ದಿನದ ಸುದ್ದಿ
ಪರಿಶಿಷ್ಟರ ಕಲ್ಯಾಣಕ್ಕಾಗಿ 28 ಸಾವಿರ ಕೋಟಿ ರೂಪಾಯಿ ವಿನಿಯೋಗ : ಸಿಎಂ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು : ಪರಿಶಿಷ್ಟರ ಕಲ್ಯಾಣಕ್ಕಾಗಿ ಈ ವರ್ಷ 28 ಸಾವಿರ ಕೋಟಿ ರೂಪಾಯಿ ವಿನಿಯೋಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಸಮಾಜ ಕಲ್ಯಾಣ, ಕೃಷಿ, ತೋಟಗಾರಿಕೆ, ಆರೋಗ್ಯ ವಲಯಗಳಿಗೆ ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಹಣವನ್ನು ವೆಚ್ಚ ಮಾಡಲು ಇಂದು ನಡೆದ ಪರಿಷತ್ ಸಭೆ ಅನುಮೋದನೆ ನೀಡಿರುವುದಾಗಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243