ದಿನದ ಸುದ್ದಿ
ಬಜೆಟ್ ನಲ್ಲಿ ಎಸ್ಸಿ – ಎಸ್ಟಿ ಗೆ 28 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಸುದ್ದಿದಿನ, ಬೆಂಗಳೂರು : ಈ ಬಾರಿ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪಂಗಡಕ್ಕೆ 28ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದು, ಕ್ರಿಯಾಯೋಜನೆಯು ಸಿದ್ಧವಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಸಚಿವರು, ಹಿಂದುಳಿದ ವರ್ಗಗಳ ಎಲ್ಲಾ ಜಾತಿಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ದೀನ್ ದಯಾಳ್ ಅವರ ಹೆಸರಿನಲ್ಲಿ ಪ್ರಥಮ ಬಾರಿಗೆ ರಾಜ್ಯದ ಐದು ಕೇಂದ್ರೀಕೃತ ವಿದ್ಯಾಸಂಸ್ಥೆ ಇರುವ ಕಡೆ ಸಾವಿರ ಮಕ್ಕಳ ವಸತಿ ನಿಲಯ ಆರಂಭಿಸಲಾಗುತ್ತಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243