Connect with us

ದಿನದ ಸುದ್ದಿ

24.61 ಕೋಟಿ ವೆಚ್ಚದ ಸಿ.ಆರ್.ಸಿ ಕೇಂದ್ರಕ್ಕೆ ಶಂಕುಸ್ಥಾಪನೆ ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ : ಎ. ನಾರಾಯಣ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ : ಅಂಗವಿಕಲರ ಹಾಗೂ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿವೆ ಆದರೆ ಅನೇಕರಿಗೆ ಅವುಗಳ ಬಗ್ಗೆ ಮಾಹಿತಿ ಇಲ್ಲ ಈ ಬಗ್ಗೆ ಹೆಚ್ಚು ಪ್ರಚಾರ ನೀಡುವ ಮೂಲಕ ವಿಕಲಚೇತನ ಹಾಗೂ ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಹೇಳಿದರು.

ಶನಿವಾರ ದಾವಣಗೆರೆ ತಾಲ್ಲೂಕಿನ ವಡ್ಡಿನಹಳ್ಳಿ ಬಳಿ ಬೌದ್ಧಿಕ ದಿವ್ಯಾಂಗ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಂಯುಕ್ತ ಪ್ರಾದೇಶಿಕ ಕೇಂದ್ರದ ಕಟ್ಟಡದ (ಸಿಆರ್‍ಸಿ) ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಯಾವ ಮನೆಯಲ್ಲಿ ವಿಕಲಚೇತನರು ಹಾಗೂ ದಿವ್ಯಾಂಗರು ಜನಿಸಿರುತ್ತಾರೋ ಅಂತಹ ಮನೆಗಳಲ್ಲಿ ಪೋಷಕರು ಆ ಮಕ್ಕಳ ಪೋಷಣೆಗೆ ಜೀವನವನ್ನು ಮೀಸಲಿಟ್ಟಿರುತ್ತಾರೆ. ಚಿಕ್ಕ ಪುಟ್ಟ ತೊಂದರೆಗಳಿಗೆ ಆಸ್ಪತ್ರೆಗೆ ಹೋಗಲಾಗುವುದಿಲ್ಲ ಹಾಗಾಗಿ ದಿವ್ಯಾಂಗರಿಗೆ ಪೋಷಕರೇ ವೈದ್ಯರ ರೀತಿ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಅವರುಗಳ ಪೋಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.

ಕೆಲವೊಮ್ಮೆ ಇಂತಹ ಮಕ್ಕಳನ್ನು ಪೋಷಕರು ಸಂಭಾಳಿಸಲಾಗದೆ ಅವರನ್ನು ಕೂಡಿ ಹಾಕುವಂತಹ ಪ್ರಕರಣಗಳು ಕಂಡುಬರುತ್ತವೆ, ಆದರೆ ಆ ರೀತಿ ಮಕ್ಕಳನ್ನು ಕೂಡಿ ಹಾಕುವುದು ತಪ್ಪಾಗುತ್ತದೆ, ಸಂಯುಕ್ತ ಪ್ರಾದೇಶಿಕ ಕೇಂದ್ರದ ಮೂಲಕ ಪೋಷಕರಿಗೂ ತರಬೇತಿ ನೀಡಿ ಪೋಷಕರನ್ನು ಒಂದು ರೀತಿ ತರಬೇತಿದಾರರನ್ನಾಗಿ ಹಾಗೂ ವೈದ್ಯರನ್ನಾಗಿಸುವ ಮೂಲಕ ದಿವ್ಯಾಂಗರಿಗೆ ನೆರವು ನೀಡಲಾಗುತ್ತದೆ ಎಂದರು.

