Connect with us

ದಿನದ ಸುದ್ದಿ

ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ

Published

on

ಸುದ್ದಿದಿನಡೆಸ್ಕ್:ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. 1975ರಲ್ಲಿ ಈ ದಿನದಂದು ಉಡಾವಣೆ ಮಾಡಲಾದ ಈ ಉಪಗ್ರಹಕ್ಕೆ ಪ್ರಾಚೀನ ಭಾರತೀಯ ಗಣಿತಜ್ಞ ಮತ್ತು ಖಗೋಳಶಾಸ್ತ್ರಜ್ಞ ಆರ್ಯಭಟ ಅವರ ಹೆಸರನ್ನು ಇಡಲಾಗಿತ್ತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ ಈ ಉಪಗ್ರಹವನ್ನು ರಷ್ಯಾ ಸಹಾಯದೊಂದಿಗೆ ಕಪುಸ್ಟಿನ್‌ಯಾರ್‌ನಿಂದ ಉಡಾವಣೆ ಮಾಡಲಾಯಿತು.

ಸೌರ ಭೌತಶಾಸ್ತ್ರ, ವಾಯುವಿಜ್ಞಾನ ಮತ್ತು ಎಕ್ಸ್-ರೇ ಖಗೋಳಶಾಸ್ತ್ರ ಸೇರಿದಂತೆ ಇತರೆ ಪ್ರದೇಶಗಳನ್ನು ಅನ್ವೇಷಿಸುವುದು ಈ ಉಪಗ್ರಹದ ಉದ್ದೇಶವಾಗಿತ್ತು. ಕಕ್ಷೆಯಲ್ಲಿ ಐದು ದಿನಗಳನ್ನು ಕಳೆದ ನಂತರ, ಆರ್ಯಭಟ ವಿದ್ಯುತ್ ವೈಫಲ್ಯವನ್ನು ಅನುಭವಿಸಿತು, ಇದರಿಂದಾಗಿ ಎಲ್ಲಾ ಪ್ರಯೋಗಗಳನ್ನು ನಿಲ್ಲಿಸಲಾಯಿತು. ಇದರ ಹೊರತಾಗಿಯೂ, ಅಮೂಲ್ಯವಾದ ದತ್ತಾಂಶವನ್ನು ಸಂಗ್ರಹಿಸಲಾಯಿತು ಮತ್ತು ವಿಜ್ಞಾನಿಗಳಿಗೆ ಉಪಗ್ರಹ ಅಭಿವೃದ್ಧಿಯಲ್ಲಿ ನಿರ್ಣಾಯಕ ಅನುಭವವನ್ನು ಇದು ನೀಡಿತು.

ವೈಫಲ್ಯದ ನಂತರ ಉಪಗ್ರಹವು ಇನ್ನೂ ಕೆಲವು ದಿನಗಳವರೆಗೆ ಮಾಹಿತಿಯನ್ನು ರವಾನಿಸುವುದನ್ನು ಮುಂದುವರೆಸಿತು. ಆರ್ಯಭಟವು ಭಾರತದ ಬಾಹ್ಯಾಕಾಶ ಪರಿಶೋಧನೆಗೆ ಅಡಿಪಾಯವಾಯಿತು ಮತ್ತು ದೇಶದ ಭವಿಷ್ಯದ ಬಾಹ್ಯಾಕಾಶ ಯಾನಗಳಿಗೆ ಪ್ರಮುಖ ಮೈಲಿಗಲ್ಲಾಯಿತು. ಅದರ ಯಶಸ್ವಿ ಉಡಾವಣೆಯೊಂದಿಗೆ, ಭಾರತವು ಕಕ್ಷೆಗೆ ಉಪಗ್ರಹವನ್ನು ಕಳುಹಿಸಿದ ವಿಶ್ವದ 11 ನೇ ರಾಷ್ಟ್ರವೆಂದು ಗುರುತಿಸಲ್ಪಟ್ಟಿತು.

