Connect with us

ದಿನದ ಸುದ್ದಿ

ರಾಜ್ಯದಲ್ಲಿಂದು 34,804 ಕೊರೋನಾ ಪ್ರಕರಣಗಳು ಪತ್ತೆ ; 143 ಜನ ಸಾವು : ಇಲ್ಲಿದೆ ಜಿಲ್ಲಾವಾರು ವರದಿ

Published

on

ಸುದ್ದಿದಿನ,ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ 34,804 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 143 ಜನ ಸಾವನ್ನಪ್ಪಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಅಷ್ಟೆಅಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಸಿಲಿಕಾನ್ ಸಿಟಿ ಸ್ಥಿತಿಯೂ ಕೂಡ ಕ್ಷಣ ಕ್ಷಣಕ್ಕೂ ಭಯಾನಕವಾಗುತ್ತಿದ್ದು, ಭಾನುವಾರ 20,733 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇದನ್ನೂ ಓದಿ | ಕೊರೋನಾ ನಿಯಂತ್ರಣ | ರಾಜ್ಯಗಳಿಗೆ ಅಗತ್ಯ ನೆರವು, ಸಹಕಾರ ನೀಡಲು ಕೇಂದ್ರ ಬದ್ಧವಾಗಿದೆ : ಪ್ರಧಾನಿ ಮೋದಿ

ನಗರದಲ್ಲಿ ಭಾನುವಾರ ಬರೋಬ್ಬರಿ 77 ಜನ ಸಾವನ್ನಪ್ಪಿದ್ದಾರೆ. ಸದ್ಯ ರಾಜಧಾನಿಯಲ್ಲಿ 1,80,542 ಸಕ್ರಿಯ ಪ್ರಕರಣಗಳಿದ್ದು, ಬೆಡ್ ಮತ್ತು ಆಕ್ಸಿಜನ್ ಕೊರತೆಯಿಂದ ಜನ ನರಳುತ್ತಿದ್ದಾರೆ.

ರಾಜ್ಯದಲ್ಲಿ 2,62,162 ಸಕ್ರಿಯ ಪ್ರಕರಣಗಳಿದ್ದು, 1,492 ಜನ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ. ಭಾನುವಾರ 6,982 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.19.70 ಮತ್ತು ಮರಣ ಪ್ರಮಾಣ ಶೇ.0.41ಕ್ಕೆ ಏರಿಕೆಯಾಗಿದೆ. ಈ ವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 14,426ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ,ಜಿಲ್ಲಾವಾರು ವರದಿ ಹೀಗಿದೆ

ಬಾಗಲಕೋಟೆ 390, ಬಳ್ಳಾರಿ 752, ಬೆಳಗಾವಿ 336, ಬೆಂಗಳೂರು ಗ್ರಾಮಾಂತರ 864, ಬೆಂಗಳೂರು ನಗರ 20,733, ಬೀದರ್ 406, ಚಾಮರಾಜನಗರ 284, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 247, ಚಿತ್ರದುರ್ಗ 100, ದಕ್ಷಿಣ ಕನ್ನಡ 564, ದಾವಣಗೆರೆ 242, ಧಾರವಾಡ 546, ಗದಗ 76, ಹಾಸನ 768, ಹಾವೇರಿ 99, ಕಲಬುರಗಿ 626, ಕೊಡಗು 1,077, ಕೋಲಾರ 782, ಕೊಪ್ಪಳ 152, ಮಂಡ್ಯ 814, ಮೈಸೂರು 700, ರಾಯಚೂರು 643, ರಾಮನಗರ 225, ಶಿವಮೊಗ್ಗ 418, ತುಮಕೂರು 1,155, ಉಡುಪಿ 319, ಉತ್ತರ ಕನ್ನಡ 245, ವಿಜಯಪುರ 468 ಮತ್ತು ಯಾದಗಿರಿಯಲ್ಲಿ 365 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಕನ್ನಡ ಪುಸ್ತಕ ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2022 ರ ಜನವರಿ 1 ರಿಂದ 2022 ರ ಡಿಸೆಂಬರ್ 31 ರೊಳಗೆ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2022 ಮುದ್ರಿತವಾಗಿರಬೇಕು.

ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ನೊಂದಣಿ ಅಂಚೆ ಅಥವಾ ಕೊರಿಯರ್ ಮೂಲಕ ಇಲ್ಲವೇ ಖುದ್ದಾಗಿ ಫೆ.20 ರೊಳಗೆ ಸಲ್ಲಿಸಬೇಕು ಎಂದು ರಿಜಿಸ್ಟ್ರಾರ್ ಕರಿಯಪ್ಪ.ಎನ್.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending