ದಿನದ ಸುದ್ದಿ
ಜೂನ್ 7 ರಂದು ಕೃಷಿ ವಿಶ್ವವಿದ್ಯಾಲಯದ 35 ನೇ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ 72 ನೇ ಘಟಿಕೋತ್ಸವ
ಸುದ್ದಿದಿನ,ಧಾರವಾಡ : ಇಲ್ಲಿನ ಕೃಷಿ ವಿಶ್ವವಿದ್ಯಾಲಯದ 35 ನೇ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ 72 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭಗಳು ಜೂನ್ 7 ಮಂಗಳವಾರದಂದು ಪ್ರತ್ಯೇಕವಾಗಿ ನಡೆಯಲಿವೆ.
ಜೂನ್ 7 ರಂದು ಬೆಳಿಗ್ಗೆ 11 ಗಂಟೆಗೆ ಕೃಷಿ ವಿವಿಯ ರೈತರ ಜ್ಞಾನಭಿವೃದ್ಧಿ ಕೇಂದ್ರದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಥಾವರ್‍ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ 35 ನೇ ಘಟಿಕೋತ್ಸವ ಜರುಗುವುದು. ಐಸಿಎಆರ್ ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆಯ ನಿರ್ದೇಶಕ ಡಾ.ರಾಕೇಶ್‍ಚಂದ್ರ ಅಗರ್‍ವಾಲ್ ಘಟಿಕೋತ್ಸವ ಭಾಷಣ ಮಾಡುವರು. ಕೃಷಿ ಸಚಿವರು ಹಾಗೂ ವಿವಿಯ ಸಹಕುಲಾಧಿಪತಿಗಳಾದ ಬಿ.ಸಿ. ಪಾಟೀಲ ಉಪಸ್ಥಿತರಿರುವರು ಎಂದು ಕುಲಸಚಿವ ಶಿವಾನಂದ ಕರಾಳೆ ಹಾಗೂ ಕುಲಪತಿ ಡಾ.ಮಹದೇವ ಚೆಟ್ಟಿ ತಿಳಿಸಿದ್ದಾರೆ.
ಕವಿವಿ 72 ನೇ ಘಟಿಕೋತ್ಸವ: ಜೂನ್ 7 ರಂದು ಮಧ್ಯಾಹ್ನ 3 ಗಂಟೆಗೆ ಕವಿವಿಯ ಗಾಂಧೀಭವನದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಥಾವರ್‍ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ 72 ನೇ ವಾರ್ಷಿಕ ಘಟಿಕೋತ್ಸವ ಜರುಗುವುದು.
ನವದೆಹಲಿಯ ಇಂಟರ್‍ನ್ಯಾಷನಲ್ ಸೆಂಟರ್ ಫಾರ್ ಜನೆಟಿಕ್ ಇಂಜಿನೀಯರಿಂಗ್ ಮತ್ತು ಬಯೋಟೆಕ್ನಾಲಜಿ ಸಂಸ್ಥೆಯ ನಿರ್ದೇಶಕ ಡಾ.ದಿನಕರ ಎಂ. ಸಾಳುಂಕೆ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ, ಐಟಿಬಿಟಿ, ಎಸ್ ಆ್ಯಂಡ್ ಟಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರು ಹಾಗೂ ವಿವಿಯ ಸಮಕುಲಾಧಿಪತಿಗಳಾದ ಡಾ.ಅಶ್ವತ್ಥ್ ನಾರಾಯಣ ಸಿ.ಎನ್ ಉಪಸ್ಥಿತರಿರುವರು. ಜೂನ್ 8 ರಂದು ಬೆಳಿಗ್ಗೆ 10.30 ಕ್ಕೆ ಪಿಎಚ್‍ಡಿ ಪ್ರಮಾಣಪತ್ರ, ಪಾರಿತೋಷಕ, ಶಿಷ್ಯವೇತನ, ಶ್ರೇಣಿ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು ಎಂದು ಕುಲಸಚಿವ ಯಶಪಾಲ ಕ್ಷೀರಸಾಗರ ಹಾಗೂ ಕುಲಪತಿ ಪ್ರೊ.ಕೆ.ಬಿ.ಗುಡಸಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


