ಕ್ರೀಡೆ
ಶುಕ್ರವಾರ | ಬೆಳಗಿನ ಪ್ರಮುಖ ಸುದ್ದಿಗಳು

ಶುಕ್ರವಾರ | ಬೆಳಗಿನ ಪ್ರಮುಖ ಸುದ್ದಿಗಳು
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದೂ ಕೂಡ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೀಕ್ಷಣೆಯನ್ನು ಮುಂದುವರೆಸಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ ಮತ್ತು ಪೈ ಬಡಾವಣೆಗಳಿಗೆ ಅವರು ಭೇಟಿ ನೀಡಲಿದ್ದಾರೆ.
- ಪರಿಷ್ಕೃತ ಕ್ರಿಯಾ ಯೋಜನೆ 2015 ರಲ್ಲಿ ಲೋಪವಿದೆ ಎಂಬ ಕಾರಣಕ್ಕೆ ಜಲ ಮೂಲಗಳ ಬಳಕೆಯನ್ನು ವಸತಿ ಉದ್ದೇಶಕ್ಕೆ ಪರಿವರ್ತಿಸುವ ಕುರಿತಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹೊರಡಿಸಿದ್ದ ಅಧಿಸೂಚನೆಯನ್ನು ತಕ್ಷಣವೇ ರದ್ದುಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡಿಎ ಆಯುಕ್ತರಿಗೆ ಸೂಚಿಸಿದ್ದಾರೆ. ಅದರಂತೆ ಬಿಡಿಎ ಆಯುಕ್ತರು ಅಧಿಸೂಚನೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
- ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಉಡುಪಿ, ವಿಜಯಪುರ, ಬೆಳಗಾವಿ, ತಿಪಟೂರು ಸೇರಿ ಹಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ವತಃ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
- ಬೆಸ್ಕಾಂನ ಎಲ್ಲ ಕಾರ್ಯ ಮತ್ತು ಪಾಲನ ವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಅಂದರೆ, ನಾಳೆ ಮಧ್ಯಾಹ್ನ 3 ಗಂಟೆಯಿಂದ 5.30ರವರೆಗೆ ಗ್ರಾಹಕ ಸಂವಾದ ಸಭೆಗಳನ್ನು ನಡೆಸಲಾಗುವುದು. ಗ್ರಾಹಕರು ವಿದ್ಯುತ್ಗೆ ಸಂಬಂಧಿಸಿದ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.
- ಜೈಪುರದಲ್ಲಿ ಇಂದು ನಡೆಯಲಿರುವ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನಂತರ ಅವರು ಪಕ್ಷದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
- ಇಂದಿನಿಂದಲೇ ಜಾರಿಗೆ ಬರುವಂತೆ ಕಚ್ಚಾ ಸೆಣಬಿನ ಮೇಲಿನ ಬೆಲೆ ಮಿತಿಯನ್ನು ತೆಗೆದುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷ ಸೆಪ್ಟಂಬರ್ 30ರಂದು ಸೆಣಬು ಕಾರ್ಖಾನೆಗಳು ಮತ್ತು ಇತರೆ ಬಳಕೆದಾರರು ಟಿಡಿ5 ದರ್ಜೆಯ ಸೆಣಬು ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 6ಸಾವಿರದ 500ರೂಪಾಯಿ ಬೆಲೆ ಮಿತಿ ನಿಗದಿಪಡಿಸಲಾಗಿತ್ತು. ಕಚ್ಚಾ ಸೆಣಬು ವ್ಯಾಪಾರದ ಮಾರುಕಟ್ಟೆಯ ಎಲ್ಲ ಆಯಾಮಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
