Connect with us

ರಾಜಕೀಯ

ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ.

ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ಕೆ.ಸಿ. ರಾಮಮೂರ್ತಿ, ಜೈರಾಮ್ ರಮೇಶ್, ಆಸ್ಕರ್ ಫರ್ನಾಂಡೀಸ್ ಮತ್ತು ನಿರ್ಮಲಾ ಸೀತಾರಾಮನ್ ಅವರ ಅವಧಿ ಇದೇ ಜೂನ್‌ನಲ್ಲಿ ಕೊನೆಗೊಳ್ಳಲಿದೆ.

ಈ ತಿಂಗಳ 24ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಮೇ 31ಕೊನೆಯ ದಿನಾಂಕವಾಗಿದೆ. ಮರುದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 3 ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕಡೆಯ ದಿನಾಂಕವಾಗಿದೆ. ಜೂನ್ 10ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ 5 ಗಂಟೆಯ ನಂತರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 13ಕ್ಕೆ ಒಟ್ಟಾರೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾಜಿ ಸಚಿವ ಜಮೀರ್ ಅಹಮ್ಮದ್ ಮನೆ ಮೇಲೆ ಎಸಿಬಿ ದಾಳಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಮಾಜಿ ಸಚಿವ ಜಮೀರ್ ಅಹಮ್ಮದ್ ಮನೆ ಮೇಲೆ ಭ್ರಷ್ಟಾಚಾರ ತನಿಖಾ ದಳ (ಎಸಿಬಿ) ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ.

ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡ ಎಸಿಬಿ ಮಂಗಳವಾರ(ಇಂದು) ಬೆಳಿಗ್ಗೆ ಜಮೀರ್ ಕವೇರಿ ಮನೆ ಸೇರಿದಂತೆ ಐದು ಕಡೆ ದಾಳಿ ಮಾಡಿದೆ.

ಏಕಕಾಲಕ್ಕೆ ಈ ದಾಳಿಯನ್ನು ನಡೆಸಲಾಗಿದ್ದು, ಇನ್ನು ಕಂಟೋನ್ಮಂಟ್ ರೈಲ್ವೇ ನಿಲ್ದಾಣ ಬಳಿಯ ಜಮೀರ್ ನಿವಾಸ, ಸಿಲ್ವರ್ ಓಕ್ ಅಪಾರ್ಟೆಂಟ್ ನಲ್ಲಿಯ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಮುವಾದ, ವಂಶಾಡಳಿತದ ರಾಜಕಾರಣ ಹಿಮ್ಮೆಟ್ಟಿಸಲು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜಕೀಯ ದಕ್ಷತೆ ಮತ್ತು ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡಬೇಕು ಹಾಗೂ ತುಷ್ಟೀಕರಣ ಕೋಮುವಾದ ಮತ್ತು ವಂಶಾಡಳಿತ ರಾಜಕಾರಣವನ್ನು ಸೋಲಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಸ್ಪಷ್ಟ ಕರೆ ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಾಕಾರಣಿ ಸಭೆಯಲ್ಲಿ ಇಂದು ಕೈಗೊಂಡ ರಾಜಕೀಯ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆ ನಂತರ ರಾಜಕೀಯ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ರಾಜಕೀಯ ನಿರ್ಣಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದರೆ, ಕರ್ನಾಟಕ ಹಾಗೂ ಅಸ್ಸಾಂನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಹಿಮಂತ್ ಬಿಸ್ವಾ ಶರ್ಮಾ ಅನುಮೋದಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಸ್ವಾ ಶರ್ಮಾ, ನಿರ್ಣಯ ಕುರಿತು ವಿಸ್ತೃತ ಚರ್ಚೆ ನಡೆದ ನಂತರ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದರು.

