ದಿನದ ಸುದ್ದಿ
ರಾಜ್ಯದ 3,450 ಕನ್ನಡ ಶಾಲೆಗಳು ಶಾಶ್ವತವಾಗಿ ಬಂದ್…!
ಸುದ್ದಿದಿನ, ಬೆಂಗಳೂರು : ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 10 ಮಕ್ಕಳಿಗಿಂತ ಕಡಿಮೆಯಿರುವ 3,450 ಏಕೋಪಾಧ್ಯಾಯ ಶಾಲೆಗಳನ್ನು ಹತ್ತಿರದ ಇತರೆ ಶಾಳೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆದಿದೆ, ಈ ನಿಟ್ಟಿನಲ್ಲಿ ರಾಜ್ಯದಲ್ಲಿ 3,450 ಕನ್ನಡ ಶಾಲೆಗಳು ಶಾಶ್ವತವಾಗಿ ಬಂದ್ ಆಗಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದರು.
ಸೋಮವಾರ (ಜೂನ್11) ಸರ್ವ ಶಿಕ್ಷಾ ಅಭಿಯಾನದ ಸಭಾಂಗಣದಲ್ಲಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆನಡೆಸಿದ ಅವರು, ರಾಜ್ಯದಲ್ಲಿ21,225 ಪ್ರಾಥಮಿಕ ಶಾಲೆಗಳು ಹಾಗೂ 22,487 ಹಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 43,712ಶಾಲೆಗಳಿವೆ ಎಂದು ಮಾಹಿತಿ ಹಂಚಿಕೊಂಡರು.
ಶಾಲೆಯ ಮಕ್ಕಳಿಗೆ ಉತ್ತಮ ವಿಧ್ಯಾಭ್ಯಾಸವನ್ನು ನೀಡುವ ನಿಟ್ಟಿನಲ್ಲಿ ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸಲಿದ್ದು, ಈಗಿರುವ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ತಯಾರಿನಡೆಸಿದ್ದೇವೆ ಎಂದು ಸ್ಪಷ್ಟೀಕರಣ ನೀಡಿದರು.
ಈ ಸಲುವಾಗಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ನಾಲ್ಕೈದು ಶಾಲೆಗಳನ್ನು ಒಟ್ಟುಗೂಡಿಸಿ, ಸಕಲ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯಲು ವಾಹನಗಳ ವ್ಯವಸ್ಥೆಯನ್ನು ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಏಕೋಪಾಧ್ಯಾಯ ಶಾಲೆಗಿಂತಲೂ ಎಲ್ಲಾ ಸೌಲಭ್ಯಗಳು ದೊರಕುವ ಶಾಲೆಗಳಲ್ಲಿ ಪರಿಣಾಮಕಾರಿಯಾದ ಶಿಕ್ಷಣವನ್ನು ಕೊಡಬಹುದು. ಹೀಗೆ ಮಾಡುವುದರಿಂದ ಸುಮಾರು 30 ಸಾವಿರ ವಿಧ್ಯಾರ್ಥಿಗಳನ್ನು ಸ್ಥಳಾಂತರಗೊಳಿಸಬೇಕಾಗಬಹುದು ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ದಾವಣಗೆರೆ | ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಅರಿವು ಜಾಥ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಮಕ್ಕಳ ಪಾಲನಾ ಕೇಂದ್ರಗಳು ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ನವಂಬರ್ 13 ರಂದು ನಗರದ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಜಾಥಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮಾ.ಕರೆಣ್ಣವರ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಜಾಥವು ಜಯದೇವ ವೃತ್ತದಿಂದ ಪ್ರಾರಂಭಗೊಂಡು ಡಾ.ಬಿ.ಆರ್ ಅಂಬೆಡ್ಕರ್ ರಸ್ತೆ ಹಾಗೂ ವಿದ್ಯಾರ್ಥಿ ಭವನ ರಸ್ತೆ ಮೂಲಕ ಸಾಗಿ ಗುಂಡಿಮಹಾದೇವಪ್ಪ ವೃತ್ತದಲ್ಲಿ ಮುಕ್ತಾಯವಾಯಿತು.
ಜಾಥದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ್ ಕುಮಾರ್ ಎಂ.ಸಂತೋಷ್, ಉಪವಿಭಾಗಧಿಕಾರಿ ಸಂತೋಷ್ ಪಾಟೀಲ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ರಾಜನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ ಟಿ.ಎನ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ನವಂಬರ್ 16 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕನ್ನಡ ಶಿಕ್ಷಕರು, ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂಖ್ಯೆ-4, ದಾವಣಗೆರೆಯ ವಿನೋಬನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಇಂಗ್ಲೀಷ್ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂ: 4, ಕೆ.ಟಿ.ಜೆ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಗಣಿತ ಶಿಕ್ಷಕರು, ಸಾಮಾನ್ಯ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಇಡಿ ಹುದ್ದೆ ಸಂ: 4, ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗೆ ಉರ್ದು ಶಿಕ್ಷಕರು ವಿದ್ಯಾರ್ಹತೆ ಬಿ. ಎ, ಬಿ.ಇಡಿ, ಹುದ್ದೆ ಸಂ:4 ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022 ನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಪಿ ಪೋರ್ಟಲ್ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು https://ssp.postmatric.karnataka.gov.in/ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-22261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜಗಳೂರು ದೂ.ಸಂ: 08192-277029 ನ್ನು ಸಂಪರ್ಕಿಸಬಹುದೆಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಅಲ್ಲಂ ಪ್ರಶಾಂತ ಅಂಗಲಾಚಿ ಬೇಡಿದ್ರೂ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರಾಕರಿಸಿದ ಭದ್ರತಾ ಸಿಬ್ಬಂದಿ
-
ದಿನದ ಸುದ್ದಿ3 days ago
ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..
-
ದಿನದ ಸುದ್ದಿ4 days ago
ಪಿಎಂ ಮುದ್ರಾ ಯೋಜನೆ ; 20 ಲಕ್ಷ ರೂವರೆಗೆ ಸಾಲ ಸೌಲಭ್ಯ ಹೆಚ್ಚಳ
-
ದಿನದ ಸುದ್ದಿ3 days ago
ಅಧಿಕ ಸಾಲ ಸೌಲಭ್ಯ ; ಬ್ಯಾಂಕ್ ಗಳಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ
-
ದಿನದ ಸುದ್ದಿ3 days ago
ಕವಿತೆ | ಮುರುಕುಂಬಿ
-
ದಿನದ ಸುದ್ದಿ3 days ago
ಮಧ್ಯ ಕರ್ನಾಟಕದ ಕೇಂದ್ರಬಿಂದು ದಾವಣಗೆರೆ ಕೈಗಾರಿಕೆ, ಐಟಿಬಿಟಿ ಹಬ್ ಆಗದಿರುವುದು ದುರದೃಷ್ಟಕರ : ಜಿ. ಬಿ. ವಿನಯ್ ಕುಮಾರ್ ವಿಷಾದ
-
ದಿನದ ಸುದ್ದಿ4 days ago
ದಾವಣಗೆರೆ | ಹಾಸ್ಟೆಲ್ ಎಲ್ಲಾ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಮ್ಯಾಪ್ ಮಾಡಲು ಸೂಚನೆ : ಸಿಇಓ ಸುರೇಶ್ ಬಿ ಇಟ್ನಾಳ್
-
ದಿನದ ಸುದ್ದಿ2 days ago
ದಾವಣಗೆರೆ | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