Connect with us

ದಿನದ ಸುದ್ದಿ

ಪರೀಕ್ಷೆ ಇಲ್ಲದೆ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪಾಸ್..!

Published

on

ಸುದ್ದಿದಿನ, ತೆಲಂಗಾಣ:ಯಾವುದೇ ಪರೀಕ್ಷೆ ಇಲ್ಲದೆ 10 ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ. ಕೊರೋನಾ ವೈರಸ್ ಸೋಂಕು ಹರಡುತ್ತಿರುವುದರಿಂದ ಪರೀಕ್ಷೆಯನ್ನು ನಡೆಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಜಯಪುರ | ಎಸ್ಎಸ್ಎಲ್ ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಅಮಿತ್ ಮಾದರ ಅವರಿಗೆ ಸನ್ಮಾನ

Published

on

ಸುದ್ದಿದಿನ, ವಿಜಯಪುರ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಮತ್ತು ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಅಮಿತ್ ಮಾದರ, ಯಲ್ಲಾಲಿಂಗ ಸೊಲಿಭೂವಿ, ಶ್ರೀಯಾ ದೇಸಾಯಿ, ಐಶ್ವರ್ಯ ಕಾನಸೆ, ಶೀವಲೀಲಾ ಕೆ, ಸ್ವಾತಿ ಜೆ ಇವರನ್ನು ದಲಿತ ವಿದ್ಯಾರ್ಥಿ ಪರಿಷತ್ ಉತ್ತರ ಕರ್ನಾಟಕದ ಕಛೇರಿಯಲ್ಲಿ ಸಿಹಿ ಹಂಚಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುಸ್ತಕವನ್ನು ನೀಡುವ ಮೂಲಕ ಗೌರವಿಸಲಾಯಿತು.

ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಅಮಿತ್ ಮಾದರ ಹಾಗೂ ವಿಧ್ಯಾರ್ಥಿಗಳು ದಲಿತ ವಿದ್ಯಾರ್ಥಿ ಪರಿಷತ್ ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಈ ವೇಳೆ ಪರಿಷತ್ ನ ರಾಜ್ಯಾಧ್ಯಕ್ಷರಾದ ಶ್ರೀನಾಥ್ ಪೂಜಾರಿ ಮಾತನಾಡಿ, ಪರಿಷತ್ ಮೂಲಕ ಎಲ್ಲ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ನೆರವು ನೀಡಲಾಗುವುದು ಎಂದು ಹೇಳಿದರು. ಹಾಗೇಯೇ ವಿದ್ಯಾರ್ಥಿಗಳಿಗೆ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಡಾ.ಬಿ.ಆರ್ ಅಂಬೇಡ್ಕರ್ ಅವರ ಸ್ಪರ್ಧಾತ್ಮಕ ಪರೀಕ್ಷೆ ಪೋಸ್ಟರ್ ಅನ್ನು ನೀಡಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಲಾಯಿತು.

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯಾಧ್ಯಕ್ಷರಾದ ಶ್ರೀನಾಥ್ ಪೂಜಾರಿ, ರಾಜ್ಯ ಸಂಚಾಲಕರಾದ ಬಾಲಾಜಿ ಎಂ ಕಾಂಬಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಷಯಕುಮಾರ ಅಜಮನಿ, ಮುಖಂಡರಾದ ಕಾಶಿನಾಥ ಕಟ್ಟಿಮನಿ, ವಿಧ್ಯಾರ್ಥಿಗಳ ಪಾಲಕರು ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದ್ವಿತೀಯ ಸ್ಥಾನದ ಗರಿಮೆ : ಜಿಲ್ಲಾಧಿಕಾರಿ ಶ್ಲಾಘನೆ

Published

on

ಸುದ್ದಿದಿನ,ಚಿಕ್ಕಬಳ್ಳಾಪುರ : 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95.23 ರಷ್ಟು ಫಲಿತಾಂಶ ಪಡೆಯುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡವಾರು ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನ ಗಳಿಸಿದ ಗರಿಮೆಗೆ ಭಾಜನವಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶದ ಸಾಧನೆ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು. ಈ ಬಾರಿ ಜಿಲ್ಲೆಯಲ್ಲಿ 15,817 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 15,063 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ರಾಜ್ಯ ಮಟ್ಟದಲ್ಲಿ “ಎ” ಗ್ರೇಡ್ ಪಡೆದಿದೆ. 5 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆದಿದ್ದಾರೆ. ಉತ್ತೀರ್ಣರಾದ 15,063 ವಿದ್ಯಾರ್ಥಿಗಳ ಪೈಕಿ 7,572 ಬಾಲಕಿಯರು ಉತ್ತೀರ್ಣರಾಗುವ ಮೂಲಕ ಮೇಲುಗೈ ಸಾಧಿಸಿ, ಶೇ.96.48ರಷ್ಟು ಫಲಿತಾಂಶ ಗಳಿಸಿದ್ದಾರೆ. 7,491 ಬಾಲಕರು ಉತ್ತೀರ್ಣರಾಗಿದ್ದು, ಶೇ.94 ರಷ್ಟು ಫಲಿತಾಂಶ ಗಳಿಸಿದ್ದಾರೆ. ಸರ್ಕಾರಿ ಶಾಲೆಗಳು ಒಟ್ಟು ಶೇ.93.77, ಅನುದಾನಿತ ಶಾಲೆಗಳು ಶೇ.93.68 ಮತ್ತು ಅನುದಾನರಹಿತ ಶಾಲೆಗಳು ಶೇ.97.95ರಷ್ಟು ಫಲಿತಾಂಶವನ್ನು ಪಡೆದಿವೆ ಎಂದು ತಿಳಿಸಿದರು.