ರಾಜಕೀಯ ನಿರ್ಣಯ ಕುರಿತು ವಿವರಿಸಿದ ಅವರು, ಗುಜರಾತ್ ಗಲಭೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಮಾಡಿದ್ದ ರಾಜಕೀಯ ದುರುದ್ದೇಶದ ಆರೋಪಗಳನ್ನು ತಳ್ಳಿ ಹಾಕಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪನ್ನು ಕಾರ್ಯಾಕಾರಿಣಿ ಸಭೆಯಲ್ಲಿ ಸ್ವಾಗತಿಸಲಾಯಿತು ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೀಲಕಂಠನ ತರ ಎಲ್ಲವನ್ನು ನುಂಗಿಕೊಂಡು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸಿದ್ದನ್ನು ಸಭೆಯಲ್ಲಿ ಶ್ಲಾಘಿಸಲಾಯಿತು. ಸಮಾಧಾನ ಚಿತ್ತದಿಂದ ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡ ಪ್ರಧಾನಮಂತ್ರಿ ಅವರ ನಡೆಗೆ ಕಾರ್ಯಾಕಾರಿಣಿ ಮೆಚ್ಚಿಗೆ ವ್ಯಕ್ತಪಡಿಸಿತು ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರತಿಯೊಂದು ಯೋಜನೆ ಕಾರ್ಯಕ್ರಮ ಮತ್ತು ಕೈಗೊಂಡ ನಿರ್ಣಯಗಳನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದನ್ನು ಖಂಡಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ವಂಶಾಡಳಿತವೇ ರಾಜಕಾರಣ ಎಂದು ಭಾವಿಸಿದೆ. ಆದರೆ, ಬಿಜೆಪಿ ರಾಜಕಾರಣವನ್ನು ಒಂದು ಸೇವೆ ಎಂದು ಪರಿಗಣಿಸಿದೆ ಎಂದು ಹೇಳಲಾಗಿದೆ.

2014ಕ್ಕೆ ಮುನ್ನ ದೇಶ ರಾಜಕೀಯ ಅಸ್ಥಿರತೆ, ಪ್ರಾದೇಶಿಕತೆ ಮತ್ತು ಆರ್ಥಿಕ ದಿವಾಳಿತನದಿಂದ ಬಳಲುತಿತ್ತು ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿರುವ ಪ್ರಧಾನಿ ಅವರ ನಿರ್ಧಾರವನ್ನು ಸ್ವಾಗತಿಸಿ ನಿರ್ಣಯ ಕೈಗೊಳ್ಳಲಾಗಿದೆ.

ಸಂವಿಧಾನದ 370ನೇ ವಿಧಿ ರದ್ದು ಬಡವರ ಉದ್ದಾರಕ್ಕಾಗಿ ಹಲವಾರು ಯೋಜನೆಗಳ ಜಾರಿ, ಅಗ್ನಿಪಥ್ ಮತ್ತು ಒಂದು ಶ್ರೇಣಿ ಒಂದು ಪಿಂಚಣಿಯಂತಹ ಉಪಕ್ರಮಗಳನ್ನು ಕೈಗೊಳ್ಳುವ ಮೂಲಕ ದಿಟ್ಟತನ ತೋರಿದ ಪ್ರಧಾನಿ ಅವರ ದೋರಣೆಯನ್ನು ನಿರ್ಣಯದಲ್ಲಿ ಶ್ಲಾಘಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೌರ ಕಾರ್ಮಿಕರ ಹೋರಾಟಕ್ಕೆ ಸಿದ್ದರಾಮಯ್ಯ ಬೆಂಬಲ

Published

on

ಸುದ್ದಿದಿನ,ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಪೌರ ಕಾರ್ಮಿಕರೊಂದಿಗೆ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ವಿಚಾರದಲ್ಲಿ ಸರ್ಕಾರ ಬಾಯಿ ಮಾತಿನ ಭರವಸೆ ನೀಡಿದೆ. ಆದರೆ, ಈ ಬೇಡಿಕೆಗಳನ್ನು ಈಡೇರಿಸಿ ಅಧಿಕೃತ ಆದೇಶ ಹೊರಡಿಸಬೇಕು. ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಬರವಣಿಗೆಯಲ್ಲಿ ಭರವಸೆ ನೀಡಿದೆ. ಆದರೆ ಅಧಿಕೃತ ಆದೇಶ ಹೊರಡಿಸಿಲ್ಲ. ಈ ರೀತಿ ಮೋಸ ಮಾಡದೆ ಕೂಡಲೇ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸುವುದಾಗಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending