯಾನ್ಸರ್, ಡಯಾಬಿಟಿಕ್ ಇತರೆ ತೊಂದರೆಯಿಂದ ಬಳಲುವವರು ಮರಣಕ್ಕೆ ತುತ್ತಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಜನರಲ್ಲಿ ಭಯ ಬೇಡ. ಆದರೆ ಅಂತರ ಕಾಯ್ದುಕೊಂಡು, ಸ್ವಚ್ಚತೆ ಕಾಪಾಡಿಕೊಂಡು ನಿಯಮಗಳನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜನರಿಗೆ ಸಮರ್ಪಕ ಮಾಹಿತಿ ಮತ್ತು ಧೈರ್ಯವನ್ನು ತುಂಬಬೇಕೆಂದರು.

ಆರೋಗ್ಯಸೇತು ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಜಿಲ್ಲೆಯ ಎಲ್ಲ ಜನತೆ ಆರೋಗ್ಯಸೇತು ಆ್ಯಪ್ ನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಈ ಆಪ್ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು. ಈ ಆ್ಯಪ್‍ನ ಸಹಾಯದಿಂದ ತಾವು ಸೋಂಕಿತರಿಂದ ಎಷ್ಟು ಅಂತರದಲ್ಲಿದ್ದೀರಿ ಎಂದು ತಿಳಿಯುತ್ತದೆ. ಹಾಗೂ ಸೋಂಕಿತರು ಹತ್ತಿರ ಬಂದರೆ ಸೂಚನೆ ನೀಡುತ್ತದೆಯಾದ್ದರಿಂದ ಎಲ್ಲರೂ ಈ ಆಪ್‍ನ್ನು ಡೌನ್‍ಲೋಡ್ ಮಾಡಿ ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

5 ಹೊಸ ಪ್ರಕರಣ

ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 5 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಆದರೆ ಯಾವುದೂ ಹೊಸ ಪ್ರಕರಣ ಅಲ್ಲ. ಹಿಂದಿನ ಪಾಸಿಟಿವ್ ಪ್ರಕರಣದ ಸಂಪರ್ಕ ಇರುವವರಾಗಿದ್ದಾರೆ ಎಂದರು.

ಸಿ ಜಿ ಆಸ್ಪತ್ರೆ ಕೋವಿಡ್ ಆಸ್ಪತ್ರೆ

ಜಿಲ್ಲೆಯ ಚಿಗಟೇರಿ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿದ್ದು 300 ಹಾಸಿಗೆಗಳ ವ್ಯವಸ್ಥೆ ಇದೆ. ಇತರೆ ಆರೋಗ್ಯದ ಸಮಸ್ಯೆಗಳಿಗೆ ಬಾಪೂಜಿ, ಎಸ್‍ಎಸ್ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಖಾಸಗಿ ಆಸ್ಪತ್ರೆಗಳು ಈ ವೇಳೆ ತೆರೆದು ಚಿಕಿತ್ಸೆ ನೀಡದಿದ್ದಲ್ಲಿ ಅವರ ಪರವಾನನಿ ರದ್ದುಪಡಿಸಲಾಗುವುದು ಎಂದರು.

ಮೇ 17 ರವರೆಗೆ 60 ವರ್ಷ ಮೇಲ್ಪಟ್ಟವರು, 10 ವರ್ಷದೊಳಗಿನ ಮಕ್ಕಳು ಹೊರ ಹೋಗಬಾರದು. ಹಾಗೂ ನಗರದ ಕೆಲ ಬಡಾವಣೆಗಳ ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಇರಿಸಿರುವ ಬಗ್ಗೆ ಭಯ ಬೇಡ. ಇದರಿಂದ ನಿವಾಸಿಗಳಿಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದರು.

ಅನೇಕರು ಕೊರೊನಾ ಹಿನ್ನೆಲೆಯ ಮಾನಸಿಕ ಖಿನ್ನತೆಯಂತರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೆ 104 ಸಹಾಯವಾಣಿಗೆ ಕರೆ ಮಾಡಿದಲ್ಲಿ ಆಪ್ತ ಸಮಾಲೋಚನೆ ವ್ಯವಸ್ಥೆ ಮಾಡಲಾಗಿದೆ. ಆಪ್ತಮಿತ್ರ ಮತ್ತು ಟೆಲಿ ಐಸಿಯು ವ್ಯವಸ್ಥೆಯನ್ನೂ ರಾಜ್ಯ ಮಟ್ಟದಲ್ಲಿ ಪರಿಣಿತ ತಜ್ಞರಿಂದ ಮಾಡಲಾಗಿದ್ದು, ಸರ್ಕಾರ ಕೊರೊನಾ ನಿಗ್ರಹ ಮತ್ತು ಜನರ ಜೀವ ಉಳಿಸಲು ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಆನರೂ ಸಹಕರಿಸಬೇಕು. ಶುಚಿತ್ವ, ಅಂತರ, ಮಾಸ್ಕ್ ಬಳಸಬೇಕು. ಎಲ್ಲರಿಗೂ ಎನ್ 95, ಸರ್ಜಿಕಲ್ ಮಾಸ್ಕ್ ಬೇಡ. ಹತ್ತಿಯ ಮರು ಬಳಸಬಹುದಾದ ಮಾಸ್ಕ್ ಧರಿಸಬಹುದು ಎಂದರು.

ವೈದ್ಯರು ಮತ್ತು ಹೌಸ್‍ಸರ್ಜನ್‍ಗಳ ಸೇವೆ ದೊಡ್ಡದಾಗಿದ್ದು, ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿರುವ ಹೌಸ್‍ಸರ್ಜನ್ ಮತ್ತು ಪಿಜಿ ವಿದ್ಯಾರ್ಥಿಗಳಿಗೆ 18 ತಿಂಗಳಿಂದ ಶಿಷ್ಯ ಭತ್ಯೆ ಬಂದಿಲ್ಲವೆಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಭತ್ಯೆ ಪಾವತಿಯಾದ ಬಗ್ಗೆ ಆಡಿಟ್ ಆಕ್ಷೇಪಣೆ ಹಿನ್ನೆಲೆ ಭತ್ಯೆ ನಿಲ್ಲಿಸಲಾಗಿದೆ. ಈ ಬಗ್ಗೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ, ಹರಿಹರ ಶಾಸಕರಾದ ರಾಮಪ್ಪ, ವಿಧಾನಪರಿಷತ್ ಶಾಸಕ ನಾರಾಯಣಸ್ವಾಮಿ ಮಾತನಾಡಿದರು. ಶಾಸಕ ಪ್ರೊ.ಲಿಂಗಣ್ಣ, ಜಿ ಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಆಯುಕ್ತ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ಮನದೀಪ್‌ ರಾಯ್‌ ನಿಧನ

Published

on

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್‌ ರಾಯ್‌ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್‌ ರಾಯ್‌ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್‌ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.

ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

Published

on

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.

ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

Trending