ಕೊಂಚ ಹಿನ್ನಡೆಯಿಂದ ಕೈ ತಪ್ಪಿದ 1ನೇ ಸ್ಥಾನ

2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿ ಮೊಟ್ಟ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಟ್ಟಿಗೆ ಐತಿಹಾಸಿಕ ದಾಖಲೆಯಾಗಿತ್ತು. 2020-21ನೇ ಸಾಲಿನಲ್ಲಿ 625 ಅಂಕಗಳಿಗೆ 625 ಅಂಕಗಳನ್ನೂ ಪಡೆದ ರಾಜ್ಯದ 157 ವಿದ್ಯಾರ್ಥಿಗಳ ಪೈಕಿ ಜಿಲ್ಲೆಯ 30 ವಿದ್ಯಾರ್ಥಿಗಳು ಸ್ಥಾನ ಕಾಯ್ದುಕೊಂಡು ಇಡೀ ರಾಜ್ಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಜಿಲ್ಲೆಯಾಗಿ ಹೊರಹೊಮ್ಮಿತ್ತು.

ರಾಜ್ಯಮಟ್ಟದಲ್ಲಿ ಕಳೆದ ಎರಡು ಬಾರಿಯು ಅತ್ಯುತ್ತಮ ಸಾಧನೆ ಮಾಡಿ ಹೊಸ ದಾಖಲೆಯನ್ನು ಬರೆಯುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿಯ ಮುನ್ನೋಟಕ್ಕೆ ದಿಕ್ಸೂಚಿಯಾಗಿತ್ತು. ಈ ಬಾರಿಯೂ ಪ್ರಥಮ ಸ್ಥಾನವನ್ನು ಪಡೆಯುವಲ್ಲಿ ಕೊಂಚ ಪ್ರಮಾಣ (ಶೇ.0.37) ದಲ್ಲಿ ಹಿನ್ನಡೆಯಾಗಿ ಕೈತಪ್ಪಿದ್ದರೂ ಸಹ ದ್ವಿತೀಯ ಸ್ಥಾನಕ್ಕೆ ಪಾತ್ರವಾಗಿರುವುದು ಹರ್ಷ ಉಂಟು ಮಾಡಿದೆ ಎಂದರು.

ಶುಭ ಹಾರೈಕೆ

ಕಳೆದ ಮೂರು ವರ್ಷಗಳಿಂದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಮಹತ್ತರ ಬದಲಾವಣೆಯಾಗಿರುವುದಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಜಿಲ್ಲೆಯ ಸಮಸ್ತ ಜನತೆಗೆ, ಜನಪ್ರತಿನಿಧಿಗಳಿಗೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೃತಜ್ಞತೆ ತಿಳಿಸಿದರು ಹಾಗೂ ಉತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವತ್ತ ಗಮನ ಹರಿಸಿ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದು ಸಾಧಕ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಶುಭ ಹಾರೈಸಿದ್ದಾರೆ.

ತಾಲ್ಲೂಕುವಾರು ಫಲಿತಾಂಶ

ಗುಡಿಬಂಡೆ ತಾಲೂಕು ಶೇ.99.20 ಫಲಿತಾಂಶ ಗಳಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಶಿಡ್ಲಘಟ್ಟ ತಾಲೂಕು ಶೇ.97.06 ರಷ್ಟು ದ್ವಿತೀಯ ಸ್ಥಾನ ಪಡೆದುಕೊಂಡಿದೆ ನಂತರದ ಸ್ಥಾನಗಳನ್ನು ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಚಿಂತಾಮಣಿ ಮತ್ತು ಗೌರಿಬಿದನೂರು ತಾಲೂಕುಗಳು ಪಡೆದುಕೊಂಡಿವೆ.

ಜಿಲ್ಲಾಡಳಿತ ಹಲವು ರಚನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಕಾಲ ಕಾಲಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಿತ್ತು. ಅಲ್ಲದೇ ಜಿಲ್ಲೆಯ ಎಲ್ಲಾ ಶಿಕ್ಷಕರಿಗೂ ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಂಡಿತ್ತು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆಯೊಂದಿಗೆ ಆತ್ಮಸ್ಥೈರ್ಯವನ್ನೂ ತುಂಬುವ ಕೆಲಸವನ್ನು ಆಗಾಗ್ಗೆ ಶಿಕ್ಷಕರು ಮತ್ತು ಅಧಿಕಾರಿಗಳ ಮುಖಾಂತರ ಮಾಡಲಾಗಿತ್ತು.

ಮಕ್ಕಳ ಜೊತೆಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು ಎಲ್ಲಿಯೂ ಕಲಿಕಾ ಪ್ರಕ್ರಿಯೆ ಮತ್ತು ಪರೀಕ್ಷಾ ಸಿದ್ದತೆಗಳು ಕಡಿತಗೊಳ್ಳದಂತೆ ನಿಗಾ ವಹಿಸಲಾಗಿತ್ತು. ಗುಣಾತ್ಮಕ ಬೋಧನೆ, ವಾರದ ಮತ್ತು ಮಾಸಿಕ ಪರೀಕ್ಷೆ, ಬಹು ಆಯ್ಕೆ ಪ್ರಶ್ನೆಗಳುಳ್ಳ ಮಾದರಿ ಪರೀಕ್ಷೆ ಆಯೋಜನೆ, ಪಠ್ಯಾಧಾರಿತ ರಸಪ್ರಶ್ನೆ ಸ್ಪರ್ಧೆಗಳು ಮತ್ತು ಪೂರ್ವ ಸಿದ್ದತಾ ಪರೀಕ್ಷೆಗಳು ಹಾಗೂ ವಿಶೇಷ ಆಸಕ್ತಿವಹಿಸಿ ಜಿಲ್ಲಾಡಳಿತವೇ ಸರಳೀಕರಿಸಿ ಸಿದ್ಧಪಡಿಸಿದ ಪ್ರಶ್ನೋತ್ತರ ಸಾಮಗ್ರಿ (ಸ್ಟಡಿ ಮೆಟೇರಿಯಲ್) ವಿತರಣೆ ಸೇರಿದಂತೆ ಈ ಎಲ್ಲಾ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ನೀಡಿದ ಪ್ರೋತ್ಸಾಹದ ಫಲವಾಗಿ ಈ ಬಾರಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಫಲಿತಾಂಶ ಜಿಲ್ಲೆಗೆ ಬರಲು ಸಾಧ್ಯವಾಗಿರುವುದು ಹೆಮ್ಮೆಯ ವಿಚಾರ ಎಂದರು.

ಪರೀಕ್ಷೆ ಬರೆದ ಜಿಲ್ಲೆಯ ವಿದ್ಯಾರ್ಥಿಗಳ ಪೈಕಿ 3,506 ವಿದ್ಯಾರ್ಥಿಗಳು ಎ.ಪ್ಲಸ್ ಗ್ರೇಡ್, 4,638 ವಿದ್ಯಾರ್ಥಿಗಳು ‘ಎ’ಗ್ರೇಡ್, 3,589 ವಿದ್ಯಾರ್ಥಿಗಳು ‘ಬಿ’ ಪ್ಲಸ್ ಗ್ರೇಡ್, 2,223 ವಿದ್ಯಾರ್ಥಿಗಳು ‘ಬಿ’ ಗ್ರೇಡ್, 996 ವಿದ್ಯಾರ್ಥಿಗಳು ‘ಸಿ’ ಪ್ಲಸ್ ಗ್ರೇಡ್ ಹಾಗೂ 111 ವಿದ್ಯಾರ್ಥಿಗಳು ‘ಸಿ’ ಗ್ರೇಡ್ ಪಡೆದಿರುತ್ತಾರೆ. ಒಟ್ಟಾರೆಯಾಗಿ ಜಿಲ್ಲೆಗೆ ಶೇ.95.23 ರಷ್ಟು ಫಲಿತಾಂಶ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

11 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು : ಸಚಿವ ಬಿ.ಸಿ.ಪಾಟೀಲ್

Published

on

ಸುದ್ದಿದಿನ, ದಾವಣಗೆರೆ : ದೇಶದ ರೈತರ ಅನುಕೂಲಕ್ಕಾಗಿ ಕೇಂದ್ರ, ರಸಗೊಬ್ಬರಗಳಿಗೆ 2ಲಕ್ಷದ 39 ಸಾವಿರ ಕೋಟಿ ರೂಪಾಯಿ ಸಹಾಯಧನ ನೀಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ, ಬೆಳೆಗಳನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಚೀಲ ಡಿಎಪಿ ಬೆಲೆ 3 ಸಾವಿರದ 851ರೂಪಾಯಿ ಇದ್ದು, ರೈತರಿಗೆ ಕೇವಲ 1 ಸಾವಿರದ 361 ರೂಪಾಯಿಗೆ ಮಾರಾಟ ಮಾಡುವ ಮೂಲಕ 2ಸಾವಿರದ 501ರೂಪಾಯಿ ಸಹಾಯಧನ ನೀಡುತ್ತಿದೆ ಎಂದರು.

ಚಿತ್ರದುರ್ಗದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತೊಂದು ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 11 ಲಕ್ಷಕ್ಕೂ ಹೆಚ್ಚು ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ 240ಹೆಕ್ಟೇರ್ ತೋಟಗಾರಿಕೆ ಬೆಳೆ 40 ಹೆಕ್ಟೇರ್ ಕೃಷಿಬೆಳೆಗೆ ಹಾನಿಯಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending