Connect with us

ಸಿನಿ ಸುದ್ದಿ

ಫಹಾದ್ ಫಾಸಿಲ್ ಜೊತೆಗೆ ‘ಲೂಸಿಯಾ’ ಪವನ್ ಹೊಸ ಚಿತ್ರ ‘ಧೂಮಂ’

Published

on

ಸುದ್ದಿದಿನ ಡೆಸ್ಕ್ : ‘ಲೂಸಿಯಾ’ ( Lucia ) ಖ್ಯಾತಿಯ ಪವನ್ ಕುಮಾರ್ ( Pawan Kumar ), ಮಲಯಾಳಂನ ಸ್ಟಾರ್ ನಟ ಫಹಾದ್ ಫಾಸಿಲ್ ( Fahad Faasil) ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದೇಶಿಸುವ ಸಾಧ್ಯತೆ ಇದೆ ಎಂಬ ಮಾತು ಇತ್ತೀಚೆಗೆ ಕೇಳಿ ಬಂದಿತ್ತು. ಅದೀಗ ನಿಜವಾಗಿದೆ. ಶುಕ್ರವಾರ ಫಹಾದ್ ಫಾಸಿಲ್ ಅಭಿನಯದಲ್ಲಿ ಪವನ್ ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ.

ಅದೇ ‘ಧೂಮಂ’.‘ಧೂಮಂ’ ಚಿತ್ರವನ್ನು ನಿರ್ಮಿಸುತ್ತಿರುವುದು ಹೊಂಬಾಳೆ ಫಿಲಂಸ್. ಇದಕ್ಕೂ ಮುನ್ನ ಪವನ್ ನಿರ್ದೇಶನದಲ್ಲಿ, ಪುನೀತ್ ರಾಜ್ಕುಮಾರ್ ಅಭಿನಯದಲ್ಲಿ ‘ದ್ವಿತ್ವ’ ಎಂಬ ಚಿತ್ರವನ್ನು ಘೋಷಿಸಿದ್ದರು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು. ಆದರೆ, ಪುನೀತ್ ನಿಧನದಿಂದ ಅದು ಸಾಧ್ಯವಾಗಲಿಲ್ಲ.

ಅದರ ಬದಲು ಅವರು ಪವನ್ಗೆ ‘ಧೂಮಂ’ ನಿರ್ದೇಶಿಸುವ ಅವಕಾಶವನ್ನು ಕೊಟ್ಟಿದ್ದಾರೆ. ‘ಧೂಮಂ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಮಲಯಾಳಂನಲ್ಲಿ ನಿರ್ಮಾಣವಾಗಿ, ಕನ್ನಡ, ತೆಲುಗು ಮತ್ತು ತಮಿಳಿಗೆ ಡಬ್ ಆಗಿ ಬಿಡುಗಡೆಯಾಗಲಿದೆ. ಫಹಾದ್ಗೆ ನಾಯಕಿಯಾಗಿ ಅಪರ್ಣ ಬಾಲಮುರಳಿ ನಟಿಸುತ್ತಿದ್ದಾರೆ. ಪ್ರೀತಾ ಜಯರಾಮನ್ ಛಾಯಾಗ್ರಹಣ ಮತ್ತು ಪೂರ್ಣಚಂದ್ರ ತೇಜಸ್ವಿ ಸಂಗೀತ ಈ ಚಿತ್ರಕ್ಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ

‘ಸ್ವಾತಿ ಮುತ್ತಿನ ಮಳೆ ಹನಿ’ಗಾಗಿ ಜೊತೆಯಾದ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ

Published

on

ಸುದ್ದಿದಿನ ಡೆಸ್ಕ್ : ಆಪಲ್ ಬಾಕ್ಸ್ ಸ್ಟುಡಿಯೋಸ್ ( Apple Box Studios ) ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಇನ್ನು ಮುಂದೆ ಚಿತ್ರಗಳನ್ನು ನಿರ್ಮಿಸುವುದಾಗಿ ರಮ್ಯಾ (Ramya ) ಯಾವಾಗ ಘೋಷಿಸಿದರೋ, ಆಗಿನಿಂದಲೂ ಆ ಚಿತ್ರ ಯಾವುದಿರಬಹುದು? ಯಾರು ನಟಿಸಬಹುದು? ರಮ್ಯಾ ಬರೀ ನಿರ್ಮಾಪಕಿಯಾಗಿರುತ್ತಾರಾ ಅಥವಾ ಈ ಚಿತ್ರದ ಮೂಲಕ ನಟನೆಗೆ ವಾಪಸ್ಸಾಗುತ್ತಾರಾ? ಎಂಬಂತಹ ಹಲವು ಪ್ರಶ್ನೆಗಳು ಇದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ.