ಇದನ್ನೂ ಓದಿ :

ಜೆಇಇ ಮೇನ್ಸ್ ಫಲಿತಾಂಶ ಪ್ರಕಟ : 24 ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ

ಕಾರ್ಯಕ್ರಮ

ಬೆಂಗಳೂರಿನ ಜವಾಹರ ಲಾಲ್ ನೆಹರು ತಾರಾಲಯದಲ್ಲಿಂದು ಯು.ಆರ್. ರಾವ್ ಉಪಗ್ರಹ ಕೇಂದ್ರ ಮತ್ತು ಜವಾಹರ ಲಾಲ್ ನೆಹರು ತಾರಾಲಯ ಸಹಯೋಗದೊಂದಿಗೆ ಆರ್ಯಭಟ ಉಡಾವಣೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತೀಯ ಖಭೌತ ಸಂಸ್ಥೆ ನಿರ್ದೇಶಕರಾದ ಡಾ. ಅನ್ನಪೂರ್ಣಿ ಸುಬ್ರಮಣಿಯಂ, ಯು.ಆರ್. ರಾವ್ ಉಪಗ್ರಹ ಕೇಂದ್ರದ ನಿರ್ದೇಶಕರಾದ ಎಂ. ಶಂಕರನ್, ಅಂತರಿಕ್ಷ ಆಯೋಗದ ಸದಸ್ಯರು, ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್. ಕಿರಣ್ ಕುಮಾರ್, ತಾರಾಲಯದ ನಿರ್ದೇಶಕರಾದ ಡಾ. ವಿ.ಆರ್. ಗುರುಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾಜಿ ಇಸ್ರೋ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಭಾರತದ ಶ್ರೇಷ್ಠ ಭೌತಶಾಸ್ತ್ರಜ್ಞ ಮತ್ತು ಖಗೋಳಶಾಸ್ತ್ರಜ್ಞ ವಿಕ್ರಮ್ ಸಾರಾಭಾಯ್, ಭೌತಶಾಸ್ತ್ರಜ್ಞ ಹೋಮಿ. ಜೆ ಭಾಭಾ ರಂತಹ ಭಾರತ ಕಂಡ ದಾರ್ಶನಿಕ ಮಹಾತ್ಮರು ತಮ್ಮ ಅನನ್ಯ ದೃಷ್ಟಿಕೋನದೊಂದಿಗೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ರೂವಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಅವರಿಂದ ಸ್ಫೂರ್ತಿ ಪಡೆದು, ಇಂದಿನ ಯುವಜನರು ದೇಶ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಕುರಿತು ಚಿಂತಿಸಬೇಕು ಎಂದು ಹೇಳಿದರು.

ಉದ್ಘಾಟನಾ ಭಾಷಣದಲ್ಲಿ ಎಂ. ಶಂಕರನ್, ಭಾರತದ ಬಾಹ್ಯಾಕಾಶ ಪಯಣದಲ್ಲಿ ಆರ್ಯಭಟ ಉಪಗ್ರಹ ನಿರ್ವಹಿಸಿದ ಪಾತ್ರ ಕುರಿತು ಸಮಗ್ರ ಚಿತ್ರಣ ನೀಡಿದರು. ಇಲ್ಲಿಯವರೆಗೆ ಭಾರತ 130ಕ್ಕೂ ಅಧಿಕ ಉಪಗ್ರಹಗಳ ಉಡವಾಣೆ ಮಾಡಿದ್ದು, ಇದರಲ್ಲಿ ಶೇಕಡ 50ಕ್ಕಿಂತಲೂ ಹೆಚ್ಚು ಉಪಗ್ರಹಗಳು ಇನ್ನೂ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಇದೇ ವೇಳೆ ಮಾತನಾಡಿದ ಡಾ. ಅನ್ನಪೂರ್ಣಿ ಸುಬ್ರಮಣಿಯಮ್, ನಮ್ಮ ಪೂರ್ವಜರು, ವಿಜ್ಞಾನಿಗಳು ಬಿಟ್ಟು ಹೋಗಿರುವ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಾಧಿಸುವ ಛಲದೊಂದಿಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಯಾವುದೇ ಯೋಜನೆಯ ಯಶಸ್ಸಿಗೆ ಆಧಾರಸ್ತಂಭವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಆರ್ಯಭಟ ಉಪಗ್ರಹದ ಪಯಣದ ಕುರಿತ ಸಮಗ್ರ ಮಾಹಿತಿಯುಳ್ಳ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending