ದಿನದ ಸುದ್ದಿ
ಅಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್ಗಳ ಮೂಲಕ ಸಾಲ ನೀಡಲಾಗುವುದು: ಸಚಿವ ಎಸ್.ಟಿ ಸೋಮಶೇಖರ್

ಸುದ್ದಿದಿನ,ಕೋಲಾರ: ಕೊರೋನಾ ಸಂದರ್ಭದಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ವಿತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ತಿಳಿಸಿದರು.
ಮಂಗಳವಾರ ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಣೆ ಮಾಡಿ ಅವರು ಮಾತನಾಡಿದರು.
ಆಶಾ ಕಾರ್ಯಕರ್ತೆಯರು ಕರೋನಾ ಸಂದರ್ಭದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು ಇದನ್ನು ಗುರುತಿಸಿದ ಮಾನ್ಯ ಮುಖ್ಯ ಮಂತ್ರಿಗಳು ಆಶಾಕಾರ್ಯಕರ್ತೆಯರಿಗೆ 3000 ರೂಗಳ ಪ್ರೋತ್ಸಾಹಧನ ಫೋಷಿಸಿದ್ದಾರೆ. ಸಹಕಾರ ಇಲಾಖೆಯಿಂದ ಈ ಸಂಬಂಧ ಆದೇಶ ಹೊರಡಿಸಿದ್ದು ಲಾಭದಲ್ಲಿ ಇರುವ ಸಹಕಾರಿ ಸಂಸ್ಥೆಗಳಿಂದ ಹಣ ಕ್ರೋಢೀಕರಿಸಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಸಹಕಾರ ಇಲಾಖೆಯ ಮೂಲಕ 2 ಲಕ್ಷ 80 ಸಾವಿರ ರೈತರಿಗೆ 13 ಸಾವಿರ ಕೋಟಿ ಸಾಲವನ್ನು ವಿತರಿಸಲಾಗಿದೆ. ಸಾಲವನ್ನು ಡಿಸಿಸಿ ಬ್ಯಾಂಕ್ಗಳು ಹಾಗೂ ಸಹಕಾರಿ ಬ್ಯಾಂಕುಗಳ ಮೂಲಕ ವಿತರಿಸುತ್ತಿದ್ದು ಅರ್ಹರಿಗೆ ಸಾಲ ನೀಡುವಂತೆ ಸೂಚಿಸಲಾಗಿದೆ. ಕೆಲವು ಬ್ಯಾಂಕ್ಗಳ ಬಗ್ಗೆ ದೂರುಗಳಿದ್ದು ಪರಿಶೀಲಿಸಲಾಗುವುದು. ಹೊರ ರಾಜ್ಯಗಳಾದ ಮಹಾರಾಷ್ಟ್ರ, ತಮಿಳುನಾಡಿನಿಂದ ಬಂದ ಹೆಚ್ಚಿನವರಿಗೆ ಕರೋನಾ ಕಂಡು ಬರುತ್ತಿದೆ. ಲಾಕ್ಡೌನ್ ಸಡಿಲ ಮಾಡಿದ್ದು ಜನರು ಎಚ್ಚರಿಕೆಯಿಂದ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ಮಾತನಾಡಿ, ರಾಜ್ಯದ 40,500 ಆಶಾ ಕಾರ್ಯಕರ್ತೆಯರಿಗೆ ತಲಾ 3000 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆಶಾಕಾರ್ಯಕರ್ತೆಯರು ಕಲಿಯುಗದ ದೇವತೆಗಳಿದ್ದ ಹಾಗೆ. ಜಿಲ್ಲೆಯು ಗಡಿ ಭಾಗದಲ್ಲಿ ಇದ್ದರು ಕರೋನಾ ನಿಯಂತ್ರಣದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್ ಮುನಿಸ್ವಾಮಿ ಅವರು ಮಾತನಾಡಿ, ಕೋವಿಡ್ 19 ಹಿನ್ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಶಾ ಕಾರ್ಯಕರ್ತರ ಸೇವೆಯನ್ನು ಮನಗಂಡು ರಾಜ್ಯ ಸರ್ಕಾರವು ಚೆಕ್ ವಿತರಣೆ ಮಾಡುತ್ತಿದೆ. ಕರೋನ ಹಿನ್ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಶಾ ಕಾರ್ಯಕತೆರ್ಯರ ಆರೋಗ್ಯ ಮತ್ತು ಯೋಗಕ್ಷೇಮವನ್ನು ರಾಜ್ಯ ಸರ್ಕಾರವೇ ನೋಡಿಕೊಳ್ಳುತ್ತದೆ. ಜಿಲ್ಲಾಡಳಿತ ಕಾರ್ಯವೈಖರಿಯಿಂದ 48 ದಿನಗಳ ಕಾಲ ಕೋಲಾರ ಜಿಲ್ಲೆಯು ಗ್ರೀನ್ ಜೋನ್ನಲ್ಲಿತ್ತು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್ವೆಂಕಟೇಶ್ ಅವರು ಮಾತನಾಡಿ, ಸೀಲ್ಡೌನ್ ಇರುವ ಪ್ರದೇಶದಲ್ಲೂ ಧೈರ್ಯದಿಂದ ಕೆಲಸ ಮಾಡಿ ಅರಿವು ಮೂಡಿಸುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ 3000 ಪ್ರೋತ್ಸಾಹ ಧನ ನೀಡುತ್ತಿರುವುದು ಶ್ಲಾಘನೀಯ. ಜಿಲ್ಲೆಯಲ್ಲಿ ಇರುವ ಕಲಾವಿದರು, ಆಶಾ ಕಾರ್ಯಕರ್ತೆಯರು ಹಾಗೂ ಕರೋನಾ ವಾರಿಯರ್ಸ್ಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಸಿ. ಸತ್ಯಭಾಮ ಅವರು ಮಾತನಾಡಿ, ಕೋಲಾರ ಜಿಲ್ಲೆಯು 48 ದಿನಗಳ ಕಾಲ ಯಾವುದೇ ಪ್ರಕರಣವಿಲ್ಲದೆ ಹಸಿರು ವಲಯದಲ್ಲಿತ್ತು, ಲಾಕ್ಡೌನ್ ಸಡಿಲಿಕೆಯಾದ ನಂತರ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದರವರಿಗೆ ಕರೋನಾ ಕಂಡುಬಂದಿದೆ.