- ಐಪಿಎಲ್ ಟಿ-20 ಕ್ರಿಕೆಟ್ನಲ್ಲಿಂದು ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
- ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
- ಇದೇ 22ರಂದು ಫಿಲ್ಮಾಹಾಲಿಕ್ ಫೌಂಡೇಶನ್ ವತಿಯಿಂದ 3ನೇ ವರ್ಷದ ಕರ್ನಾಟಕ ಯುವ ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ ಮತ್ತು ಮೈಸೂರು ಅಂತಾರಾಷ್ಟ್ರೀಯ ಜಲ ಚಲನಚಿತ್ರೋತ್ಸವ ಆಯೋಜಿಸಲಾಗಿದೆ. ಮೈಸೂರಿನ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ಅಂತರಾಷ್ಟ್ರೀಯ ಜಲ ಚಲನಚಿತ್ರೋತ್ಸವದ ಮುಖ್ಯ ಉದ್ದೇಶ ಹೊಸ ತಲೆಮಾರಿನ ಚಲನಚಿತ್ರ ತಯಾರಕರಿಗೆ ಕಲಾತ್ಮಕ ಸೃಜನಶೀಲತೆಯನ್ನು ಪೋಷಿಸಿ ಮತ್ತು ಉತ್ತೇಜಿಸಿ ಅವರ ಚಲನಚಿತ್ರವನ್ನು ದೊಡ್ಡ ಮಟ್ಟದಲ್ಲಿ ಪ್ರದರ್ಶಿಸುವುದೇ ಆಗಿದೆ. 91ಕ್ಕೂ ಹೆಚ್ಚು ದೇಶಗಳ ಚಲನಚಿತ್ರ ತಯಾರಕರು ಭಾಗವಹಿಸಲಿದ್ದಾರೆ.
- ಚಾಮರಾಜನಗರ ತಾಲೂಕಿನ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಜಲಾಶಯಗಳು ಯಾವುದೇ ಸಮಯದಲ್ಲಿ ಭರ್ತಿಯಾಗಬಹುದಾಗಿದೆ. ಜಲಾಶಯಗಳ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲೆಗಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮನವಿ ಮಾಡಿದ್ದಾರೆ.
- ಮಂಡ್ಯದಲ್ಲಿ ಭಾರಿ ಮಳೆಯಿಂದ ಬೀಡಿ ಕಾಲೋನಿಯ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲಾಧಿಕಾರಿ ಎಸ್. ಅಶ್ವತಿ ಬೀಡಿ ಕಾಲೋನಿಗೆ ಭೇಟಿ ನೀಡಿ, ಪರಿಶೀಲಿಸಿ ಸದ್ಯಕ್ಕೆ ಕಾಲೋನಿಯ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
- ಮುಂಗಾರು ಋತುವಿನಲ್ಲಿ ವಿದ್ಯುತ್ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಕೂಡಲೆ ಅಗತ್ಯ ಪ್ರಮಾಣದ ಕಲ್ಲಿದ್ದಲು ಆಮದು ಮಾಡಿಕೊಳ್ಳಲು ವಿದ್ಯುತ್ ಉತ್ಪಾದನಾ ಸಂಸ್ಥೆಗಳಿಗೆ ಸೂಚಿಸುವಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರಕಾರ ಸಲಹೆ ನೀಡಿದೆ. ರಾಜ್ಯ ಸರ್ಕಾರಗಳು ವಿದ್ಯುತ್ ಉತ್ಪಾದನೆಗಾಗಿ ಕೂಡಲೇ ಅಗತ್ಯ ಕಲ್ಲಿದ್ದಲು ಪ್ರಮಾಣದ ಶೇಕಡ10ರಷ್ಟನ್ನು ಆಮದು ಮಾಡಿಕೊಳ್ಳುವಂತೆ ಹಾಗೂ ಈ ತಿಂಗಳ 31ರೊಳಗೆ ಕಲ್ಲಿದ್ದಲು ಆಮದು ಆರ್ಡರ್ ನೀಡುವಂತೆ ಸಚಿವ ಆರ್ಕೆ ಸಿಂಗ್ ಸೂಚಿಸಿದ್ದಾರೆ.
