ದಿನದ ಸುದ್ದಿ
ಅಪ್ಪು ಅವರನ್ನ ಜೀವಂತವಾಗಿಡೋದು ಹೀಗೆ : ನಟಿ ರಮ್ಯ ನುಡಿ ನಮನ

ಅಕಾಲ ಮರಣಕ್ಕೆ ತುತ್ತಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನೆದು ನಟಿ ರಮ್ಯ ತಮ್ಮ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿರುವ ಬರಹವಿದು.
- ನಟಿ ರಮ್ಯ,ಬೆಂಗಳೂರು
ಅಪ್ಪು ಜೊತೆಯಲ್ಲಿ ನಾನು ಕಳೆದ ಬಹಳಷ್ಟು ನೆನಪುಗಳು ಅತ್ಯಮೂಲ್ಯ . ನಿಮ್ಮನ್ನು ನಾವು ಎಂದೆಂದಿಗೂ ನೆನೆಯುತ್ತೇವೆ. ಈ ಕಷ್ಟದ ಸಮಯದಲ್ಲಿ ಭಗವಂತ ಅಶ್ವಿನಿ ಮತ್ತು ಕುಟುಂಬಕ್ಕೆ ಧೈರ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮನ್ನು ಅಗಲಿರುವ ಇಂತ ಉನ್ನತ ವ್ಯಕ್ತಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ನಾನು ಅವರ ಅಭಿಮಾನಿಗಳ ಜೊತೆ ಇರುವೆನು.
ಅಪ್ಪು ಅವರ ಬಗ್ಗೆ ಹಲವರು ಬರೆದ ಎಲ್ಲಾ ಭಾವನಾತ್ಮಕ ಸಂದೇಶಗಳನ್ನು ಓದುತ್ತಿದ್ದೇನೆ ಮತ್ತು ಅವೆಲ್ಲವೂ ಅಕ್ಷರಸಹ ನಿಜ. ಕೆಲವಂತು ನನ್ನ ಕಣ್ಣಲ್ಲಿ ನೀರು ತಂದಿತು. ಅದುವೇ ಪುನೀತ್. ಹೌದು, ಅವರೇ ಅಪ್ಪು…
ಇವುಗಳನ್ನು ಓದಿದಾಗ ನನ್ನಲ್ಲಿ ಮೂಡಿದ ಕೆಲವು ಆಲೋಚನೆಗಳು ಇವು.
ಒಬ್ಬ ವ್ಯಕ್ತಿಯನ್ನು ಜೀವಂತವಾಗಿಡಲು ಉತ್ತಮ ಮಾರ್ಗ ಯಾವುದು? ನೆನಪುಗಳಲ್ಲಿ ಅಲ್ಲ, ಏಕೆಂದರೆ ಅದು ಮಾಸಿ ಹೋಗುತ್ತವೆ, ಆದರೆ ಅವರನ್ನು ಜೀವಂತವಾಗಿಡಲು ಒಂದು ಮಾರ್ಗವಿದೆ- ಅವರು ಬದುಕಿದ ರೀತಿಯಲ್ಲಿ ಪ್ರತಿದಿನ ನಾವು ಬದುಕುವುದು.
ಅವರಂತೆಯೇ ನಾವು ಪ್ರೀತಿ ಹಾಗೂ ಕರುಣಾಪೂರ್ಣ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರ ಮೂಲಕ ಅವರನ್ನು ಜೀವಂತವಾಗಿ ಇಡುವುದು. ದಿನನಿತ್ಯ ನಾವು ಅವರ ವ್ಯಕ್ತಿತ್ವವನ್ನು ಅನುಸರಿಸುವುದರ ಮೂಲಕ ನಾವು ಅವರನ್ನು ನಮ್ಮಲ್ಲಿ ಜೀವಂತವಾಗಿ ಇಡಲು ಸಾಧ್ಯ. ಈ ರೀತಿ ನಾವು ಅವರ ಮೌಲ್ಯಗಳನ್ನು ಮುಂದುವರಿಸಬಹುದು. ನಾವೆಲ್ಲರು ಅಪ್ಪು ರನ್ನು ಪ್ರತಿ ದಿನವೂ ಆರಾಧಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಗ ಇ-ರೈಲಿನ ಕನಸು ಸಹ ನನಸಾಗಲಿದೆ..!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಇ-ಬೈಕ್, ಇ-ಕಾರ್ ಮತ್ತು ಇ-ಬಸ್ ನಂತರ, ಈಗ ಇ-ರೈಲಿನ ಕನಸು ಸಹ ನನಸಾಗಲಿದೆ. ಪಶ್ಚಿಮ ಮಧ್ಯ ರೈಲ್ವೆಯು ನವದೂತ್ ಎಂಬ ಬ್ಯಾಟರಿ ಚಾಲಿತ ಡ್ಯುಯಲ್ ಮೋಡ್ ಲೋಕೋಮೋಟಿವ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಎಂಜಿನ್ ಎರಡೂ ಮೋಡ್ ಗಳಲ್ಲಿ ಅಂದರೆ ಬ್ಯಾಟರಿ ಮತ್ತು ವಿದ್ಯುಚ್ಛಕ್ತಿಯಲ್ಲಿ ಚಲಿಸುತ್ತದೆ. ಪ್ರಸ್ತುತ, ಇದನ್ನು ಪ್ರಾಯೋಗಿಕ ಆಧಾರದ ಮೇಲೆ ಜಬಲ್ಪುರ, ಮುದ್ವಾರ ಮತ್ತು ಇತರ ನಿಲ್ದಾಣಗಳಲ್ಲಿ ರೈಲುಗಳನ್ನು ಓಡಿಸುವಾಗ ಬಳಸಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ : ಸಿಎಂ ಬೊಮ್ಮಾಯಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು ರಾಜಕೀಯ ಅನುಭವ ಹೊಂದಿರುವ ಹೊರಟ್ಟಿ ಅವರು, ಪಕ್ಷಕ್ಕೆ ಬಂದಿರುವುದರಿಂದ ಪಕ್ಷದ ಬಲ, ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿ ತುಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಮಳೆಯಿಂದ ಹಾನಿಗೊಳಗಾದ ಕೆಲಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಘೋಷಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್! ಗುರುವಾರ- ರಾಶಿ ಭವಿಷ್ಯ ಮೇ-12,2022
-
ರಾಜಕೀಯ6 days ago
ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ರಾಜಕೀಯ6 days ago
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ; ಕಾನೂನು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರದ ತೀರ್ಮಾನ : ಸಚಿವ ಜೆ.ಸಿ. ಮಾದುಸ್ವಾಮಿ
-
ದಿನದ ಸುದ್ದಿ5 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ನಿತ್ಯ ಭವಿಷ್ಯ4 days ago
ಇಂದಿನಿಂದಲೇ ಈ ರಾಶಿಗಳಿಗೆ ಧನ ಲಾಭ, ಸುಖ ಸಂಪತ್ತು ಪ್ರಾಪ್ತಿ! ಶನಿವಾರ ರಾಶಿ ಭವಿಷ್ಯ-ಮೇ-14,2022
-
ನಿತ್ಯ ಭವಿಷ್ಯ5 days ago
ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ! ಶುಕ್ರವಾರ ರಾಶಿ ಭವಿಷ್ಯ-ಮೇ-13,2022
-
ದಿನದ ಸುದ್ದಿ5 days ago
ಮೇ 19 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ : ಸಚಿವ ಬಿ.ಸಿ.ನಾಗೇಶ್