ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲೆಯಲ್ಲಿ 640 ಜನರಿಗೆ ಕೊರೋನಾ ಪಾಸಿಟಿವ್ : 141 ಮಂದಿ ಬಿಡುಗಡೆ

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 640 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,730 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 263, ಚಳ್ಳಕೆರೆ 35, ಹಿರಿಯೂರು 85, ಹೊಳಲ್ಕೆರೆ 55, ಹೊಸದುರ್ಗ 96, ಮೊಳಕಾಲ್ಮುರು ತಾಲ್ಲೂಕಿನಲ್ಲಿ 79 ಪ್ರಕರಣ ಸೇರಿದಂತೆ ಒಟ್ಟು 640 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 141 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 2410 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 640 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 20,730ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂದ ಇಂದು 4 ಮಂದಿ ಮೃತರಾಗಿದ್ದು ಇದುವರೆಗೆ ಒಟ್ಟು 112 ಜನ ಮೃತಪಟ್ಟಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಮೈಸೂರು ಕಾಗದ ಕಾರ್ಖಾನೆ ನಿಯಮಿತ (ಎಂ.ಪಿ.ಎಂ)
ಸೋಂಕಿತರ ಪೈಕಿ ಈಗಾಗಲೆ 17,704 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2,914 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,67,835 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,50,077 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,27,384 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1210 ಜನರ ವರದಿ ಬರುವುದು ಬಾಕಿ ಇದೆ. 753 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಗ ಇ-ರೈಲಿನ ಕನಸು ಸಹ ನನಸಾಗಲಿದೆ..!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಇ-ಬೈಕ್, ಇ-ಕಾರ್ ಮತ್ತು ಇ-ಬಸ್ ನಂತರ, ಈಗ ಇ-ರೈಲಿನ ಕನಸು ಸಹ ನನಸಾಗಲಿದೆ. ಪಶ್ಚಿಮ ಮಧ್ಯ ರೈಲ್ವೆಯು ನವದೂತ್ ಎಂಬ ಬ್ಯಾಟರಿ ಚಾಲಿತ ಡ್ಯುಯಲ್ ಮೋಡ್ ಲೋಕೋಮೋಟಿವ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಎಂಜಿನ್ ಎರಡೂ ಮೋಡ್ ಗಳಲ್ಲಿ ಅಂದರೆ ಬ್ಯಾಟರಿ ಮತ್ತು ವಿದ್ಯುಚ್ಛಕ್ತಿಯಲ್ಲಿ ಚಲಿಸುತ್ತದೆ. ಪ್ರಸ್ತುತ, ಇದನ್ನು ಪ್ರಾಯೋಗಿಕ ಆಧಾರದ ಮೇಲೆ ಜಬಲ್ಪುರ, ಮುದ್ವಾರ ಮತ್ತು ಇತರ ನಿಲ್ದಾಣಗಳಲ್ಲಿ ರೈಲುಗಳನ್ನು ಓಡಿಸುವಾಗ ಬಳಸಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ : ಸಿಎಂ ಬೊಮ್ಮಾಯಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು ರಾಜಕೀಯ ಅನುಭವ ಹೊಂದಿರುವ ಹೊರಟ್ಟಿ ಅವರು, ಪಕ್ಷಕ್ಕೆ ಬಂದಿರುವುದರಿಂದ ಪಕ್ಷದ ಬಲ, ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿ ತುಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಮಳೆಯಿಂದ ಹಾನಿಗೊಳಗಾದ ಕೆಲಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಘೋಷಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್! ಗುರುವಾರ- ರಾಶಿ ಭವಿಷ್ಯ ಮೇ-12,2022
-
ದಿನದ ಸುದ್ದಿ7 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ರಾಜಕೀಯ6 days ago
ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ರಾಜಕೀಯ6 days ago
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ; ಕಾನೂನು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರದ ತೀರ್ಮಾನ : ಸಚಿವ ಜೆ.ಸಿ. ಮಾದುಸ್ವಾಮಿ
-
ದಿನದ ಸುದ್ದಿ5 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ನಿತ್ಯ ಭವಿಷ್ಯ4 days ago
ಇಂದಿನಿಂದಲೇ ಈ ರಾಶಿಗಳಿಗೆ ಧನ ಲಾಭ, ಸುಖ ಸಂಪತ್ತು ಪ್ರಾಪ್ತಿ! ಶನಿವಾರ ರಾಶಿ ಭವಿಷ್ಯ-ಮೇ-14,2022
-
ನಿತ್ಯ ಭವಿಷ್ಯ5 days ago
ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ! ಶುಕ್ರವಾರ ರಾಶಿ ಭವಿಷ್ಯ-ಮೇ-13,2022