- ಇದೇ 21 ಮತ್ತು 22ರಂದು ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಯಾದಗಿರಿ ಜಿಲ್ಲೆಯಲ್ಲಿ ನಡೆಯಲಿದ್ದು, 6 ಸಾವಿರದ 625 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ರಾಗಪ್ರಿಯಾ ಯಾದಗಿರಿಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೇ 21ರಂದು ನಿಗದಿಯಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೇ 27ಕ್ಕೆ ಮುಂದೂಡಲಾಗಿದೆ. ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿರುವುದರಿಂದ ಚುನಾವಣಾ ನೀತಿ ಸಂಹಿತೆ ಹಾಗೂ ಶಿಕ್ಷಣ ಇಲಾಖೆಯ ಟಿಇಟಿ ಪರೀಕ್ಷೆಯನ್ನು ಮೇ 21 ರಂದು ನಿಗದಿಗೊಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
- ದಾವಣಗೆರೆ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದ ಕೆರೆ ಕಟ್ಟೆಗಳಿಗೆ ನೀರು ಬಂದಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕಿನಲ್ಲಿ ಕೊಯ್ಲಿಗೆ ಬಂದಿದ್ದ ಭತ್ತ ನೆಲ ಕಚ್ಚಿದ್ದು, 1 ಸಾವಿರಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಬೆಳೆ ಹಾಳಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
- ಅವಧಿಗೆ ಮುನ್ನವೇ ಮುಂಗಾರು ಅಪ್ಪಳಿಸಿರುವ ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಇಂದು ಕೂಡ ಕೇರಳ ರಾಜಧಾನಿ ತಿರುವನಂತಪುರಂ, ಕೊಲ್ಲಂ ಸೇರಿದಂತೆ ಒಟ್ಟು 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
- ವಾರ್ಷಿಕ ಅಮರನಾಥ ಯಾತ್ರೆ ಹಾಗೂ ಮಚಲಿ ಯಾತ್ರೆಯ ಹಿನ್ನೆಲೆಯಲ್ಲಿ ಸೇನಾ ಪಡೆಗಳ ಹಾಗೂ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಭದ್ರತಾ ಪರಿಶೀಲನೆ ನಡೆಸಿದರು. ಲೆಫ್ಟಿನೆಂಟ್ ಜನರಲ್ ಮಂಜಿಂದರ್ ಸಿಂಗ್ ನೇತೃತ್ವದಲ್ಲಿ ಸೇನಾ ಪಡೆಗಳ ತಂಡ ಜಮ್ಮು ವಲಯದ ನಗ್ರೋಟಾ ಎಂಬಲ್ಲಿ ಭದ್ರತಾ ಸಿದ್ಧತೆಗಳ ಪರಿಶೀಲನೆ ನಡೆಸಿತು. ಜಮ್ಮು ಪೊಲೀಸ್ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ ಮುಖೇಶ್ ಸಿಂಗ್ ಹಾಗೂ ಗುಪ್ತಚರ ದಳದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
- ಐಪಿಎಲ್ ಕ್ರಿಕೆಟ್ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್ಗಳಿಂದ ಜಯಗಳಿಸಿದೆ. ಟೈಟನ್ಸ್ ತಂಡ ಒಡ್ಡಿದ 169ರನ್ಗಳ ಗುರಿ ಬೆನ್ನೆತ್ತಿದ ಬೆಂಗಳೂರು ತಂಡ ಇನ್ನೂ 8ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 170ರನ್ಗಳಿಸಿ ಗೆಲುವಿನ ನಗೆ ಬೀರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ವಿಸ್ತರಿಸುವ ಬಗ್ಗೆ ಜಿಎಸ್ಟಿ ಮಂಡಳಿ ಸಭೆಯಲ್ಲಿ ಚರ್ಚೆಯಾಗಿದೆ. ಆಗಸ್ಟ್ನಲ್ಲಿ ಇದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ.
- ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ನಿವೇಶನಕ್ಕಾಗಿ ಪುರಸಭೆಯ ಅಧೀನದಲ್ಲಿರುವ ಸ್ಥಳವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದ್ದಾರೆ.
