ದಿನದ ಸುದ್ದಿ
ಅತ್ಯುನ್ನತ ಸಾಧನೆ ಮೆರೆದ ಸೇನಾಪಡೆ ಅಧಿಕಾರಿಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಶೌರ್ಯ ಪದಕ ಪ್ರದಾನ

ಸುದ್ದಿದಿನ ಡೆಸ್ಕ್ : ಅತ್ಯುನ್ನತ ಸೇವೆ ಸಲ್ಲಿಸಿದ ಹಾಗೂ ಶೌರ್ಯ ಸಾಹಸ ಮೆರೆದ ಭಾರತೀಯ ಸೇನಾ ಪಡೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿಂದು ವಿವಿಧ ಶೌರ್ಯ ಪದಕ ಪ್ರದಾನ ಮಾಡಿದರು.
ಭೂಸೇನಾ ಪಡೆ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರಿಗೆ ಪರಮ ವಿಶಿಷ್ಟ ಸೇವಾ ಪದಕ ಪ್ರದಾನ ಮಾಡಲಾಯಿತು. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಆಶುತೋಷ್ ಕುಮಾರ್ ಅವರಿಗೆ ಮರಣೋತ್ತರ ಶೌರ್ಯ ಚಕ್ರ ಪ್ರದಾನ ಮಾಡಲಾಯಿತು.
ಅಲ್ಲದೆ ಹವಾಲ್ದಾರ್ ಅನಿಲ್ ತೋಮರ್, ಹವಾಲ್ದಾರ್ ಪಿಂಕು ಕುಮಾರ್, ಹವಾಲ್ದಾರ್ ಕಾಶೀರಾಯ್ ಬಮ್ಮನಹಳ್ಳಿ, ನಾಯ್ಬ್ ಸುಬೇದಾರ್ ಶ್ರೀಜಿತ್ ಎಂ ಮತ್ತು ಸಿಪಾಯಿ ಜಸವಂತ್ರೆಡ್ಡಿ ಅವರಿಗೆ ಶೌರ್ಯ ಪದಕವನ್ನು ರಾಷ್ಟ್ರಪತಿ ಅವರು ಪ್ರದಾನ ಮಾಡಿದರು. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಸೇರಿದಂತೆ ಕೇಂದ್ರದ ಹಲವು ಸಚಿವರು, ಮೂರೂ ಸೇನಾ ಪಡೆ ಮುಖ್ಯಸ್ಥರು, ಹಲವು ಗಣ್ಯರು ಭಾಗವಹಿಸಿದ್ದರು.
President Kovind presents Shaurya Chakra to Major Ravi Kumar Chaudhary, Grenadiers 55th Battalion, Rashtriya Rifles. He displayed unparalleled courage and supreme leadership qualities during conduct of four successful operations, resulting in elimination of 13 terrorists. pic.twitter.com/6f6u87pUui
— President of India (@rashtrapatibhvn) May 10, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ತುಕ್ಕು ಹಿಡಿಯುತ್ತಿವೆ ವಾಹನಗಳು, ಪರಿಕರಗಳು : ಮಹಾನಗರ ಪಾಲಿಕೆ ವಿರುದ್ಧ ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ

ಸುದ್ದಿದಿನ,ದಾವಣಗೆರೆ: ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲೆಕ್ಟ್ರಿಕಲ್ ಆಟೋಗಳು, ಮುಕ್ತಿವಾಹಿನಿ, ಮಿನಿ ಹಿಟಾಚಿ ಕೊಂಡೊಯ್ಯುವ ಲಾರಿ, ಜಟ್ಟಿಂಗ್ ಸ್ಪ್ರೇ, ಕಸ ತುಂಬುವ ಕಾಂಪ್ಯಾಕ್ಟರ್, ತಳ್ಳು ಗಾಡಿಗಳು, ಕಾರ್ಡನ್ ಡಸ್ಟ್ ಸೇರಿದಂತೆ ಪರಿಕರಗಳು ಮಹಾನಗರ ಪಾಲಿಕೆಗೆ ಬಂದಿವೆ. ಆದರೆ ಬಳಕೆ ಮಾಡುವುದನ್ನು ಬಿಟ್ಟು ಪಾಲಿಕೆಯಲ್ಲಿ ಇಟ್ಟಿರುವುದು ಆಡಳಿತ ನಡೆಸುತ್ತಿರುವ ಬಿಜೆಪಿ ಬೇಜಾವಾಬ್ದಾರಿತನಕ್ಕೆ ಸಾಕ್ಷಿ ಎಂದು ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಗಡಿಗುಡಾಳ್ ಮಂಜುನಾಥ್, ಪಾಲಿಕೆ ಸದಸ್ಯ ಎ. ನಾಗರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯಕುಮಾರ್, ಕಾಂಗ್ರೆಸ್ ಮುಖಂಡರಾದ ಜಗದೀಶ್, ಕೊಟ್ರಯ್ಯ, ಇಟುಗುಡಿ ಮಂಜುನಾಥ್, ಜಾಕಿರ್ ಆಲಿ, ಪಂಡಿತ್ ನೇತೃತ್ವದ ತಂಡ ಈ ಬಗ್ಗೆ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ.
ಮುಕ್ತಿ ವಾಹಿನಿ ಬಂದು ಆರು ತಿಂಗಳಾಗಿದೆ. ಒಂದು ವಾಹನ ಒಳಗಡೆ ನಿಲ್ಲಿಸಿದ್ದು ಧೂಳು ಹಿಡಿದು ತುಕ್ಕು ಹಿಡಿಯುವ ಪರಿಸ್ಥಿತಿ ಬಂದಿದೆ. ಮಿನಿ ಹಿಟಾಚಿ ತೆಗೆದುಕೊಂಡು ಹೋಗುವ ಲಾರಿ ಹಾಳಾಗಿದೆ. ಇದನ್ನು ಸರಿಪಡಿಸಲು ಆಗುತ್ತಿಲ್ಲ. ಕೇವಲ ಎರಡು ಸಾವಿರ ರೂಪಾಯಿ ಖರ್ಚು ಮಾಡಿ ದುರಸ್ತಿ ಮಾಡಿಸಲು ಆಗಿಲ್ಲ.
ಈ ಹಿನ್ನೆಲೆಯಲ್ಲಿ ಎರಡು ಹಿಟಾಚಿಗಳು ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಇವು ಹಾಳಾಗುವ ಹಂತ ತಲುಪಿವೆ. ಇನ್ನು ನಾಲ್ಕು ಜಟ್ಟಿಂಗ್ ಸ್ಪ್ರೇ ಇದ್ದು, ಕೊರೊನಾ ಬಂದಾಗ ಸ್ಪ್ರೇ ಮಾಡಿಸಿದ್ದು ಬಿಟ್ಟರೆ ಈಗ ಬಳಸುತ್ತಿಲ್ಲ. ಸ್ಲಂ ಪ್ರದೇಶಗಳು ಹಾಗೂ ಚರಂಡಿಗಳಲ್ಲಿ ಸೊಳ್ಳೆ ನಿಯಂತ್ರಣ ಮಾಡುವ ಇವುಗಳನ್ನು ಹಾಗೆಯೇ ಇಡಲಾಗಿದೆ. ಕೇಳಿದರೆ ಕೆಮಿಕಲ್ ಇಲ್ಲ ಎಂಬ ಉಡಾಫೆ ಉತ್ತರ ಸಿಗುತ್ತಿದೆ. ಟೆಂಡರ್ ಆಗಿಲ್ಲ, ಎರಡು ಮಾತ್ರ ಬಳಕೆ ಮಾಡಲಾಗುತ್ತಿದೆ, ಇನ್ನೆರಡನ್ನು ಉಪಯೋಗಿಸುತ್ತಿಲ್ಲ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕದ ಪಪಥಮ ರೋಲ್ಬಾಲ್ ಆಟದ ತರಬೇತುದಾರರಾಗಿ ಪೃಥ್ವಿಕಾಂತ್ ಎಸ್. ಕೊಟಗಿ ಆಯ್ಕೆ

ಸುದ್ದಿದಿನ,ದಾವಣಗೆರೆ : ರೋಲರ್ ಸ್ಟೇಟಿಂಗ್ ಸೆಂಟರ್ ತರಬೇತುದಾರರಾದ ಪೃಥ್ವಿಕಾಂತ್’ ಎನ್.ಕೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೋಲ್ ಬಾಲ್ ಆಟದ ಕರ್ನಾಟಕದಿಂದ ಪ್ರಪ್ರಥಮವಾಗಿ ವೈಸ್ ಕ್ಯಾಪ್ಟನ್ ಆಗಿ ಆಯ್ಕೆಗೊಂಡಿರುತ್ತಾರೆ.
2005ರಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ರೋಲ್ಬಾಲ್ ಆಟದ ಕೋಚ್ ಆಗಿದ್ದರು. 2022ರ ಮೇ ಮತ್ತು ಜೂನ್ ತಿಂಗಳಿನಲ್ಲಿ 6 ವಾರಗಳ ಕಾಲ ನಡೆದ ರೋಲ್ ಬಾಲ್ ಆಟದ ತರಬೇತಿಯಲ್ಲಿ ಸ್ಪರ್ಧಿಸಿದ್ದು, ಇವರು ಎನ್ಐಎಸ್ ಎಸ್ಐ (NIS, SAI) ಪಟಿಯಾಲ ಈ (ಪಂಜಾಬ್)ದಿಂದ ಅಧಿಕೃತವಾಗಿ ಪ್ರಪ್ರಥಮ ಕೋಚ್ ಆಗಿ ನೇಮಕಗೊಂಡಿರುತ್ತಾರೆ. ಇವರ ಅತೀ ದೊಡ್ಡ ಸಾಧನೆಯಾಗಿದ್ದು ದಾವಣಗೆರೆ ನಗರಕ್ಕೆ ಕೀರ್ತಿತಂದಿದ್ದಾರೆ.
