ದಿನದ ಸುದ್ದಿ
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಸಿದ್ಧವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ರೂಪಿಸಿ ಅದನ್ನು ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಿ ಅದರ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ಮಂಗಳವಾರ ನೀಡಿರುವ ಆದೇಶದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಇದೊಂದೇ ಪರಿಹಾರ. ಈ ಆದೇಶದಿಂದ ಹಿಂದುಳಿದ ಜಾತಿಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಸಮಾಲೋಚಿಸಿ, ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಸಮರೋಪಾದಿಯಲ್ಲಿ ಕಾನೂನು ಹೋರಾಟಕ್ಕೆ ತಯಾರಾಗಬೇಕು ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
“ಉದ್ಯೋಗ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ರಾಜಕೀಯ ಕ್ಷೇತ್ರಕ್ಕೆ ಅನ್ವಯಿಸಲಾಗದು. ಇದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ವಿಶ್ವಾಸಾರ್ಹ ದತ್ತಾಂಶ ಆಧರಿಸಿದ ಮಾಹಿತಿಯನ್ನು ಮೂರು ಹಂತಗಳ ಪರಿಶೀಲನೆಗೊಡ್ಡಿ ಪ್ರತ್ಯೇಕ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕು” ಎಂದು 2010ರಲ್ಲಿಯೇ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಆದೇಶ ನೀಡಿತ್ತು. ಅದೇ ಆದೇಶವನ್ನು ಸುಪ್ರೀಂ ಕೋರ್ಟ್ ಪುನರುಚ್ಚರಿಸುತ್ತಾ ಬಂದಿದೆ ಎಂದಿದ್ದಾರೆ.
ಹಿಂದುಳಿದ ಜಾತಿಗಳಿಗೆ ಸಂಬಂಧಿಸಿದ ಪರಿಷ್ಕೃತ ರಾಜಕೀಯ ಮೀಸಲಾತಿ ತಕ್ಷಣಕ್ಕೆ ಲಭ್ಯ ಇಲ್ಲದೆ ಹೋದರೆ ಅದಕ್ಕಾಗಿ ಕಾಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳನ್ನು ಸಾಮಾನ್ಯ ಕ್ಷೇತ್ರಗಳೆಂದು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ತನ್ನ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ.
ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ತನ್ನ ಆದೇಶ ಎಲ್ಲ ರಾಜ್ಯಗಳಿಗೆ ಅನ್ವಯಿಸಿದೆ ಎಂದು ಹೇಳುತ್ತಲೇ ಇದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗದೆ ಕಾಲಹರಣ ಮಾಡುತ್ತಿರುವುದು ವಿಷಾದನೀಯ. ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ಮಾಡಿಕೊಳ್ಳದೆ, ಸರ್ವಜನರ ಹಿತದ ವಿಷಯದಲ್ಲಿ ರಾಜಕೀಯ ಮಾಡಲು ಹೋಗದೆ ಕಾಂತರಾಜ್ ಆಯೋಗದ ವರದಿಯನ್ನು ಒಪ್ಪಿಕೊಳ್ಳಬೇಕು.
ಸುಪ್ರೀಂ ಕೋರ್ಟ್ ಹಿಂದಿನ ತನ್ನ ಆದೇಶಗಳಲ್ಲಿ ‘’ ರಾಜ್ಯ ಸರ್ಕಾರಗಳು ಈಗಾಗಲೇ ನಡೆಸಿರುವ ಸಮೀಕ್ಷೆಯ ಅಂಕಿ-ಅಂಶ ಮತ್ತು ಮಾಹಿತಿಯನ್ನು ಹೊಸ ಆಯೋಗಕ್ಕೆ ನೀಡಬಹುದು. ಆ ಮಾಹಿತಿಯನ್ನು ಆಧರಿಸಿ ಎರಡು ವಾರಗಳ ಅವಧಿಯೊಳಗೆ ಆಯೋಗ ಹಿಂದುಳಿದ ಜಾತಿಗಳ ಮೀಸಲಾತಿ ಬಗ್ಗೆ ಮಧ್ಯಂತರ ವರದಿಯನ್ನು ನೀಡಬಹುದು..” ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಈಗಿನ ಬಿಕ್ಕಟ್ಟಿಗೆ ಪರಿಹಾರದ ಮಾರ್ಗವನ್ನೂ ಸೂಚಿಸಿದೆ.
