ದಿನದ ಸುದ್ದಿ
ಬ್ರೇಕಿಂಗ್ | ಹಿಮಾಚಲ ಪ್ರದೇಶ : ಬಿಜೆಪಿ ಸಂಸದ ಶರ್ಮಾ ನೇಣು ಬಿಗಿದು ಆತ್ಮಹತ್ಯೆ…!

ಸುದ್ದಿದಿನ, ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಶರ್ಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇನ್ನು, ಸಂಸದ ಶರ್ಮಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಮನೆಗೆ ತೆರಳಿದಾಗ ಒಳಗಿನಿಂದ ಬಾಗಿಲು ಮುಚ್ಚಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ರಾಮ್ ಸ್ವರೂಪ್ ಶರ್ಮಾ ಅವರನ್ನು ಪೊಲೀಸರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು ಆದರೆ ವೈದ್ಯರು ದಾರಿಮಧ್ಯೆ ಕೊನೆಯುಸಿರೆಳೆದರು ಎಂದು ಹೇಳಿದ್ದಾರೆ. ನಂತರ ಶರ್ಮಾ ಅವರ ಶವವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಬಿಜೆಪಿ ಮುಖಂಡ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಘಟನಾ ಸ್ಥಳ ತಲುಪಿದ್ದಾರೆ.
ರಾಮ್ ಸ್ವರೂಪ್ ಶರ್ಮಾ ಅವರು ಚುನಾವಣಾ ರಾಜಕೀಯಕ್ಕೆ ಸೇರುವ ಮೊದಲು ಆರ್ಎಸ್ಎಸ್ನ ಸಕ್ರಿಯ ಸದಸ್ಯರಾಗಿದ್ದರು. ಅವರು 2014 ಮತ್ತು 2019 ರಲ್ಲಿ ಎರಡು ಬಾರಿ ಮಂಡಿ ಲೋಕಸಭಾ ಸ್ಥಾನದಿಂದ ಗೆದ್ದಿದ್ದರು. ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದರು. ಅವರಿಗೆ ಪತ್ನಿ ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಈ ನಡುವದ ಬಿಜೆಪಿ ಇಂದು ನಿಗದಿಪಡಿಸಿದ್ದ ಸಂಸದೀಯ ಚಟುವಟಿಕೆಗಳನ್ನು ರದ್ದುಗೊಳಿಸಿದೆ.
Shiv Sena MP Vinayak Raut has given Adjournment motion Notice in Lok Sabha, demanding an inquiry into the death of BJP MP Ram Swaroop Sharma
— ANI (@ANI) March 17, 2021
Mandi BJP MP Ram Swaroop Sharma dies by suicide at 62 https://t.co/VK1M3DtjCL pic.twitter.com/9QfmlZ31Qb
— Newsd (@GetNewsd) March 17, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೈಸೂರು ವಿ.ವಿಯಲ್ಲಿ ಬುದ್ಧಪೀಠ ಸ್ಥಾಪನೆ : ಜಾಗ ನೀಡುವ ಭರವಸೆ ಕೊಟ್ಟ ಕುಲಪತಿ

ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಬುದ್ಧಪೀಠ ಸ್ಥಾಪಿಸಬೇಕೆಂಬ ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ.
ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿ ಸೋಮವಾರ ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ : ಸಚಿವ ಜೆ.ಸಿ ಮಾಧುಸ್ವಾಮಿ

ಸುದ್ದಿದಿನ, ಚಿಕ್ಕಮಗಳೂರು : ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಭಕ್ತನಕಟ್ಟೆ ಗ್ರಾಮದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದಲ್ಲಿ ಮಳೆಯಾಧಾರಿತ ಬೆಳೆ ಬೆಳೆಯುವ ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಗಾಧ ನೀರಿನ ಸಂಪತ್ತು ಇದ್ದರೂ ಸದ್ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆ ಸಿದ್ಧಪಡಿಸುತ್ತಿದೆ. ತಾವು ಮಂತ್ರಿಯಾದ ನಂತರ ಸಣ್ಣ ನೀರಾವರಿ ಇಲಾಖೆಗೆ 8 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯಾದ್ಯಂತ ಶಾಲೆಗಳು ಆರಂಭ : ಪಠ್ಯ, ಸಮವಸ್ತ್ರ ಪೂರೈಕೆಗೆ ಕ್ರಮ : ಸಿಎಂ ಬೊಮ್ಮಾಯಿ

ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಬಹಳಮುಖ್ಯ ಒಳ್ಳೆಯ ವಾತಾವರಣದಲ್ಲಿ ಶಾಲೆಗಳು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಈ ನಡುವೆ ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಶಾಲಾ ಆವರಣದಲ್ಲಿ ಚಿಣ್ಣರ ಕಲರವ ಕೇಳಿ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು, ಸಂಚಲನ ಮೂಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನೆರವೇರಿತು. ಊರಿನ ಗಣ್ಯರು, ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತಿಸಿದರು.
ಜಿಲ್ಲೆಯ ಪುಂಜಾಲಕಟ್ಟೆ ಶಾಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಲಾ ಆರಂಭಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳೊಂದಿಗೆ ಸಿಂಗರಿಸಲಾಗಿತ್ತು. ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಪ್ರಾಥಮಿಕ ಮತು ಪ್ರೌಢಶಾಲೆಗಳು ಇಂದು ಆರಂಭವಾಗಿವೆ. ಮಕ್ಕಳ ಸ್ವಾಗತಕ್ಕೆ ಶಾಲೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಶಾಲಾ ಅಂಗಳಕ್ಕೆ ಬರುತ್ತಿದ್ದಂತೆಯೆ ಶಿಕ್ಷಕರು ಸಿಹಿತಿನಿಸು ಮತ್ತು ಹೂಗಳನ್ನು ನೀಡಿ ಸ್ವಾಗತಿಸಿದರು.
ಜಿಲ್ಲೆಯಲ್ಲಿ 587 ಕಿರಿಯ ಪ್ರಾಥಮಿಕ, 947 ಹಿರಿಯ ಪ್ರಾಥಮಿಕ ಮತ್ತು 503 ಪ್ರೌಢಶಾಲೆಗಳು ಸೇರಿದಂತೆ ಒಟ್ಟಾರೆ 2ಸಾವಿರದ 960 ಶಾಲೆಗಳು ಆರಂಭಗೊಂಡಿವೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ತಿಪ್ಪೇಶಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲೂ ಶಾಲೆಗಳ ಆವರಣದಲ್ಲಿ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. 2 ವರ್ಷಗಳ ನಂತರ ಶಾಲೆ ಪುನಾರಂಭಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು ನಗರದ ಬಸವನಹಳ್ಳಿ ಬಾಲಕಿಯರ ಶಾಲೆಯಲ್ಲಿ ಶಿಕ್ಷಣ ಅಧಿಕಾರಿಗಳು ಶಾಲಾ ಸಿಬ್ಬಂದಿ ಮಕ್ಕಳಿಗೆ ಹೂಗಳನ್ನು ನೀಡಿ ಸ್ವಾಗತಿಸಿದರು.
ಗದಗ ಜಿಲ್ಲೆಯಲ್ಲಿ ಇಂದಿನಿಂದ 1ಸಾವಿರದ 381ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭಗೊಂಡಿವೆ. ಲಕ್ಕುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಲಾ ಮಕ್ಕಳಿಗೆ ಸಿಹಿವಿತರಿಸಿ, ಹೂ ನೀಡುವ ಮೂಲಕ ಶಾಲೆಯ ಆರಂಭಕ್ಕೆ ಚಾಲನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ7 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ7 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ7 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ6 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ
-
ದಿನದ ಸುದ್ದಿ6 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ದಿನದ ಸುದ್ದಿ6 days ago
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ7 days ago
ಅತ್ಯುನ್ನತ ಸಾಧನೆ ಮೆರೆದ ಸೇನಾಪಡೆ ಅಧಿಕಾರಿಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಶೌರ್ಯ ಪದಕ ಪ್ರದಾನ