- ಮುಂಗಾರು ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(1-7-22) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಇದರ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
- ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನಾವೀಸ್ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಭಗತ್ಸಿಂಗ್ ಕೋಶಿಯಾರಿ ಉಭಯ ನಾಯಕರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
- ದೇಶದಲ್ಲಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು-ಎಂಎಸ್ಎಂಇ ವಲಯವನ್ನು ಉತ್ತೇಜಿಸಲು ಸರ್ಕಾರ ನೀತಿಯಲ್ಲಿ ಅಗತ್ಯ ಬದಲಾವಣೆ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಉದ್ಯಮಿ ಭಾರತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 8 ವರ್ಷಗಳಲ್ಲಿ ಈ ವಲಯವನ್ನು ಬಲಪಡಿಸಲು ಬಜೆಟ್ ಅನುದಾನವನ್ನು ಶೇಕಡ 650ರಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
- ಭಾರತ ಮತ್ತು ಇಂಗ್ಲೆಂಡ್ ನಡುವಿನ ಪೂರ್ವನಿಗದಿತ 5ನೇ ಟೆಸ್ಟ್ ಕ್ರಿಕೆಟ್ ಪಂದ್ಯ ಬರ್ನಿಂಗ್ ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಇಂದು 3 ಗಂಟೆಗೆ ಆರಂಭಗೊಳ್ಳಲಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ 2-1ರ ಮುನ್ನಡೆಯಲಿದೆ. ಕಪಿಲ್ದೇವ್ ನಂತರ ಭಾರತದ ತಂಡವನ್ನು ಜಪ್ರೀತ್ ಬೂಮ್ರಾ ಮುನ್ನಡೆಸಲಿದ್ದಾರೆ.
- ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಸಾಲುಮರದ ತಿಮ್ಮಕ್ಕನವರ 111ನೇ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್ಸೀರಿಸ್ ಮಾಡಲಾಗುವುದು ಎಂದು ಹೇಳಿದರು.
- ಇಳಕಲ್ ಡ್ಯಾಂ ಬಳಿ ನೂತನ ಮೃಗಾಲಯ ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಉದ್ದೇಶಿತ 100 ಎಕರೆ ಪ್ರದೇಶದಲ್ಲಿ ಮೃಗಾಲಯ ನಿರ್ಮಾಣವಾದರೆ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಮೈಸೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.
- ಕೊರೊನಾ ಸಾಂಕ್ರಾಮಿಕ ಕಾರಣ ಕಳೆದ ಎರಡು ವರ್ಷ ಸರಳ, ಸಂಪ್ರದಾಯ ಆಚರಣೆಗೆ ಮಾತ್ರ ಸೀಮಿತವಾಗಿದ್ದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಆಷಾಢ ಪೂಜೆ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ. ಇಂದು ಮೊದಲ ಆಷಾಢ ಶುಕ್ರವಾರವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಆಷಾಢ ಶುಕ್ರವಾರದಲ್ಲಿ ನಾಡದೇವತೆ ಚಾಮುಂಡಿಗೆ ವಿಶೇಷ ಪೂಜೆ ಪುರಸ್ಕಾರ ನೆರವೇರಲಿದೆ.
- ವ್ಯಾಪಾರ ಸುಧಾರಣಾ ಕಾರ್ಯ ಯೋಜನೆ-ಬಿಆರ್ಎಪಿ-2020 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ನಿನ್ನೆ ಬಿಡುಗಡೆ ಮಾಡಿದರು. ಈ ಯೋಜನೆಯ ಅನುಷ್ಠಾನದ ಆಧಾರದ ಮೇಲೆ 7 ರಾಜ್ಯಗಳನ್ನು ಅಗ್ರಗಣ್ಯ ಸಾಧಕ ರಾಜ್ಯಗಳೆಂದು ವರದಿಯಲ್ಲಿ ಗುರುತಿಸಲಾಗಿದೆ. ಈ 7 ರಾಜ್ಯಗಳ ಪೈಕಿ ಕರ್ನಾಟಕವೂ ಸೇರಿದೆ.