ಈಗಿನ ಬಿಕ್ಕಟ್ಟಿಗೆ ಸುಪ್ರೀಂ ಕೋರ್ಟ್ ಪರಿಹಾರದ ಮಾರ್ಗ ಸೂಚಿಸಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ವೃಥಾ ಕಾಲಹರಣ ಮಾಡಿ ಅವಕಾಶವನ್ನು ಕಳೆದುಕೊಳ್ಳುತ್ತಿದೆ. ಈ ಬಗ್ಗೆ ಎರಡು ತಿಂಗಳುಗಳ ಹಿಂದೆಯೇ ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಎಚ್ಚರಿಸಿದ್ದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿಯೂ ಸಲಹೆಗಳನ್ನು ನೀಡಿದ್ದೆ.
ಸುಪ್ರೀಂ ಕೋರ್ಟ್ ಆದೇಶದ ನಂತರ ಮಹಾರಾಷ್ಟ್ರ ಸರ್ಕಾರ ಅವಸರದಲ್ಲಿ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಪಡೆದ ಮಧ್ಯಂತರ ವರದಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ವೈಜ್ಞಾನಿಕವಾಗಿ ಸಂಗ್ರಹಿಸಿದ ಅಂಕಿ-ಅಂಶಗಳನ್ನು ಸಂಗ್ರಹಿಸದ ಮಧ್ಯಂತರ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕದ ಸ್ಥಿತಿ ಉಳಿದ ರಾಜ್ಯಗಳಿಗಿಂತ ಭಿನ್ನವಾಗಿದೆ. ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ.
ಇಷ್ಟು ಮಾತ್ರವಲ್ಲ, ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಈ ರೀತಿ ಮನೆಮನೆಗೆ ಹೋಗಿ ವೈಜ್ಞಾನಿಕವಾಗಿ ದೇಶದ ಬೇರೆ ಯಾವ ರಾಜ್ಯಗಳಲ್ಲಿಯೂ ಸಮೀಕ್ಷೆಯನ್ನು ನಡೆಸಲಾಗಿಲ್ಲ.
2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ.
ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.
ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಮಂಗಳವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಸಾಮಾಜಿಕ ನ್ಯಾಯದ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಕೈಮೀರಿಹೋಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ವಿಫಲವಾದರೆ ಮುಂದಿನ ಬೆಳವಣಿಗೆಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಸಿದ್ಧವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ಅದನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿ ಅದರ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ಮುಖ್ಯಮಂತ್ರಿ @BSBommai ಅವರನ್ನು ಆಗ್ರಹಿಸುತ್ತೇನೆ.1/16#SocialJustice