ವಿಜಯದಶಮಿಯ ದಿನದಂದು ರಮ್ಯಾ ತಮ್ಮ ನಿರ್ಮಾಣದ ಮೊದಲ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೆಸರಿನ ಈ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಜ್ ಹೇಳಿದ ಕಥೆಯಿಂದ ಖುಷಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ರಮ್ಯಾ ಹೇಳಿಕೊಂಡಿದ್ದಾರೆ. ಪ್ರೀ-ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ. ರಾಜ್ ಶೆಟ್ಟಿ ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರವೀಣ್ ಶ್ರೀಯಾನ್ ಮತ್ತು ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್ ಇಲ್ಲೂ ಮುಂದುವರೆಯಲಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ರಮ್ಯಾ ಅವರ ಆಪಲ್ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲಂಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಈ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಸಿನಿ ಸುದ್ದಿ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕೊನೆಗೂ ಕೊಟ್ರು ಸಿಹಿಸುದ್ದಿ ! ಏನದು ಗೊತ್ತಾ..!?

Published

on


ಸುದ್ದಿದಿನ ಡೆಸ್ಕ್ : ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Sandalwood queen Ramya ) ಕೊನೆಗೂ ಸಿಹಿಸುದ್ದಿ ಕೊಟ್ಟಿದ್ದಾರೆ. ನಿನ್ನೆ ತಮ್ಮ ಸೋಶಿಯಲ್ ಮೀಡಿಯಾ ( Social media ) ಖಾತೆಯ ಮೂಲಕ ನಾಳೆ ಅಭಿಮಾನಿಗಳಿಗೊಂದು ಸಿಹಿಸುದ್ದಿ ಕೊಡ್ತೀನಿ ಅಂದಿದ್ರು. ಅದರಂತೆ ಇಂದು ಗಣೇಶ ಚತುರ್ಥಿಯಂದು ಸಿಹಿಸುದ್ದಿ ಕೊಟ್ಟಿದ್ದಾರೆ. ಏನದು ಗೊತ್ತಾ..?! ಈ ಕೆಳಗಿನ ನಟಿ ರಮ್ಯಾ ಅವರ ಹೇಳಿಕೆ ಓದಿ


ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು.

‘ಸಿಹಿ ಸುದ್ದಿ’ಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟಡಿಯೋಸ್‌ನ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ.

ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ, ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇ ಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ ” ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.

ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ ಒ.ಟಿ.ಟಿ ಪ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗು ವೆಬ್ ಸೀರೀಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟಡಿಯೋಸ್ ಸಿದ್ಧವಾಗುತ್ತಿದೆ.

ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್‌ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ತೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು.

ಇದರ ಜೊತೆಗೆ ವಿಜಯ ಕಿರಗಂದೂರ್, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು.

ಹೊಸ ಆರಂಭದತ್ತಹೆಜ್ಜೆ ಇಡುತ್ತಾ ಕೃತಜ್ಞತೆಗಳೊಂದಿಗೆ ರಮ್ಯಾ.

ಎಂದು ಸೋಶಿಯಲ್ ಮೀಡಿಯಾ ಮೂಲಕ ಸಿಹಿಸುದ್ದಿ ಹಂಚಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಸಿನಿ ಸುದ್ದಿ

ಅಮೃತಾ ಅಯ್ಯಂಗಾರ್ ವಿಶ್ ಮಾಡಿದ ಧನಂಜಯ : ಬೇಗ ಮದುವೆ ಊಟ ಹಾಕಿಸು ಡಾಲಿ ಎಂದ ಅಭಿಮಾನಿಗಳು

Published

on

ಸುದ್ದಿದಿನ,ಬೆಂಗಳೂರು: ನಟ ಡಾಲಿ ಧನಂಜಯ ಅಮೃತಾ ಅಯ್ಯಂಗಾರ್ ಹುಟ್ಟು ಹಬ್ಬಕ್ಕೆ ಶುಭಕೋರಿದ್ದಾರೆ. ಈ ಮೂಲಕ ಧನಂಜಯ ಏನಾದ್ರೂ ಪ್ರೀತಿಯಲ್ಲಿ ಬಿದ್ರಾ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ನಟ ಡಾಲಿ ಧನಂಜಯ್ ಅವರು ಬಹುಬೇಡಿಕೆಯ ಕಲಾವಿದನಾಗಿ ಗುರುತಿಸಿಕೊಂಡಿದ್ದಾರೆ. ‘ಬಡವ ರಾಸ್ಕಲ್’ ಸಿನಿಮಾ ಸಕ್ಸಸ್ ನಂತರ ಸಿನಿಮಾ ಪ್ರೇಮಿಗಳ ಮನಗೆದ್ದ ಧನಂಜಯ ಹಾಗೂ ಅಮೃತಾ ಅಯ್ಯಂಗಾರ್ ಜೋಡಿ ನಿಜ ಜೀವನದಲ್ಲಿ ಜೋಡಿಯಾಗಲಿ ಎಂದಿದ್ದರು.

ಇದಕ್ಕೆ ಸಾಕ್ಷಿ ಎಂಬಂತೆ ಧನಂಜಯ ಇಂದು ಅಮೃತಾ ಅವರ ಬರ್ತಡೇ ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್’ಗೆ ವೈರಲ್ ಆಗುತ್ತಿದ್ದು, ಬೇಗ ಮದುವೆ ಊಟ ಹಾಕಿಸು ಡಾಲಿ ಎನ್ನುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending