ದಿನದ ಸುದ್ದಿ
ಭ್ರಷ್ಟ ಬಿಜೆಪಿ | ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ,ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು, ಸಚಿವರು ಮತ್ತು ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶನಿಸಿದ್ದಾರೆ.
ಈ ಕಿರಿತು ಸರಣಿ ಟ್ವೀಟ್ ಮಾಡಿರುವ ಅವರು,ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಎಂದಿದ್ದಾರೆ.
ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು?
ಇದನ್ನೂ ಓದಿ | ಪ್ರಯಾಣಿಕರ ಕೊರತೆ : ವಿವಿಧ ರೈಲುಗಳು ರದ್ದು
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ ಎಂದು ಕಿಡಿಕಾರಿದ್ದಾರೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ,
ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ.
‘ಯಥಾ ರಾಜಾ ತಥಾ ಮಂತ್ರಿ’. ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಎಂದಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ @narendramodi ಅವರ ಅಚ್ಚೇ ದಿನ್ @Tejasvi_Surya?9/11#Corona
— Siddaramaiah (@siddaramaiah) May 5, 2021
ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ?
ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅಚ್ಚೇ ದಿನ್? ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ವೆಂಟಿಲೇಟರ್, ಐಸಿಯು, ಆಕ್ಸಿಜನ್ ರಾಜ್ಯಕ್ಕೆ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ?
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ. 4/11#Corona
— Siddaramaiah (@siddaramaiah) May 5, 2021
ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ, ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿಗಳು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ? ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಗ ಇ-ರೈಲಿನ ಕನಸು ಸಹ ನನಸಾಗಲಿದೆ..!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಇ-ಬೈಕ್, ಇ-ಕಾರ್ ಮತ್ತು ಇ-ಬಸ್ ನಂತರ, ಈಗ ಇ-ರೈಲಿನ ಕನಸು ಸಹ ನನಸಾಗಲಿದೆ. ಪಶ್ಚಿಮ ಮಧ್ಯ ರೈಲ್ವೆಯು ನವದೂತ್ ಎಂಬ ಬ್ಯಾಟರಿ ಚಾಲಿತ ಡ್ಯುಯಲ್ ಮೋಡ್ ಲೋಕೋಮೋಟಿವ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಎಂಜಿನ್ ಎರಡೂ ಮೋಡ್ ಗಳಲ್ಲಿ ಅಂದರೆ ಬ್ಯಾಟರಿ ಮತ್ತು ವಿದ್ಯುಚ್ಛಕ್ತಿಯಲ್ಲಿ ಚಲಿಸುತ್ತದೆ. ಪ್ರಸ್ತುತ, ಇದನ್ನು ಪ್ರಾಯೋಗಿಕ ಆಧಾರದ ಮೇಲೆ ಜಬಲ್ಪುರ, ಮುದ್ವಾರ ಮತ್ತು ಇತರ ನಿಲ್ದಾಣಗಳಲ್ಲಿ ರೈಲುಗಳನ್ನು ಓಡಿಸುವಾಗ ಬಳಸಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ : ಸಿಎಂ ಬೊಮ್ಮಾಯಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು ರಾಜಕೀಯ ಅನುಭವ ಹೊಂದಿರುವ ಹೊರಟ್ಟಿ ಅವರು, ಪಕ್ಷಕ್ಕೆ ಬಂದಿರುವುದರಿಂದ ಪಕ್ಷದ ಬಲ, ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿ ತುಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಮಳೆಯಿಂದ ಹಾನಿಗೊಳಗಾದ ಕೆಲಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಘೋಷಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್! ಗುರುವಾರ- ರಾಶಿ ಭವಿಷ್ಯ ಮೇ-12,2022
-
ದಿನದ ಸುದ್ದಿ7 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ರಾಜಕೀಯ6 days ago
ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ರಾಜಕೀಯ6 days ago
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ; ಕಾನೂನು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರದ ತೀರ್ಮಾನ : ಸಚಿವ ಜೆ.ಸಿ. ಮಾದುಸ್ವಾಮಿ
-
ದಿನದ ಸುದ್ದಿ5 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ನಿತ್ಯ ಭವಿಷ್ಯ4 days ago
ಇಂದಿನಿಂದಲೇ ಈ ರಾಶಿಗಳಿಗೆ ಧನ ಲಾಭ, ಸುಖ ಸಂಪತ್ತು ಪ್ರಾಪ್ತಿ! ಶನಿವಾರ ರಾಶಿ ಭವಿಷ್ಯ-ಮೇ-14,2022
-
ನಿತ್ಯ ಭವಿಷ್ಯ5 days ago
ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ! ಶುಕ್ರವಾರ ರಾಶಿ ಭವಿಷ್ಯ-ಮೇ-13,2022