ಲಾಕ್ಡೌನ್ ಅವಧಿಯಲ್ಲೂ ಜಿಲ್ಲೆಯ ರೈತರು ತಮ್ಮ ಉತ್ಪಾದನೆಯನ್ನು ಮಾರಾಟ ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೂ 30 ಪಾಸಿಟೀವ್ ಪ್ರಕರಣಗಳು ಕಂಡು ಬಂದಿದ್ದು 18 ಪ್ರಕರಣಗಳು ಗುಣಮುಖರಾಗಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿ ಒಂದು ತಂಡವಾಗಿ ಕಾರ್ಯನಿರ್ವಹಿಸಿ ಕರೋನಾ ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬಂದಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಗ ಇ-ರೈಲಿನ ಕನಸು ಸಹ ನನಸಾಗಲಿದೆ..!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಇ-ಬೈಕ್, ಇ-ಕಾರ್ ಮತ್ತು ಇ-ಬಸ್ ನಂತರ, ಈಗ ಇ-ರೈಲಿನ ಕನಸು ಸಹ ನನಸಾಗಲಿದೆ. ಪಶ್ಚಿಮ ಮಧ್ಯ ರೈಲ್ವೆಯು ನವದೂತ್ ಎಂಬ ಬ್ಯಾಟರಿ ಚಾಲಿತ ಡ್ಯುಯಲ್ ಮೋಡ್ ಲೋಕೋಮೋಟಿವ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಎಂಜಿನ್ ಎರಡೂ ಮೋಡ್ ಗಳಲ್ಲಿ ಅಂದರೆ ಬ್ಯಾಟರಿ ಮತ್ತು ವಿದ್ಯುಚ್ಛಕ್ತಿಯಲ್ಲಿ ಚಲಿಸುತ್ತದೆ. ಪ್ರಸ್ತುತ, ಇದನ್ನು ಪ್ರಾಯೋಗಿಕ ಆಧಾರದ ಮೇಲೆ ಜಬಲ್ಪುರ, ಮುದ್ವಾರ ಮತ್ತು ಇತರ ನಿಲ್ದಾಣಗಳಲ್ಲಿ ರೈಲುಗಳನ್ನು ಓಡಿಸುವಾಗ ಬಳಸಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ : ಸಿಎಂ ಬೊಮ್ಮಾಯಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು ರಾಜಕೀಯ ಅನುಭವ ಹೊಂದಿರುವ ಹೊರಟ್ಟಿ ಅವರು, ಪಕ್ಷಕ್ಕೆ ಬಂದಿರುವುದರಿಂದ ಪಕ್ಷದ ಬಲ, ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿ ತುಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಮಳೆಯಿಂದ ಹಾನಿಗೊಳಗಾದ ಕೆಲಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಘೋಷಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್! ಗುರುವಾರ- ರಾಶಿ ಭವಿಷ್ಯ ಮೇ-12,2022
-
ದಿನದ ಸುದ್ದಿ7 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ರಾಜಕೀಯ6 days ago
ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ರಾಜಕೀಯ6 days ago
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ; ಕಾನೂನು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರದ ತೀರ್ಮಾನ : ಸಚಿವ ಜೆ.ಸಿ. ಮಾದುಸ್ವಾಮಿ
-
ದಿನದ ಸುದ್ದಿ5 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ನಿತ್ಯ ಭವಿಷ್ಯ4 days ago
ಇಂದಿನಿಂದಲೇ ಈ ರಾಶಿಗಳಿಗೆ ಧನ ಲಾಭ, ಸುಖ ಸಂಪತ್ತು ಪ್ರಾಪ್ತಿ! ಶನಿವಾರ ರಾಶಿ ಭವಿಷ್ಯ-ಮೇ-14,2022
-
ನಿತ್ಯ ಭವಿಷ್ಯ5 days ago
ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ! ಶುಕ್ರವಾರ ರಾಶಿ ಭವಿಷ್ಯ-ಮೇ-13,2022