- ಖಾದಿ ಮತ್ತು ಗ್ರಾಮೀಣ ಕೈಗಾರಿಕೆಗಳ ಉತ್ಪನ್ನಗಳ ವಹಿವಾಟು 1 ಲಕ್ಷ ಕೋಟಿ ರೂಪಾಯಿಯನ್ನು ಮೀರಿದೆ. ಕಳೆದ 8 ವರ್ಷಗಳಲ್ಲಿ ಖಾದಿ ಉತ್ಪನ್ನಗಳ ಮಾರಾಟ ನಾಲ್ಕು ಪಟ್ಟು ಹೆಚ್ಚಾಗಿದೆ. ಉದ್ಯಮಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ದುರ್ಬಲ ವರ್ಗದವರಿಗೆ ಖಾತರಿ ಇಲ್ಲದೆ ಸಾಲ ಪಡೆಯುವುದೇ ದುರ್ಲಬವಾಗಿದೆ. 2014ರ ನಂತರ ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಘೋಷ ವಾಕ್ಯದ ಮೂಲಕ ಉದ್ಯಮಗಳ ಸ್ಥಾಪನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ಪದ್ಮ ಶ್ರೀ ನಾಡೋಜ ಡಾ. ಸಾಲಮರದ ತಿಮ್ಮಕ್ಕನವರ 111ನೇ ಜನ್ಮದಿನ ಹಾಗೂ 2020ರ ನ್ಯಾಷನಲ್ ಗ್ರೀನರಿ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಬೆಳಗ್ಗೆ10:30ಕ್ಕೆ ನವದೆಹಲಿಯಲ್ಲಿ ನಡೆಯಲಿರುವ ’ಉದ್ಯಮಿ ಭಾರತ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನಿ ಎಂಎಸ್ಎಂಇ ಕಾರ್ಯಕ್ಷಮತೆ ಹೆಚ್ಚಳ ಮತ್ತು ವೇಗವರ್ಧನೆ, ಮೊದಲ ಬಾರಿಯ ಎಂಎಸ್ಎಂಇ ರಫ್ತುದಾರರ ಸಾಮರ್ಥ್ಯ ವೃದ್ಧಿ ಯೋಜನೆ ಮತ್ತು ಪ್ರಧಾನಮಂತ್ರಿ ಉದ್ಯೋಗ ಸೃಜನೆ ಕಾರ್ಯಕ್ರಮದ ಹೊಸ ವೈಶಿಷ್ಟ್ಯಗಳಿಗೆ ಚಾಲನೆ ನೀಡಲಿದ್ದಾರೆ.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 21 ರಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಂಡ್ಯದಲ್ಲಿ ನಿನ್ನೆ ಹೇಳಿದ್ದಾರೆ.
ಜನರಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಕುರಿತು ಜಾಗೃತಿ ಮೂಡಿಸಲು ಜುಲೈ1 ರಿಂದ 6ರವರೆಗೆ ಇವಿ ಅಭಿಯಾನವನ್ನು ಏರ್ಪಡಿಸಲಾಗಿದೆ. ಈ ಅಭಿಯಾನ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ವಿವಿಧ ಸಂಘಸಂಸ್ಥೆಗಳು, ಕಾಲೇಜುಗಳ ಜೊತೆ ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
- ಮಕ್ಕಳ ಮೇಲಿನ ದೌರ್ಜನ್ಯ ವಿರುದ್ಧದ ದೂರುಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಬೇಕೆಂದು ಚಾಮರಾಜನಗರ ಜಿಲ್ಲಾ ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಪೊಲೀಸರಿಗೆ ತಿಳಿಸಿದ್ದಾರೆ.
