ದಿನದ ಸುದ್ದಿ

ಇಂದು 2ನೇ ಜಾಗತಿಕ ಕೋವಿಡ್ ವರ್ಚುವಲ್ ಸಮಾವೇಶ; ಪ್ರಧಾನಿ ನರೇಂದ್ರ ಮೋದಿ ಭಾಗಿ

Published

on

ಸುದ್ದಿದಿನ ಡೆಸ್ಕ್ : ಅಮೆರಿಕ ಅಧ್ಯಕ್ಷ ಜೋಸೆಫ್ ಬೈಡನ್ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಇಂದು ಆಯೋಜಿತವಾಗಿರುವ ಎರಡನೆ ಜಾಗತಿಕ ಕೋವಿಡ್ ವರ್ಚುವಲ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಸೋಂಕು ಹೊಸ ರೂಪದಲ್ಲಿ ಇಡೀ ವಿಶ್ವವನ್ನೇ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿಗೇ ಎದುರಾಗಿರುವ ಆರೋಗ್ಯ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸಲು ಅಗತ್ಯವಾದ ಹೊಸ ಕ್ರಮಗಳ ಕುರಿತು ಸಮಾವೇಶದಲ್ಲಿ ವ್ಯಾಪಕ ಚರ್ಚೆ ಮತ್ತು ಸಮಾಲೋಚನೆಗಳು ನಡೆಯಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಅಗತ್ಯ ಸಿದ್ಧತೆಗಳಿಗೆ ಆದ್ಯತೆ ಎಂಬ ವಿಷಯ ಕುರಿತು ಮೋದಿ ಮಾತನಾಡಲಿದ್ದಾರೆ. ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ, ವಿಶ್ವ ಆರೋಗ್ಯ ಸಂಘಟನೆಯ ಮಹಾ ನಿರ್ದೇಶಕರು ಸೇರಿದಂತೆ ಹಲವಾರು ಜಾಗತಿಕ ಗಣ್ಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸಮಾವೇಶದ ನೇಪಥ್ಯದಲ್ಲಿ ವಿದೇಶಾಂಗ ಸಚಿವಾಲಯವು ಹೇಳಿಕೆ ನೀಡಿದ್ದು, ಸಾಂಕ್ರಾಮಿಕ ಸೋಂಕಿನ ವಿರುದ್ಧ ಹೋರಾಡಲು ಭಾರತವು ಸುರಕ್ಷಿತ ಮತ್ತು ಎಲ್ಲರಿಗೂ ಕೈಗೆಟಕುವ ಬೆಲೆಗೆ ಲಸಿಕೆಗಳನ್ನು ಒದಗಿಸುವ ಮೂಲಕ ನಿರ್ಣಾಯಕ ಪಾತ್ರ ನಿರ್ವಹಿಸುತ್ತಿದೆ ಎಂದು ತಿಳಿಸಿದೆ. ಇದಲ್ಲದೆ, ಜಾಗತಿಕ ಆರೋಗ್ಯ ಭದ್ರತೆ ಕಾಪಾಡಲು ಭಾರತವು ಬಹು ಪಕ್ಷೀಯ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಸಚಿವಾಲಯ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version