ದಿನದ ಸುದ್ದಿ

ರಾಜ್ಯದ 3,450 ಕನ್ನಡ ಶಾಲೆಗಳು ಶಾಶ್ವತವಾಗಿ ಬಂದ್…!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 10 ಮಕ್ಕಳಿಗಿಂತ ಕಡಿಮೆಯಿರುವ 3,450 ಏಕೋಪಾಧ್ಯಾಯ ಶಾಲೆಗಳನ್ನು ಹತ್ತಿರದ ಇತರೆ ಶಾಳೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆದಿದೆ, ಈ ನಿಟ್ಟಿನಲ್ಲಿ ರಾಜ್ಯದಲ್ಲಿ 3,450 ಕನ್ನಡ ಶಾಲೆಗಳು ಶಾಶ್ವತವಾಗಿ ಬಂದ್ ಆಗಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದರು.

ಸೋಮವಾರ (ಜೂನ್11) ಸರ್ವ ಶಿಕ್ಷಾ ಅಭಿಯಾನದ ಸಭಾಂಗಣದಲ್ಲಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆನಡೆಸಿದ ಅವರು, ರಾಜ್ಯದಲ್ಲಿ21,225 ಪ್ರಾಥಮಿಕ ಶಾಲೆಗಳು ಹಾಗೂ 22,487 ಹಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 43,712ಶಾಲೆಗಳಿವೆ ಎಂದು ಮಾಹಿತಿ ಹಂಚಿಕೊಂಡರು.

ಶಾಲೆಯ ಮಕ್ಕಳಿಗೆ ಉತ್ತಮ ವಿಧ್ಯಾಭ್ಯಾಸವನ್ನು ನೀಡುವ ನಿಟ್ಟಿನಲ್ಲಿ ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸಲಿದ್ದು, ಈಗಿರುವ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ತಯಾರಿನಡೆಸಿದ್ದೇವೆ ಎಂದು ಸ್ಪಷ್ಟೀಕರಣ ನೀಡಿದರು.

ಈ‌‌ ಸಲುವಾಗಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ನಾಲ್ಕೈದು ಶಾಲೆಗಳನ್ನು ಒಟ್ಟುಗೂಡಿಸಿ, ಸಕಲ‌ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯಲು ವಾಹನಗಳ ವ್ಯವಸ್ಥೆಯನ್ನು ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಏಕೋಪಾಧ್ಯಾಯ ಶಾಲೆಗಿಂತಲೂ ಎಲ್ಲಾ ಸೌಲಭ್ಯಗಳು ದೊರಕುವ ಶಾಲೆಗಳಲ್ಲಿ ಪರಿಣಾಮಕಾರಿಯಾದ ಶಿಕ್ಷಣವನ್ನು ಕೊಡಬಹುದು. ಹೀಗೆ ಮಾಡುವುದರಿಂದ ಸುಮಾರು 30 ಸಾವಿರ ವಿಧ್ಯಾರ್ಥಿಗಳನ್ನು ಸ್ಥಳಾಂತರಗೊಳಿಸಬೇಕಾಗಬಹುದು ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version