- ಪ್ರಾಥಮಿಕ ಕೃಷಿ ಸಾಲ ಸಂಸ್ಥೆ-ಪಿಎಸಿಎಸ್ಗಳನ್ನು ಕಂಪ್ಯೂಟರೀಕರಣಗೊಳಿಸಲು ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ರಾಜ್ಯ ಸಹಕಾರಿ ಬ್ಯಾಂಕುಗಳು ಮತ್ತು ಜಿಲ್ಲಾ ಕೇಂದ್ರೀಯ ಸಹಕಾರಿ ಬ್ಯಾಂಕುಗಳು ನಬಾರ್ಡ್ ವ್ಯಾಪ್ತಿಗೆ ಒಳಪಟ್ಟಿದ್ದು, ಇವುಗಳಲ್ಲಿ ಕಾಮನ್ ಬ್ಯಾಂಕಿಂಗ್ ಸಾಫ್ಟ್ವೇರ್ ಸೌಲಭ್ಯ ಈಗಾಗಲೇ ಚಾಲ್ತಿಯಲ್ಲಿವೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ನಿನ್ನೆ ತಿಳಿಸಿದ್ದಾರೆ. ಈ ನಿರ್ಧಾರದಿಂದ ಅಡುಗೆ ಎಣ್ಣೆ ತಯಾರಕರು ಮುಕ್ತವಾಗಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.
- ರಾಜ್ಯದಲ್ಲಿ 1 ಸಾವಿರದ 200 ಐಟಿಐ ಸಂಸ್ಥೆಗಳಿದ್ದು, ಇವುಗಳಲ್ಲಿ ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ದೀರ್ಘಾವಧಿ ಕೋರ್ಸ್ಗಳನ್ನು ಕಲಿಯಲು ಮತ್ತು 1 ಲಕ್ಷ ವಿದ್ಯಾರ್ಥಿಗಳಿಗೆ ಅಲ್ಪವಾಧಿ ಕೋರ್ಸ್ಗಳನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ. ಪಾಲಿಟೆಕ್ನಿಕ್ಗಳಲ್ಲಿ ಈ ಮುನ್ನ 30 ಸಾವಿರದಷ್ಟು ಇದ್ದ ಪ್ರವೇಶಾತಿ ಈಗ 75 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಕುಂದಾಪುರದಲ್ಲಿ ಹೇಳಿದ್ದಾರೆ.
- ಕೇಂದ್ರ ಸರ್ಕಾರದ ಯೋಜನೆಗಳಾದ ಪಿ.ಎಂ.ಸ್ವನಿಧಿ ಯೋಜನೆ, ಮಾತೃವಂಧನ, ಪ್ರಧಾನಮಂತ್ರಿ ಮತ್ಸ್ಯ ಸಂಪದ, ಆಯುಷ್ಮಾನ ಭಾರತ ಆರೋಗ್ಯ ವಿಮೆ ಸೇರಿದಂತೆ ವಿವಿಧ ಯೋಜನೆಗಳ ಲಾಭ ಎಲ್ಲಾ ವರ್ಗದ ಜನರಿಗೆ ದೊರೆಯುವಂತಾಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಬೀದರ್ನಲ್ಲಿ ತಿಳಿಸಿದ್ದಾರೆ.
- ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮರಾಜು ಅವರ 125ನೇ ಜನ್ಮ ದಿನದ ಅಂಗವಾಗಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂ ಪಟ್ಟಣದಲ್ಲಿ ಜುಲೈ 4 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು, ಅಲ್ಲೂರಿ ಸೀತಾರಾಮರಾಜು ಅವರ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ.
- ಶ್ರೀ ಅಮರನಾಥ ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾಶ್ಮೀರ ಕಣಿವೆಯಲ್ಲಿ ನಿನ್ನೆ ಹಸಿರು ನಿಶಾನೆ ತೋರಿದರು. ಬಿಗಿ ಭದ್ರತಾ ವ್ಯವsಸ್ಥೆ ನಡುವೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆ ಆರಂಭವಾಯಿತು. ಕಾಶ್ಮೀರ ಕಣಿವೆಯಲ್ಲಿರುವ ಶ್ರೀ ಅಮರನಾಥ ಗುಹ ದೇವಾಲಯಕ್ಕೆ ಈ ವರ್ಷದ ೪೩ ದಿನಗಳ ವಾರ್ಷಿಕ ಯಾತ್ರೆ ಇಂದಿನಿಂದ ಕಾಶ್ಮೀರ ಕಣಿವೆಯ ಪಹಲ್ಗಾಮ್ ಮತ್ತು ಬಲ್ತಾಲ್ ಮಾರ್ಗಗಳಿಂದ ಆರಂಭವಾಗಲಿದೆ.