ಇವರು ಎನ್ ಐಐಟಿಯ ಸಾಘವೇರ್ ತರಬೇತುದಾರರೂ ಕೂಡ = ಆಗಿರುತ್ತಾರೆ. ಇವರಿಗೆ ತಂದೆ ನೀಲಕಾಂತ್, ತಾಯಿ ಶೈಲ ನೀಲಕಾಂತ್ ಸೇರಿದಂತೆ ಸ್ನೇಹಿತರು, ನಗರದ ಹಿರಿಯರು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

ಸುದ್ದಿದಿನ ಡೆಸ್ಕ್ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪುಸ್ತಕ ಪ್ರಶಸ್ತಿಗಾಗಿ 2021-22 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ.
ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ 22 ವರ್ಷಗಳಿಂದಲೂ ‘ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ’ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಆದರೇ, ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು ಹಿಂದಿ ಮತ್ತು ಸಂಸ್ಕೃತ ಕೃತಿಗಳಲ್ಲಿ ಉತ್ತಮ ಕೃತಿ ಆಯ್ಕೆಮಾಡಿ ಉತ್ತಮ ಕೃತಿ ಕರ್ತರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವದು.
ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ‘ರಾಜ್ಯ ಪ್ರಶಸ್ತಿಯು 5 ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಕೃತಿ ಕರ್ತರಿಗೆ ಡಾ. ಪಂ. ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸೇವಾ ಸಮಿತಿಯ ರಾಜ್ಯ ಸಂಚಾಲಕಿ ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಶಸ್ತಿಗೆ ಸಮೀಪದ ಪ್ರತಿಸ್ಪರ್ಧಿಯಾದ ವಿವಿದ ಪ್ರಕಾರದ 10 ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿ ಸಮ್ಮಾನ ನೀಡಿ ಗೌರವಿಸಲಾಗುವುದು. ಆಸಕ್ತ ಲೇಖಕರು ತಮ್ಮ 3 ಕೃತಿಗಳೊಂದಿಗೆ 27 ಜುಲೈ 2022 ರ ಒಳಗಾಗಿ ತಲುಪುವಂತೆ ಕಳಿಸಿಕೊಡಲು ಕೋರಲಾಗಿದೆ.
ಪುಸ್ತಕಗಳನ್ನು ಕಳಿಸಿಕೊಡುವ ವಿಳಾಸ
ಸಿ. ಕೆ. ಹಿರೇಮಠ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ ‘ಶ್ರೀಗಿರಿ ಬಿಲ್ಡಿಂಗ’ ಪಂಚಾಕ್ಷರಿ ನಗರ ೪ ನೆಯ ಅಡ್ಡರಸ್ತೆ ಗದಗ-582101
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ನಟಿ ಪವಿತ್ರ ಲೋಕೇಶ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಮೇಸೆಜ್ ಕುರಿತು ದೂರು ದಾಖಲು
-
ರಾಜಕೀಯ4 days ago
ಮಹಾರಾಷ್ಟ್ರ ಸರ್ಕಾರ ಉರುಳಲು ಬಿಜೆಪಿ ಕುತಂತ್ರ ಕಾರಣ, ಇದು ದೇಶಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ
-
ನಿತ್ಯ ಭವಿಷ್ಯ6 days ago
ಗುರುವಾರ ರಾಶಿ ಭವಿಷ್ಯ-ಜೂನ್-30,2022 : ಈ ರಾಶಿಯವರು ನಿಮ್ಮ ಸಂಗಾತಿಗೆ ಹೃದಯದಲ್ಲಿ ಅಡಿಗಿರುವ ಸತ್ಯಾಂಶ ಬಹಿರಂಗಪಡಿಸುವ ದಿನ
-
ನಿತ್ಯ ಭವಿಷ್ಯ5 days ago
ಶುಕ್ರವಾರ- ರಾಶಿ ಭವಿಷ್ಯ ಜುಲೈ-1,2022 : ಈ ರಾಶಿಯವರಿಗೆ ಇಷ್ಟ ಇರದ ಮದುವೆ! ಆದರೆ ಈ ರಾಶಿಯವರಿಗೆ ಇಷ್ಟ ಇರದ ಉದ್ಯೋಗ!
-
ದಿನದ ಸುದ್ದಿ4 days ago
ಅಕ್ರಮ ಹಣ ವರ್ಗಾವಣೆ ಕೇಸ್ : ಡಿ.ಕೆ ಶಿವಕುಮಾರ್’ಗೆ ಜಾಮೀನು ಅರ್ಜಿ ವಿಚಾರಣೆ ಜುಲೈ 30 ಕ್ಕೆ ಮುಂದೂಡಿಕೆ
-
ದಿನದ ಸುದ್ದಿ4 days ago
ನೇರ ಪಾವತಿ ಪೌರಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ : ಸಿಎಂ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ4 days ago
ಬಿಜೆಪಿಯ ನೂಪುರ್ ಶರ್ಮಾ’ಗೆ ಸುಪ್ರೀಂಕೋರ್ಟ್ ತರಾಟೆ
-
ದಿನದ ಸುದ್ದಿ4 days ago
ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಮಾರುತ್ತಿರುವ ವಿಡಿಯೋ ವೈರಲ್.!