— Siddaramaiah (@siddaramaiah) May 11, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ತುಕ್ಕು ಹಿಡಿಯುತ್ತಿವೆ ವಾಹನಗಳು, ಪರಿಕರಗಳು : ಮಹಾನಗರ ಪಾಲಿಕೆ ವಿರುದ್ಧ ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ

ಸುದ್ದಿದಿನ,ದಾವಣಗೆರೆ: ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲೆಕ್ಟ್ರಿಕಲ್ ಆಟೋಗಳು, ಮುಕ್ತಿವಾಹಿನಿ, ಮಿನಿ ಹಿಟಾಚಿ ಕೊಂಡೊಯ್ಯುವ ಲಾರಿ, ಜಟ್ಟಿಂಗ್ ಸ್ಪ್ರೇ, ಕಸ ತುಂಬುವ ಕಾಂಪ್ಯಾಕ್ಟರ್, ತಳ್ಳು ಗಾಡಿಗಳು, ಕಾರ್ಡನ್ ಡಸ್ಟ್ ಸೇರಿದಂತೆ ಪರಿಕರಗಳು ಮಹಾನಗರ ಪಾಲಿಕೆಗೆ ಬಂದಿವೆ. ಆದರೆ ಬಳಕೆ ಮಾಡುವುದನ್ನು ಬಿಟ್ಟು ಪಾಲಿಕೆಯಲ್ಲಿ ಇಟ್ಟಿರುವುದು ಆಡಳಿತ ನಡೆಸುತ್ತಿರುವ ಬಿಜೆಪಿ ಬೇಜಾವಾಬ್ದಾರಿತನಕ್ಕೆ ಸಾಕ್ಷಿ ಎಂದು ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಗಡಿಗುಡಾಳ್ ಮಂಜುನಾಥ್, ಪಾಲಿಕೆ ಸದಸ್ಯ ಎ. ನಾಗರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯಕುಮಾರ್, ಕಾಂಗ್ರೆಸ್ ಮುಖಂಡರಾದ ಜಗದೀಶ್, ಕೊಟ್ರಯ್ಯ, ಇಟುಗುಡಿ ಮಂಜುನಾಥ್, ಜಾಕಿರ್ ಆಲಿ, ಪಂಡಿತ್ ನೇತೃತ್ವದ ತಂಡ ಈ ಬಗ್ಗೆ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ.
ಮುಕ್ತಿ ವಾಹಿನಿ ಬಂದು ಆರು ತಿಂಗಳಾಗಿದೆ. ಒಂದು ವಾಹನ ಒಳಗಡೆ ನಿಲ್ಲಿಸಿದ್ದು ಧೂಳು ಹಿಡಿದು ತುಕ್ಕು ಹಿಡಿಯುವ ಪರಿಸ್ಥಿತಿ ಬಂದಿದೆ. ಮಿನಿ ಹಿಟಾಚಿ ತೆಗೆದುಕೊಂಡು ಹೋಗುವ ಲಾರಿ ಹಾಳಾಗಿದೆ. ಇದನ್ನು ಸರಿಪಡಿಸಲು ಆಗುತ್ತಿಲ್ಲ. ಕೇವಲ ಎರಡು ಸಾವಿರ ರೂಪಾಯಿ ಖರ್ಚು ಮಾಡಿ ದುರಸ್ತಿ ಮಾಡಿಸಲು ಆಗಿಲ್ಲ.
ಈ ಹಿನ್ನೆಲೆಯಲ್ಲಿ ಎರಡು ಹಿಟಾಚಿಗಳು ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಇವು ಹಾಳಾಗುವ ಹಂತ ತಲುಪಿವೆ. ಇನ್ನು ನಾಲ್ಕು ಜಟ್ಟಿಂಗ್ ಸ್ಪ್ರೇ ಇದ್ದು, ಕೊರೊನಾ ಬಂದಾಗ ಸ್ಪ್ರೇ ಮಾಡಿಸಿದ್ದು ಬಿಟ್ಟರೆ ಈಗ ಬಳಸುತ್ತಿಲ್ಲ. ಸ್ಲಂ ಪ್ರದೇಶಗಳು ಹಾಗೂ ಚರಂಡಿಗಳಲ್ಲಿ ಸೊಳ್ಳೆ ನಿಯಂತ್ರಣ ಮಾಡುವ ಇವುಗಳನ್ನು ಹಾಗೆಯೇ ಇಡಲಾಗಿದೆ. ಕೇಳಿದರೆ ಕೆಮಿಕಲ್ ಇಲ್ಲ ಎಂಬ ಉಡಾಫೆ ಉತ್ತರ ಸಿಗುತ್ತಿದೆ. ಟೆಂಡರ್ ಆಗಿಲ್ಲ, ಎರಡು ಮಾತ್ರ ಬಳಕೆ ಮಾಡಲಾಗುತ್ತಿದೆ, ಇನ್ನೆರಡನ್ನು ಉಪಯೋಗಿಸುತ್ತಿಲ್ಲ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕದ ಪಪಥಮ ರೋಲ್ಬಾಲ್ ಆಟದ ತರಬೇತುದಾರರಾಗಿ ಪೃಥ್ವಿಕಾಂತ್ ಎಸ್. ಕೊಟಗಿ ಆಯ್ಕೆ

ಸುದ್ದಿದಿನ,ದಾವಣಗೆರೆ : ರೋಲರ್ ಸ್ಟೇಟಿಂಗ್ ಸೆಂಟರ್ ತರಬೇತುದಾರರಾದ ಪೃಥ್ವಿಕಾಂತ್’ ಎನ್.ಕೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೋಲ್ ಬಾಲ್ ಆಟದ ಕರ್ನಾಟಕದಿಂದ ಪ್ರಪ್ರಥಮವಾಗಿ ವೈಸ್ ಕ್ಯಾಪ್ಟನ್ ಆಗಿ ಆಯ್ಕೆಗೊಂಡಿರುತ್ತಾರೆ.
2005ರಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ರೋಲ್ಬಾಲ್ ಆಟದ ಕೋಚ್ ಆಗಿದ್ದರು. 2022ರ ಮೇ ಮತ್ತು ಜೂನ್ ತಿಂಗಳಿನಲ್ಲಿ 6 ವಾರಗಳ ಕಾಲ ನಡೆದ ರೋಲ್ ಬಾಲ್ ಆಟದ ತರಬೇತಿಯಲ್ಲಿ ಸ್ಪರ್ಧಿಸಿದ್ದು, ಇವರು ಎನ್ಐಎಸ್ ಎಸ್ಐ (NIS, SAI) ಪಟಿಯಾಲ ಈ (ಪಂಜಾಬ್)ದಿಂದ ಅಧಿಕೃತವಾಗಿ ಪ್ರಪ್ರಥಮ ಕೋಚ್ ಆಗಿ ನೇಮಕಗೊಂಡಿರುತ್ತಾರೆ. ಇವರ ಅತೀ ದೊಡ್ಡ ಸಾಧನೆಯಾಗಿದ್ದು ದಾವಣಗೆರೆ ನಗರಕ್ಕೆ ಕೀರ್ತಿತಂದಿದ್ದಾರೆ.
ಇವರು ಎನ್ ಐಐಟಿಯ ಸಾಘವೇರ್ ತರಬೇತುದಾರರೂ ಕೂಡ = ಆಗಿರುತ್ತಾರೆ. ಇವರಿಗೆ ತಂದೆ ನೀಲಕಾಂತ್, ತಾಯಿ ಶೈಲ ನೀಲಕಾಂತ್ ಸೇರಿದಂತೆ ಸ್ನೇಹಿತರು, ನಗರದ ಹಿರಿಯರು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

ಸುದ್ದಿದಿನ ಡೆಸ್ಕ್ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪುಸ್ತಕ ಪ್ರಶಸ್ತಿಗಾಗಿ 2021-22 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ.
ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ 22 ವರ್ಷಗಳಿಂದಲೂ ‘ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ’ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಆದರೇ, ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು ಹಿಂದಿ ಮತ್ತು ಸಂಸ್ಕೃತ ಕೃತಿಗಳಲ್ಲಿ ಉತ್ತಮ ಕೃತಿ ಆಯ್ಕೆಮಾಡಿ ಉತ್ತಮ ಕೃತಿ ಕರ್ತರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವದು.
ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ‘ರಾಜ್ಯ ಪ್ರಶಸ್ತಿಯು 5 ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಕೃತಿ ಕರ್ತರಿಗೆ ಡಾ. ಪಂ. ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸೇವಾ ಸಮಿತಿಯ ರಾಜ್ಯ ಸಂಚಾಲಕಿ ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಶಸ್ತಿಗೆ ಸಮೀಪದ ಪ್ರತಿಸ್ಪರ್ಧಿಯಾದ ವಿವಿದ ಪ್ರಕಾರದ 10 ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿ ಸಮ್ಮಾನ ನೀಡಿ ಗೌರವಿಸಲಾಗುವುದು. ಆಸಕ್ತ ಲೇಖಕರು ತಮ್ಮ 3 ಕೃತಿಗಳೊಂದಿಗೆ 27 ಜುಲೈ 2022 ರ ಒಳಗಾಗಿ ತಲುಪುವಂತೆ ಕಳಿಸಿಕೊಡಲು ಕೋರಲಾಗಿದೆ.
ಪುಸ್ತಕಗಳನ್ನು ಕಳಿಸಿಕೊಡುವ ವಿಳಾಸ
ಸಿ. ಕೆ. ಹಿರೇಮಠ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ ‘ಶ್ರೀಗಿರಿ ಬಿಲ್ಡಿಂಗ’ ಪಂಚಾಕ್ಷರಿ ನಗರ ೪ ನೆಯ ಅಡ್ಡರಸ್ತೆ ಗದಗ-582101
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ4 days ago
ಮಹಾರಾಷ್ಟ್ರ ಸರ್ಕಾರ ಉರುಳಲು ಬಿಜೆಪಿ ಕುತಂತ್ರ ಕಾರಣ, ಇದು ದೇಶಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ
-
ನಿತ್ಯ ಭವಿಷ್ಯ6 days ago
ಗುರುವಾರ ರಾಶಿ ಭವಿಷ್ಯ-ಜೂನ್-30,2022 : ಈ ರಾಶಿಯವರು ನಿಮ್ಮ ಸಂಗಾತಿಗೆ ಹೃದಯದಲ್ಲಿ ಅಡಿಗಿರುವ ಸತ್ಯಾಂಶ ಬಹಿರಂಗಪಡಿಸುವ ದಿನ
-
ನಿತ್ಯ ಭವಿಷ್ಯ5 days ago
ಶುಕ್ರವಾರ- ರಾಶಿ ಭವಿಷ್ಯ ಜುಲೈ-1,2022 : ಈ ರಾಶಿಯವರಿಗೆ ಇಷ್ಟ ಇರದ ಮದುವೆ! ಆದರೆ ಈ ರಾಶಿಯವರಿಗೆ ಇಷ್ಟ ಇರದ ಉದ್ಯೋಗ!
-
ದಿನದ ಸುದ್ದಿ4 days ago
ಅಕ್ರಮ ಹಣ ವರ್ಗಾವಣೆ ಕೇಸ್ : ಡಿ.ಕೆ ಶಿವಕುಮಾರ್’ಗೆ ಜಾಮೀನು ಅರ್ಜಿ ವಿಚಾರಣೆ ಜುಲೈ 30 ಕ್ಕೆ ಮುಂದೂಡಿಕೆ
-
ದಿನದ ಸುದ್ದಿ4 days ago
ನೇರ ಪಾವತಿ ಪೌರಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ : ಸಿಎಂ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ4 days ago
ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಮಾರುತ್ತಿರುವ ವಿಡಿಯೋ ವೈರಲ್.!
-
ದಿನದ ಸುದ್ದಿ7 days ago
ಉದಯಪುರ ಹತ್ಯೆ ಭಯೋತ್ಪಾದಕ ಕೃತ್ಯ ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡನೆ
-
ದಿನದ ಸುದ್ದಿ4 days ago
ಬಿಜೆಪಿಯ ನೂಪುರ್ ಶರ್ಮಾ’ಗೆ ಸುಪ್ರೀಂಕೋರ್ಟ್ ತರಾಟೆ