- ಬರುವ ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ. ಜುಲೈ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಜಸಭೆಯ 233 ಚುನಾಯಿತ ಸದಸ್ಯರು, ನಾಮನಿರ್ದೇಶನ ಹೊಂದಿದ 12ಸದಸ್ಯರು ಹಾಗೂ ಲೋಕಸಭೆಯ 543 ಚುನಾಯಿತ ಸದಸ್ಯರು ಮತ ಚಲಾಯಿಸಬಹುದಾಗಿದೆ. ಲೋಕಸಭೆಯ ಮಹಾ ಪ್ರಧಾನ ಕಾರ್ಯದರ್ಶಿ ಉಪರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ. ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರ ಅಧಿಕಾರವಾಧಿ ಆಗಸ್ಟ್ 10ಕ್ಕೆ ಮುಕ್ತಾಯಗೊಳ್ಳಲಿದೆ.
- ವಿಶ್ವ ಯುವ ಕೌಶಲ್ಯ ದಿನದ ದಿನ ಜುಲೈ 15 ರಂದು ಮರುವಿನ್ಯಾಸಗೊಳಿಸಲಾದ ಕೌಶಲ್ಯ ಸಂಪರ್ಕ ವೆಬ್ ಪೋರ್ಟಲ್ ಅಥವಾ ಸ್ಕಿಲ್ ಕನೆಕ್ಟ್ ಅನ್ನು ಪ್ರಾರಂಭಿಸಲಾಗುವುದು ಎಂದು ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಉಡುಪಿಯಲ್ಲಿ ಹೇಳಿದ್ದಾರೆ.
- ಜುಲೈ ಅಂತ್ಯದೊಳಗೆ ಮೈಶುಗರ್ ಕಾರ್ಖಾನೆ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರೊಂದಿಗೆ ಮೈಶುಗರ್ ಕಾರ್ಖಾನೆಗೆ ಭೇಟಿ ನೀಡಿ ದುರಸ್ತಿ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮೈಶುಗರ್ ಕಾರ್ಖಾನೆ ಮಂಡ್ಯ ರೈತರ ಜೀವನಾಡಿಯಾಗಿದೆ ಎಂದು ಹೇಳಿದ್ದಾರೆ.
- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಇಂದು ಸಂಜೆ 6.02 ಕ್ಕೆ ಮೂರು ಸಿಂಗಾಪುರ ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ ವಿ-ಸಿ 53ರಾಕೆಟ್ಅನ್ನು ಉಡಾವಣೆ ಮಾಡಲು ಸಜ್ಜಾಗಿದೆ. ಉಡಾವಣಾ ವಾಹನವು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ.
- ಬರುವ ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಆಯೋಗ, ಜುಲೈ 5 ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜುಲೈ 19ರವರೆಗೆ ಅವಕಾಶವಿರುತ್ತದೆ ಎಂದು ಹೇಳಿದೆ.
- ಅಮರನಾಥ ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾಶ್ಮೀರ ಕಣಿವೆಯಲ್ಲಿ ಹಸಿರು ನಿಶಾನೆ ತೋರಿದರು. ಬಿಗಿ ಭದ್ರತಾ ವ್ಯವsಸ್ಥೆ ನಡುವೆ ನಿನ್ನೆ ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆ ಆರಂಭವಾಯಿತು. ಕಾಶ್ಮೀರ ಕಣಿವೆಯಲ್ಲಿರುವ ಶ್ರೀ ಅಮರನಾಥ ಗುಹ ದೇವಾಲಯಕ್ಕೆ ಈ ವರ್ಷದ 43 ದಿನಗಳ ವಾರ್ಷಿಕ ಯಾತ್ರೆ ಇಂದಿನಿಂದ ಕಾಶ್ಮೀರ ಕಣಿವೆಯ ಪಹಲ್ಗಾಮ್ ಮತ್ತು ಬಲ್ತಾಲ್ ಮಾರ್ಗಗಳಿಂದ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
‘ರೋಹಿತ್ ಶರ್ಮಾ’ಗೆ ಕೋವಿಡ್ ಸೋಂಕು ದೃಢ

ಸುದ್ದಿದಿನ,ಬೆಂಗಳೂರು: ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಜುಲೈ 1 ರಿಂದ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ನಲ್ಲಿ ನಾಯಕನಾಗಿ ರೋಹಿತ್ ಕಾಣಬೇಕಿತ್ತು. ಕೆಲವೇ ದಿನಗಳು ಬಾಕಿ ಇರುವ ಮುನ್ನವೇ ಈಗ ರೋಹಿತ್ ಶರ್ಮಾ ಸೋಂಕಿಗೆ ತುತ್ತಾಗಿದ್ದಾರೆ.
UPDATE – #TeamIndia Captain Mr Rohit Sharma has tested positive for COVID-19 following a Rapid Antigen Test (RAT) conducted on Saturday. He is currently in isolation at the team hotel and is under the care of the BCCI Medical Team.
— BCCI (@BCCI) June 25, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ4 days ago
ಮಹಾರಾಷ್ಟ್ರ ಸರ್ಕಾರ ಉರುಳಲು ಬಿಜೆಪಿ ಕುತಂತ್ರ ಕಾರಣ, ಇದು ದೇಶಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ
-
ನಿತ್ಯ ಭವಿಷ್ಯ6 days ago
ಗುರುವಾರ ರಾಶಿ ಭವಿಷ್ಯ-ಜೂನ್-30,2022 : ಈ ರಾಶಿಯವರು ನಿಮ್ಮ ಸಂಗಾತಿಗೆ ಹೃದಯದಲ್ಲಿ ಅಡಿಗಿರುವ ಸತ್ಯಾಂಶ ಬಹಿರಂಗಪಡಿಸುವ ದಿನ
-
ನಿತ್ಯ ಭವಿಷ್ಯ5 days ago
ಶುಕ್ರವಾರ- ರಾಶಿ ಭವಿಷ್ಯ ಜುಲೈ-1,2022 : ಈ ರಾಶಿಯವರಿಗೆ ಇಷ್ಟ ಇರದ ಮದುವೆ! ಆದರೆ ಈ ರಾಶಿಯವರಿಗೆ ಇಷ್ಟ ಇರದ ಉದ್ಯೋಗ!
-
ದಿನದ ಸುದ್ದಿ4 days ago
ಅಕ್ರಮ ಹಣ ವರ್ಗಾವಣೆ ಕೇಸ್ : ಡಿ.ಕೆ ಶಿವಕುಮಾರ್’ಗೆ ಜಾಮೀನು ಅರ್ಜಿ ವಿಚಾರಣೆ ಜುಲೈ 30 ಕ್ಕೆ ಮುಂದೂಡಿಕೆ
-
ದಿನದ ಸುದ್ದಿ4 days ago
ನೇರ ಪಾವತಿ ಪೌರಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ : ಸಿಎಂ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ4 days ago
ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಮಾರುತ್ತಿರುವ ವಿಡಿಯೋ ವೈರಲ್.!
-
ದಿನದ ಸುದ್ದಿ7 days ago
ಉದಯಪುರ ಹತ್ಯೆ ಭಯೋತ್ಪಾದಕ ಕೃತ್ಯ ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡನೆ
-
ದಿನದ ಸುದ್ದಿ4 days ago
ಬಿಜೆಪಿಯ ನೂಪುರ್ ಶರ್ಮಾ’ಗೆ ಸುಪ್ರೀಂಕೋರ್ಟ್ ತರಾಟೆ