ದಿನದ ಸುದ್ದಿ
ಶುದ್ಧ ಕುಡಿಯುವ ನೀರಿನ ಪರೀಕ್ಷೆಗಾಗಿ 31 ಜಿಲ್ಲೆಗಳಲ್ಲಿ 46 ಪ್ರಯೋಗಾಲಯಗಳ ಸ್ಥಾಪನೆ : ಸಚಿವ ಕೆ.ಎಸ್.ಈಶ್ವರಪ್ಪ
ಸುದ್ದಿದಿನ ಬೆಂಗಳೂರು : ಜಲಜೀವನ್ ಮಿಷನ್ ಅಭಿಯಾನ ಯೋಜನೆಯಡಿ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ‘ಮನೆ-ಮನೆಗೆ ಗಂಗೆ’ ಕಾರ್ಯಕ್ರಮದಡಿ ಕಳೆದ 2 ವರ್ಷಗಳಲ್ಲಿ 3 ಸಾವಿರ ಗ್ರಾಮಗಳಿಗೆ ಶೇಕಡಾ 100 ರಷ್ಟು ಕೊಳವೆ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರಿನ ಪರೀಕ್ಷೆಗಾಗಿ 31ಜಿಲ್ಲೆಗಳಲ್ಲಿ 46ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, 18ಸಾವಿರದ 600ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸಲಿವೆ. ಅಂತರ್ಜಲ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಲಧಾರೆ ಯೋಜನೆ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ನಿರೀಕ್ಷೆ ಮೀರಿ ಈ ಯೋಜನೆ ಪ್ರಗತಿಯತ್ತ ಸಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243