ಗೋವಾ, ಕರ್ನಾಟಕ ರಾಜ್ಯಗಳನ್ನೊಳಗೊಂಡತೆ ಈ ಕೇಂದ್ರ ಸ್ಥಾಪಿಸಲಾಗುತ್ತಿದ್ದು ಎರಡೂ ರಾಜ್ಯಗಳ ದಿವ್ಯಾಂಗರು ಈ ಕೇಂದ್ರದಲ್ಲಿ ಚಿಕಿತ್ಸೆ ಹಾಗೂ ತರಬೇತಿ ಪಡೆಯುವುದರಿಂದ ದೂರದಿಂದ ಬಂದು ಉಳಿದುಕೊಳ್ಳುವವರಿಗೆ ಎಲ್ಲಾ ರೀತಿಯ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರತಿ ಜಿಲ್ಲಾ ಕೇಂದ್ರಗಳಗಲ್ಲಿ ಒಂದೊಂದು ಪ್ರಾದೇಶಿಕ ಸಂಯುಕ್ತ ಕೇಂದ್ರ ಸ್ಥಾಪಿಸುವ ಅವಶ್ಯಕತೆ ಇದೆ.

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಜನಪ್ರತಿನಿಧಿಗಳು ಬದ್ಧವಾಗಿರಬೇಕು. ಶೀಘ್ರದಲ್ಲೇ ದಾವಣಗೆರೆ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು, ಅದರಿಂದ ಸಮೀಪದಲ್ಲಿ ರೈಲು ನಿಲುಗಡೆ ಕೇಂದ್ರ ಆದರೆ ಈ ಕೇಂದ್ರಕ್ಕೆ ಮಕ್ಕಳನ್ನು ಕರೆತರುವವರಿಗೆ ಅನುಕೂಲವಾಗಲಿದೆ ಎಂದರು.

ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಮಾತನಾಡಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಪರಿಕಲ್ಪನೆಯ ಆಧಾರದ ಮೇಲೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಸರ್ಕಾರ ಇಂತಹವರನ್ನು ಮುಖ್ಯವಾಹಿನಿಗೆ ತರಲು ಹಲವಾರು ಯೋಜನೆಗಳನ್ನು ರೂಪಿಸಿದೆ ಅಂತಹ ಯೋಜನೆಗಳ ಸೌಲಭ್ಯ ಇವರಿಗೆ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕಾಗಿದೆ.

ದಿವ್ಯಾಂಗ ಮಕ್ಕಳು ದೇವರ ಮಕ್ಕಳು ಇದ್ದಂತೆ ಆದ್ದರಿಂದ ಅವರಿಗೆ ವಿವಿಧ ಸೌಲಭ್ಯ ಹಾಗೂ ಪೋಷಕರಿಗೆ ತರಬೇತಿ ನೀಡಿ ಅವರನ್ನು ಸಬಲೀಕರಣ ಮಾಡುವ ಉದ್ದೇಶದಿಂದ ಸಿಆರ್‍ಸಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ವಿಕಲಚೇತನ ವ್ಯಕ್ತಿಗಳ ಕಲ್ಯಾಣಕ್ಕಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿವೆ.

ತರಬೇತಿ ಕೇಂದ್ರದ ಮೂಲಕ ವಿಕಲಚೇತನರಿಗೆ ಅನೇಕ ರೀತಿಯ ಕೌಶಲ್ಯ ತರಬೇತಿಗಳನ್ನು ನೀಡಲಾಗುವುದು, 24.61 ಕೋಟಿ ರೂ ವೆಚ್ಚದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಸಿಆರ್‍ಸಿ ಕೇಂದ್ರದ ಸದುಪಯೋಗ ಅಗತ್ಯವಿರುವ ಎಲ್ಲರಿಗೂ ಸಿಗಲಿ, 2017 ರಲ್ಲಿ ಮಂಜೂರಾದ ಕೇಂದ್ರವು ಕ್ಲಿನಿಕಲ್ ಸೇವೆಗಳನ್ನು ಒದಗಿಸುತ್ತಿತ್ತು ಇನ್ನು ಮುಂದೆ ತರಬೇತಿ, ಕೌಶಲಾಭಿವೃದ್ದಿಯಂತಹ ಚಟುವಟಿಕೆಗಳಿಗೂ ನೆರವಾಗಲಿದೆ ಹಾಗೂ ದಿವ್ಯಾಂಗ ವ್ಯಕ್ತಿಗಳ ಸೇವೆ ಮಾಡುವ ಮೂಲಕ ದೇಶಕ್ಕೆ ಮಾದರಿ ಕೇಂದ್ರವನ್ನಾಗಿ ಮಾಡಲು ಶ್ರಮಿಸೋಣ ಎಂದರು.

ಕಾರ್ಯಕ್ರಮದಲ್ಲಿ 492 ಅರ್ಹ ಫಲಾನುಭವಿಗಳಿಗೆ 41 ಲಕ್ಷ ವೆಚ್ಚದ ವಿವಿಧ ಭೋಧನ ಕಲಿಕಾ ಸಾಮಗ್ರಿಗಳನ್ನು ಹಾಗೂ ಕಿಟ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ.ರವೀಂದ್ರನಾಥ್, ಸಿ.ಆರ್.ಸಿ ಕೇಂದ್ರದ ಜಂಟಿ ಕಾರ್ಯದರ್ಶಿ ರಾಜೀವ್ ಶರ್ಮಾ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಓ ಡಾ.ಎ.ಚನ್ನಪ್ಪ, ಸಿಆರ್‍ಸಿ ಕೇಂದ್ರದ ನಿರ್ದೇಶಕ ಡಾ ಉಮಾಶಂಕರ್ ಮೊಹಂತಿ, ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ್, ಗ್ರಾ.ಪಂ ಸದಸ್ಯರುಗಳು ಹಾಗೂ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಸಿಆರ್ಸಿ ಕೇಂದ್ರದಲ್ಲಿ ದೊರೆಯುವ ಸೌಲಭ್ಯ

ದಾವಣಗೆರೆಯ ಸಿಆರ್‍ಸಿ ಕೇಂದ್ರದಲ್ಲಿ ಆರಂಭಿಕ ಗುರುತಿಸುವಿಕೆ ಮತ್ತು ಮಧ್ಯಸ್ಥಿಕೆ, ಔದ್ಯೋಗಿಕ ಚಿಕಿತ್ಸೆ, ಭೌತಿಕ ಚಿಕಿತ್ಸೆ, ದೈಹಿಕ ವೈದ್ಯಕೀಯ ಚಿಕಿತ್ಸೆ ಮತ್ತು ಪುನರ್ವಸತಿ, ಮಾನಸಿಕ ಮಧ್ಯಸ್ಥಿಕೆ, ಪ್ರಾಸ್ಥೆಟಿಕ್ಸ್ ಮತ್ತು ಆರ್ಥೋಟಿಕ್ಸ್, ಮಾತನಾಡುವ ಭಾಷೆ ಮತ್ತು ಶ್ರವಣ, ವಿಶೇಷ ಶಿಕ್ಷಣ, ಕೌಶಲ್ಯ ತರಬೇತಿ, ವೃತ್ತಿಪರ ತರಬೇತಿ, ಸಹಾಯಕ ಸಾಧನಗಳ ವಿತರಣೆ, ಬೋಧನೆ ಕಲಿಕೆ ಮತ್ತು ಸಂವಹನ ಸಾಮಗ್ರಿಗಳು, ಸಮಾಜ ಕಾರ್ಯ, ಉದ್ಯೋಗ, ಔಟ್‍ರೀಚ್ ಸೇವೆಗಳು, ಮಾನವ ಸಂಪನ್ಮೂಲ ಅಭಿವೃದ್ದಿ, ಸಂಶೋಧನೆ ಮತ್ತು ಅಭಿವೃದ್ಧಿ, ಬೌದ್ಧಿಕ ಅಸಾಮಥ್ರ್ಯ ಹೊಂದಿರುವ ವ್ಯಕ್ತಿಗಳಿಗೆ ಕೃತಕ ಅಂಗಗಳು, ಬೋಧನೆ ಮತ್ತು ಕಲಿಕಾ ಸಾಮಗ್ರಿ ಕಿಟ್‍ಗಳು, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಶ್ರವಣ ಸಾಧನಗಳು ಸೇರಿದಂತೆ ದೈಹಿಕ ಅಂಗವೈಕಲ್ಯ ಸಹಾಯಕ ಸಾಧನಗಳ ನಿಯಮಿತ ವಿತರಣೆ ಕೇಂದ್ರದಿಂದ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending