Connect with us

ದಿನದ ಸುದ್ದಿ

ದೇಶದ ಎಲ್ಲ ಗ್ರಾಮಗಳಿಗೆ 5ಜಿ ತಂತ್ರಜ್ಞಾನ ಮೂಲಕ ಬ್ರಾಡ್‌ಬಾಂಡ್ ಸೇವೆ : ಪ್ರಧಾನಿ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಬೆಂಗಳೂರಿನಲ್ಲಿ ಶುಕ್ರವಾರ ಮೂರು ದಿನಗಳ ಸಿಮಿಕಾನ್-2022 ಸಮ್ಮೇಳನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಪ್ರಸ್ತುತ ಜಗತ್ತಿನಲ್ಲಿ ಸೆಮಿ ಕಂಡಕ್ಟರ್ ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಜಾಗತಿಕ ಸೆಮಿ ಕಂಡಕ್ಟರ್ ಪೂರೈಕೆ ಸರಪಳಿಯಲ್ಲಿ ಭಾರತವನ್ನು ಪ್ರಮುಖ ಪಾಲುದಾರ ರಾಷ್ಟ್ರವನ್ನಾಗಿ ಮಾಡಲು ಸಾಮೂಹಿಕ ಪ್ರಯತ್ನ ಅಗತ್ಯ ಎಂದು ಹೇಳಿದರು.

ಉನ್ನತ ತಂತ್ರಜ್ಞಾನ, ಅತ್ಯುತ್ತಮ ಗುಣಮಟ್ಟ ಹಾಗೂ ಅಧಿಕ ವಿಶ್ವಾಸಾರ್ಹತೆಯೊಂದಿಗೆ ಕಾರ್ಯನಿರ್ವಹಿಸಲು ಭಾರತ ಬದ್ಧವಾಗಿದೆ. ಸೆಮಿಕಂಡಕ್ಟರ್ ತಂತ್ರಜ್ಞಾನ ವಲಯದಲ್ಲಿ ಹೂಡಿಕೆಗೆ ಭಾರತ ಸೂಕ್ತ ರಾಷ್ಟ್ರವಾಗಿದೆ.

ಭಾರತ 1.3 ಶತಕೋಟಿ ಜನರಿಗೆ ಡಿಜಿಟಲ್ ಮೂಲಸೌಕರ್ಯ ಸಂಪರ್ಕ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಹಣಕಾಸು ಒಳಗೊಳ್ಳುವಿಕೆ, ಬ್ಯಾಂಕಿಂಗ್ ಹಾಗೂ ಡಿಜಿಟಲ್ ಪಾವತಿಯಲ್ಲಿ ಕ್ರಾಂತಿಕಾರಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆರೋಗ್ಯದಿಂದ ಕಲ್ಯಾಣದವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸಬಲೀಕರಣಕ್ಕೆ ಆದ್ಯತೆ ನೀಡಿದ್ದು, ಎಲ್ಲ ವಲಯಗಳಲ್ಲಿ ಪರಿವರ್ತನೆಗೆ ಆದ್ಯತೆ ನೀಡಲಾಗಿದೆ.

ಈ ಬೆಳವಣಿಗೆ ಮೂಲಕ ದೇಶದ ಎಲ್ಲ ಹಳ್ಳಿಗಳಿಗೆ 5ಜಿ ತಂತ್ರಜ್ಞಾನದ ಮೂಲಕ ಬ್ರಾಡ್‌ಬ್ಯಾಂಡ್ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿದ್ದು, ಶುದ್ಧ ಇಂಧನ ತಂತ್ರಜ್ಞಾನ ಒಳಗೊಂಡಂತೆ ಮುಂದಿನ ಪೀಳಿಗೆಯ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಕ್ರಾಂತಿಕಾರಕ ಹೆಜ್ಜೆ ಇಡಲಿದೆ ಎಂದು ಹೇಳಿದರು.

ಜಗತ್ತಿನ ಅತ್ಯಂತ ತ್ವರಿತ ಬೆಳವಣಿಗೆ ಕಾಣುತ್ತಿರುವ ನವೋದ್ಯಮ ಪರಿಸರ ವಲಯದಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. 2026ರ ವೇಳೆಗೆ ಸೆಮಿ ಕಂಡಕ್ಟರ್ ವಲಯದಲ್ಲಿ 80 ಶತಕೋಟಿ ಡಾಲರ್ ವಹಿವಾಟು ನಡೆಯುವ ನಿರೀಕ್ಷೆ ಇದ್ದು,2030ರ ವೇಳೆಗೆ 110 ಶತಕೋಟಿ ಡಾಲರ್‌ಗೆ ಏರಿಕೆಯಾಗಲಿದೆ. ಸರ್ಕಾರ ಸುಗಮ ವ್ಯವಹಾರ ನಡೆಸುವ ನಿಟ್ಟಿನಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗುತ್ತಿದೆ.

21ನೇ ಶತಮಾನದ ಅಗತ್ಯಗಳಿಗೆ ಅನುಗುಣವಾಗಿ ಯುವ ಭಾರತೀಯರಿಗೆ ಕೌಶಲ್ಯ ಮತ್ತು ತರಬೇತಿಯನ್ನು ಕಲ್ಪಿಸುವ ಜೊತೆಗೆ ಜಗತ್ತಿನ ಸೆಮಿಕಂಡಕ್ಟರ್ ವಿನ್ಯಾಸ ತಂತ್ರಜ್ಞರ ಪೈಕಿ ಶೇಕಡ ೨೦ರಷ್ಟು ಪಾಲನ್ನು ಭಾರತ ಹೊಂದಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending