ದಿನದ ಸುದ್ದಿ
ದಾವಣಗೆರೆ | ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ; ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿ ಬೇಜವಾಬ್ದಾರಿ ನಡೆ , ಸೂಕ್ತ ಕ್ರಮಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

ಸುದ್ದಿದಿನ,ದಾವಣಗೆರೆ: ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿ ಅವರ ಬೇಜಾಬ್ದಾರಿ ನಡೆಯ ಕುರಿತುರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ. ಓಬಳೇಶ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ತಾಲ್ಲೂಕು ಗೋಣಿವಾಡ ಕ್ಯಾಂಪ್ ನಿವಾಸಿಗಳಾದ ಪಟ್ಟಾಬಿ ಎನ್. ಇವರು ತಮ್ಮ ಮಗಳಾದ ಕುಶಿ.ಎನ್. ಇವರನ್ನು ದಾವಣಗೆರೆ ನಗರದ ಡಿ.ಸಿ.ಎಂ. ಟೌನ್ಶಿಪ್ನಲ್ಲಿರುವ ಗೋಲ್ಡನ್ ಪಬ್ಲಿಕ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಎಲ್.ಕೆ.ಜಿ ಯಿಂದ ೨ನೇ ತರಗತಿಯವರೆಗೆ ವ್ಯಾಸಾಂಗ ಮಾಡಿಸಿರುತ್ತಾರೆ.
ಕರೋನಾ ಬಿಕ್ಕಟ್ಟಿನ ಕಾರಣದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಸದರಿ ಪೋಷಕರು 202-22ನೇ ಸಾಲಿನ ಶಾಲಾ ಶುಲ್ಕವನ್ನು ತುಂಬಿ, ತಮ್ಮ ಮಗಳನ್ನು ತಮ್ಮ ಸ್ವಗ್ರಾಮವಾದ ಗೋಣಿವಾಡ ಕ್ಯಾಂಪಿನಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಗೆ ದಾಖಲು ಮಾಡಿರುತ್ತಾರೆ. ಆದರೆ ಹಿಂದಿನ ಶಾಲೆಯ ಆಡಳಿತ ಮಂಡಳಿಯು ಕುಶಿ.ಎನ್ ಎಂಬ ಮಗುವಿನ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಲು ಪೋಷಕರಿಗೆ ನಿರಾಕರಿಸಿರುತ್ತಾರೆ ಎಂದು ತಿಳಿಸಿದರು.
ಇದಕ್ಕೆ ಕಾರಣ 2021-22ನೇ ಸಾಲಿನಲ್ಲಿ ಈ ಮಗುವಿಗೆ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಬೇಕಾದರೆ ಸದರಿ ವರ್ಷದ ಶೇ 70ರಷ್ಟು ಶುಲ್ಕವನ್ನು ತುಂಬಿದರೆ ಮಾತ್ರ ವರ್ಗಾವಣೆ ಪ್ರಮಾಣಪತ್ರವನ್ನು ನೀಡುತ್ತೇವೆ ಎಂದು ತಾಕೀತು ಮಾಡಿರುತ್ತಾರೆ. ಹಾಗೆಯೇ ಸದರಿ ವರ್ಷದಲ್ಲಿ ಮಗು ದಾಖಲಾಗಿರುವ ಸರ್ಕಾರಿ ಶಾಲೆಯ ಮುಖ್ಯೋಪಧ್ಯಾಯರು ಕೂಡ ವರ್ಗಾವಣೆ ಪತ್ರವನ್ನು ನೀಡುವಂತೆ ಪತ್ರದ ಮುಖಾಂತರ ಮನವಿ ಮಾಡಿಕೊಂಡಿರುತ್ತಾರೆ.
ಇದಕ್ಕೂ ಖಾಸಗಿ ಶಾಲೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಇದರಿಂದ ಆತಂಕಗೊಂಡ ಪೋಷಕರು ತಮ್ಮ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಾದ ಎನ್.ಎಂ.ಮಂಜುನಾಥ್ ಅವರ ಬಳಿ ತಮ್ಮ ಅಳಲನ್ನು ಹಂಚಿಕೊಂಡಾಗ, ಮತ್ತಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಮಂಜುನಾಥ್ ಇವರು ಇದಕ್ಕೆ ಸಂಬಂಧಿಸಿದ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ನಿರಂಜನ್ಮೂರ್ತಿಯವರಿಗೆ ಕರೆ ಮಾಡಿ, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದೂರು ಹೇಳಿದಾಗ, ಹಿಂದಿನ ವರ್ಷದ ಶಾಲಾ ಶುಲ್ಕವನ್ನು ಸಂದಾಯ ಮಾಡಿದರೆ ಮಾತ್ರ ವರ್ಗಾವಣೆ ಪತ್ರವನ್ನು ನೀಡುತ್ತಾರೆ.
ಇಲ್ಲದೆ ಹೋದರೆ ವರ್ಗಾವಣೆ ಪತ್ರ ನೀಡಲು ಸಾಧ್ಯವಿಲ್ಲ ಎಂದು ತಿಳಿಸುತ್ತಾರೆ. ಇದಕ್ಕೆ ಪ್ರತಿಯಾಗಿ ಶ್ರೀ ಎನ್.ಎಂ.ಮಂಜುನಾಥ್ ಅವರು ಮಗುವಿನ ಪೋಷಕರು ಹಿಂದಿನ ವರ್ಷದ ಎಲ್ಲ ಶುಲ್ಕವನ್ನು ಪಾವತಿಸಿದರೂ ಶಾಲಾ ಆಡಳಿತ ಮಂಡಳಿಯು ವರ್ಗಾವಣೆ ಪತ್ರ ನೀಡಲು ನಿರಾಕರಿಸಿದೆ. ಅಲ್ಲದೆ ಸದರಿ ವರ್ಷದ ಶೇ 70 ರಷ್ಟು ಶುಲ್ಕ ನೀಡಿದರೆ ಮಾತ್ರ ವರ್ಗಾವಣೆ ಪತ್ರ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ‘ಇನ್ನೂ ಮುಂದೆ ಖಾಸಗಿ ಶಾಲೆಗಳು ಮಕ್ಕಳಿಗೆ ವರ್ಗಾವಣೆ ಪತ್ರ ನೀಡಲು ನಿರಾಕರಿಸಿದರೆ ಪೋಷಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಆಯಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ನೇರವಾಗಿ ವರ್ಗಾವಣೆ ಪತ್ರ ಪಡೆಯುವ ಅವಕಾಶ ನೀಡಲಾಗಿದೆ’ ಎಂದು ಪತ್ರಿಕೆ ಹೇಳಿಕೆಯನ್ನು ನೀಡಿದ್ದಾರೆ.
ಅದರಂತೆ ತಾವೇ ಈ ಮಗುವಿಗೆ ವರ್ಗಾವಣೆ ಪತ್ರ ನೀಡಿ ಎಂದು ಕೇಳಿಕೊಂಡಾಗ, ಹೀಗೆ ಕೊಡುವುದಕ್ಕೆ ಸಾಧ್ಯವಿಲ್ಲ. ‘ನಮಗೆ ಇಂತಹ ಯಾವುದೇ ಆದೇಶ ಬಂದಿಲ್ಲ. ಖಾಸಗಿ ಶಾಲೆಗಳನ್ನು ನಾವು ಕಾಪಾಡಬೇಕು. ಆದ್ದರಿಂದ ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ಇದಕ್ಕೆ ಸಂಬAಧಿಸಿದ ಪೋಷಕರಿಗೆ ಕರೆ ಮಾಡಲು ಹೇಳಿ, ನಾನು ಸದರಿ ವಿಷಯದ ಬಗ್ಗೆ ಅವರಿಗೆ ಅರಿವು ಮೂಡಿಸುತ್ತೇನೆ’ ಎಂಬುದಾಗಿ ಹೇಳಿರುತ್ತಾರೆ.
ಮಾನ್ಯರಾದ ತಮ್ಮಲ್ಲಿ ಈ ಮೂಲಕ ವಿನಂತಿಸಿಕೊಳ್ಳುವುದೇನೆಂದರೆ, ಕರೋನಾ ಸಂಕಷ್ಟದಿಂದಾಗಿ ಸಾಮಾನ್ಯ ಜನರ ಬದುಕು ಬೀದಿಗೆ ಬಂದಿರುವ ಸ್ಥಿತಿ ತಮಗೆಲ್ಲ ತಿಳಿದಿದೆ. ಹೀಗಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲಾಗದೆ ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದೆ.
ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಪೋಷಕರಿಗೆ ಆರ್ಥಿಕ ಹೊರೆಯನ್ನು ತಪ್ಪಿಸುವ ನಿಟ್ಟಿನಲ್ಲಿ, ಪ್ರತಿಯೊಂದು ಮಗುವಿಗೂ ಶಿಕ್ಷಣವು ಸುಲಭವಾಗಿ ತಲುಪುವಂತೆ ಮಾಡುವುದಕ್ಕಾಗಿ, ಪೋಷಕರು ಖಾಸಗಿ ಶಾಲೆಗೆ ಅಲೆಯುವುದನ್ನು ತಪ್ಪಿಸಲು ವರ್ಗಾವಣೆ ಪತ್ರ ಕೊಡದ ಶಾಲೆಗಳ ವರ್ಗಾವಣೆ ಪತ್ರವನ್ನು ಆಯಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂಬ ವಿಷಯ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಉಮಾಶಂಕರ್ ಅವರು ಪತ್ರಿಕಾ ಹೇಳಿಕೆಯನ್ನು ನೀಡಿರುತ್ತಾರೆ. ಇಂತಹ ಸಂದರ್ಭದಲ್ಲಿ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿಯವರು ಅನ್ಯಾಯಕ್ಕೆ ಒಳಗಾದ ಪೋಷಕರ ಪರವಾಗಿ ನಿಲ್ಲದೆ, ಖಾಸಗಿ ಶಾಲೆಗಳ ಹಿತಕಾಯುವಂತಹ ಬೇಜವಬ್ದಾರಿ ಮಾತುಗಳನ್ನಾಡಿರುವುದು ನಿಜಕ್ಕೂ ಶೋಚನೀಯವಾದ ಸಂಗತಿಯಾಗಿದೆ.
ಆದ್ದರಿಂದ ಸದರಿ ಅರ್ಜಿಯೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್.ಎಂ.ಮಂಜುನಾಥ್ ಅವರೊಂದಿಗೆ ನಡೆಸಿದ ಸಂಭಾಷಣೆಯ ತುಣುಕನ್ನು ಸಿ.ಡಿಯಲ್ಲಿ ಲಗತ್ತಿಸಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ದಾವಣಗೆರೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ ಇವರಿಗೆ ಬೇಜವಬ್ದಾರಿ ಹೇಳಿಕೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಾಗೆಯೇ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸಂಕಷ್ಟಕ್ಕೆ ಒಳಗಾಗಿರುವ ಪೋಷಕರ ಆರ್ಥಿಕ ಒತ್ತಡವನ್ನು ತಪ್ಪಿಸಿ, ಸರ್ಕಾರಿ ಶಾಲೆಯತ್ತ ಮುಂದಾಗಿರುವ ಮಕ್ಕಳ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕದ ವತಿಯಿಂದ ಲಿಖಿತ ದೂರು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗೋವರ್ಧನ್, ಗ್ರಾಮ ಪಂಚಾಯತಿ ಸದಸ್ಯ ಎಂ,ಎನ್ ಮಂಜುನಾಥ, ಹೂವಿನ ಮಡು ರವಿ, ನಾಗೇಶ್ವರರಾವ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಗ ಇ-ರೈಲಿನ ಕನಸು ಸಹ ನನಸಾಗಲಿದೆ..!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಇ-ಬೈಕ್, ಇ-ಕಾರ್ ಮತ್ತು ಇ-ಬಸ್ ನಂತರ, ಈಗ ಇ-ರೈಲಿನ ಕನಸು ಸಹ ನನಸಾಗಲಿದೆ. ಪಶ್ಚಿಮ ಮಧ್ಯ ರೈಲ್ವೆಯು ನವದೂತ್ ಎಂಬ ಬ್ಯಾಟರಿ ಚಾಲಿತ ಡ್ಯುಯಲ್ ಮೋಡ್ ಲೋಕೋಮೋಟಿವ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಎಂಜಿನ್ ಎರಡೂ ಮೋಡ್ ಗಳಲ್ಲಿ ಅಂದರೆ ಬ್ಯಾಟರಿ ಮತ್ತು ವಿದ್ಯುಚ್ಛಕ್ತಿಯಲ್ಲಿ ಚಲಿಸುತ್ತದೆ. ಪ್ರಸ್ತುತ, ಇದನ್ನು ಪ್ರಾಯೋಗಿಕ ಆಧಾರದ ಮೇಲೆ ಜಬಲ್ಪುರ, ಮುದ್ವಾರ ಮತ್ತು ಇತರ ನಿಲ್ದಾಣಗಳಲ್ಲಿ ರೈಲುಗಳನ್ನು ಓಡಿಸುವಾಗ ಬಳಸಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ : ಸಿಎಂ ಬೊಮ್ಮಾಯಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು ರಾಜಕೀಯ ಅನುಭವ ಹೊಂದಿರುವ ಹೊರಟ್ಟಿ ಅವರು, ಪಕ್ಷಕ್ಕೆ ಬಂದಿರುವುದರಿಂದ ಪಕ್ಷದ ಬಲ, ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿ ತುಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಮಳೆಯಿಂದ ಹಾನಿಗೊಳಗಾದ ಕೆಲಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಘೋಷಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್! ಗುರುವಾರ- ರಾಶಿ ಭವಿಷ್ಯ ಮೇ-12,2022
-
ದಿನದ ಸುದ್ದಿ7 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ರಾಜಕೀಯ6 days ago
ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ರಾಜಕೀಯ6 days ago
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ; ಕಾನೂನು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರದ ತೀರ್ಮಾನ : ಸಚಿವ ಜೆ.ಸಿ. ಮಾದುಸ್ವಾಮಿ
-
ದಿನದ ಸುದ್ದಿ5 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ನಿತ್ಯ ಭವಿಷ್ಯ4 days ago
ಇಂದಿನಿಂದಲೇ ಈ ರಾಶಿಗಳಿಗೆ ಧನ ಲಾಭ, ಸುಖ ಸಂಪತ್ತು ಪ್ರಾಪ್ತಿ! ಶನಿವಾರ ರಾಶಿ ಭವಿಷ್ಯ-ಮೇ-14,2022
-
ನಿತ್ಯ ಭವಿಷ್ಯ5 days ago
ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ! ಶುಕ್ರವಾರ ರಾಶಿ ಭವಿಷ್ಯ-ಮೇ-13,2022