ದಿನದ ಸುದ್ದಿ
ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

ಸುದ್ದಿದಿನ, ಬೆಂಗಳೂರು :400 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ ಎಂದು ಅವರ ಕಚೇರಿ ಗುರುವಾರ ತಿಳಿಸಿದೆ.
ಇದು ಖರೀದಿಯ ಮೊದಲ ಹಂತವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದ್ದು,”ಇದನ್ನು 18 ರಿಂದ 44 ವರ್ಷದೊಳಗಿನ ವ್ಯಕ್ತಿಗಳಿಗೆ ಲಸಿಕೆ ಹಾಕಲು ಬಳಸಲಾಗುತ್ತದೆ” ಎಂದು ಅದು ಹೇಳಿದೆ. ಇಲ್ಲಿಯವರೆಗೆ, ಕರ್ನಾಟಕವು 45 ವರ್ಷಕ್ಕಿಂತ ಮೇಲ್ಪಟ್ಟ 76.41 ಲಕ್ಷ ಜನರಿಗೆ ಲಸಿಕೆ ನೀಡಿದೆ.
ಇದನ್ನೂ ಓದಿ | ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿಪೂರ್ಣಗೊಳಿಸಬೇಕು : ಎಂಪಿ ಜಿ.ಎಂ. ಸಿದ್ದೇಶ್ವರ
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸ್ಥಳೀಯವಾಗಿ ತಯಾರಿಸಿದ ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ -19 ಲಸಿಕೆಯನ್ನು ಕೋವಿಶೀಲ್ಡ್ ಖರೀದಿಸಲು ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆ.
18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರನ್ನು ಒಳಗೊಳ್ಳುವ ಮೂರನೇ ಹಂತದ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುತ್ತದೆ. ಕೆಲವು ಬಿಜೆಪಿ ಆಡಳಿತದ ರಾಜ್ಯಗಳು ಎಲ್ಲಾ ವಯಸ್ಕರಿಗೆ ಉಚಿತವಾಗಿ ಲಸಿಕೆಗಳನ್ನು ನೀಡುವುದಾಗಿ ಘೋಷಿಸಿವೆ. ಈ ಕುರಿತು ಕರ್ನಾಟಕ ಇನ್ನೂ ಕರೆ ನೀಡಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇ.ಎನ್ಟಿಸಿ, ಇ.ನ್ಯಾಕ್ ಪ್ರಸ್ತಾವನೆ ಸಲ್ಲಿಸಲು ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಂದ 2013-14 ಮತ್ತು 2014-15ನೇ ಸಾಲಿನ ಹಾಗೂ ಹಿಂದಿನ ಸಾಲಿನಲ್ಲಿ ಪ್ರವೇಶ ಪಡೆದು ತರಬೇತಿ ಪಡೆದು ಉತ್ತೀರ್ಣರಾದ e-NTC ಹಾಗೂ ಮೇ.2018ರ ಪರೀಕ್ಷೆಯ ವರೆಗಿನ e-NAC ಗಳನ್ನು ಪಡೆದಿಲ್ಲದಿರುವ ತರಬೇತಿದಾರರ ಪ್ರಸ್ತಾವನೆಯನ್ನು ಸಲ್ಲಿಸಲು ಇದೇ ಮೇ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ನೋಡಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆವತಿಯಿಂದ ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಕಾನೂನು ಪದವೀಧರರಿಂದ ಶಿಷ್ಯವೇತನಕ್ಕಾಗಿ ಆನ್ಲೈನ್ ಮೂಲಕ ಮೇ.25 ರಿಂದ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ.30 ಕೊನೆಯ ದಿನಾಂಕವಾಗಿದ್ದು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ. ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.sw.kar.nic.in ಗೆ ಅಥವಾ ದಾವಣಗೆರೆ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಬೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮತದಾನ ಮಾಡಲು ವೇತನ ಸಹಿತ ರಜೆ ಘೋಷಣೆ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ.27 ಮತ್ತು 38 ರ ಉಪ ಚುನಾವಣೆ ಹಾಗೂ ಚನ್ನಗಿರಿ ಪುರಸಭೆಯ ವಾರ್ಡ್ ನಂ.16 ರ ಉಪಚುನಾವಣೆ ಹಾಗೂ ವಿವಿಧ ಕಾರಣಗಳಿಂದ ದಾವಣಗೆರೆ ತಾಲ್ಲೂಕಿನ ಕಾಡಜ್ಜಿ, ಕುಕ್ಕವಾಡ, ಚನ್ನಗಿರಿ ತಾಲ್ಲೂಕಿನ ಹೊಸಕೆರೆ(ಬಸವಾಪಟ್ಟಣ) ಗ್ರಾಮ ಪಂಚಾಯಿತಿಗಳ ವಿವಿಧ ಕ್ಷೇತ್ರಗಳಿಗೆ ಉಪ ಚುನಾವಣೆ-2022 ರ ಮೇ 20 ರಂದು ನಡೆಯುವ ಮತದಾನಕ್ಕೆ ಸಿಬ್ಬಂದಿಗಳು, ಕಾರ್ಮಿಕರಿಗೆ ರಜೆಯನ್ನು ನೀಡಲಾಗಿದೆ.
ಮೇ 20 ರಂದು ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ವೇತನ ಸಹಿತ ರೆಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಇಲಾಖೆಯ ಮುಖ್ಯಸ್ಥರು ವ್ಯವಸ್ಥೆ ಮಾಡತಕ್ಕದ್ದು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳ ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ6 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ಕ್ರೀಡೆ6 days ago
ಬೆಳಗಿನ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ6 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ7 days ago
ಈ ರಾಶಿಯವರ ನಿಂತಿದ್ದ ಮದುವೆ ವಿಜೃಂಭಣೆಯಿಂದ ಚಾಲನೆ! ಈ ರಾಶಿವರ ಪ್ರೇಮ ವಿಚಾರದಲ್ಲಿ ಏರುಪೇರು ಸಂಭವ! ಮಂಗಳವಾರ ರಾಶಿ ಭವಿಷ್ಯ-ಮೇ-10,2022
-
ಸಿನಿ ಸುದ್ದಿ6 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ5 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ7 days ago
ದಕ್ಷತೆ, ಸಮಯ ಬದ್ಧತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
-
ನಿತ್ಯ ಭವಿಷ್ಯ6 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022