Connect with us

ದಿನದ ಸುದ್ದಿ

5ನೇ ಹಂತದ ಲೋಕಸಭೆ ಚುನಾವಣೆ; ಶೇಕಡ 60.09ರಷ್ಟು ಮತದಾನ

Published

on

ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ನಿನ್ನೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡ 60.09 ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.

ಈ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಹರಡಿರುವ 49 ಸಂಸದೀಯ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇದರಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ ಏಳು, ಒಡಿಶಾ ಮತ್ತು ಬಿಹಾರದ ತಲಾ ಐದು, ಜಾರ್ಖಂಡ್‌ನ ಮೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ತಲಾ ಒಂದು ಸ್ಥಾನಗಳು ಸೇರಿವೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ರಾತ್ರಿ 11.30ರ ವೇಳೆಗೆ ಶೇಕಡ 57 ರಷ್ಟು ಮತದಾನವಾಗಿದೆ. ಇದು ಕಳೆದ 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನವಾಗಿದ್ದು, ಸಂಪೂರ್ಣ ಶಾಂತಿಯುತವಾಗಿದೆ.

ಬಿಹಾರದಲ್ಲಿ ಶೇಕಡ 55 ರಷ್ಟು ಮತದಾನವಾಗಿದ್ದರೆ, ಜಾರ್ಖಂಡ್‌ನಲ್ಲಿ ಶೇಕಡಾ 63 ರಷ್ಟು, ಲಡಾಖ್‌ನಲ್ಲಿ ಶೇಕಡ 70 ರಷ್ಟು ಮತದಾನವಾಗಿದೆ, ಮಹಾರಾಷ್ಟ್ರದಲ್ಲಿ 54 ಕ್ಕಿಂತ ಹೆಚ್ಚು, ಒಡಿಶಾದಲ್ಲಿ ಶೇಕಡ 69 ರಷ್ಟು, ಉತ್ತರ ಪ್ರದೇಶದಲ್ಲಿ ಸುಮಾರು ಶೇಕಡ 58 ರಷ್ಟು ಮತದಾನವಾಗಿದೆ. ಮತ್ತು ಪಶ್ಚಿಮ ಬಂಗಾಳದಲ್ಲಿ ಸುಮಾರು ಶೇಕಡ 76 ರಷ್ಟು ಮತದಾನವಾಗಿರುವ ಕುರಿತು ವರದಿಯಾಗಿದೆ.

ಈ ಹಂತದ ಮುಕ್ತಾಯದೊಂದಿಗೆ, 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 428 ಸಂಸದೀಯ ಕ್ಷೇತ್ರಗಳ ಮತದಾನ ಪೂರ್ಣಗೊಂಡಿದೆ. ಅರುಣಾಚಲ ಪ್ರದೇಶ, ಸಿಕ್ಕಿಂ, ಆಂಧ್ರಪ್ರದೇಶದ ರಾಜ್ಯ ವಿಧಾನಸಭೆಗಳು ಮತ್ತು ಒಡಿಶಾ ರಾಜ್ಯ ವಿಧಾನಸಭೆಯ 63 ಕ್ಷೇತ್ರಗಳಿಗೂ ಮತದಾನ ಪೂರ್ಣಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತೀಯ ಸೇನೆ | ವಿವಿಧ ಹುದ್ದೆಗಳಿಗೆ ಸೇರಬಸುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. ದೂ.ಸಂ: ದಕ್ಷಿಣ ಕನ್ನಡ ಜಿಲ್ಲೆ : ದೂ.ಸಂ. 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ ಜಿಲ್ಲೆ : ದೂ.ಸಂ. 08382-226589ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಶಿಷ್ಟ ಪಂಗಡದ ಕಾನೂನು ಪದವೀಧರರ ವೃತ್ತಿ ತರಬೇತಿ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಆಡಳಿತ ನ್ಯಾಯಧೀಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ಕಾನೂನು ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಜಿಲ್ಲೆಗೆ 8 ಗುರಿ ನಿಗಧಿಪಡಿಸಲಾಗಿದ್ದು ಇಲಾಖೆಯ ವೆಬ್ ಸೈಟ್ https://twd.karnataka.gov.in/ ಮೂಲಕ ಜೂ.18 ರಿಂದ 31 ರವರೆಗೆ ಅರ್ಜಿ ಸಲ್ಲಿಸಿ ಸಲ್ಲಿಸಿದ ಮೂಲ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಒತ್ತುವರಿ ತೆರವು : ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಸೂಚನೆ

Published

on

ಸುದ್ದಿದಿನಡೆಸ್ಕ್: ಜಿಲ್ಲೆಯಲ್ಲಿ 538 ಕೆರೆಗಳಿದ್ದು 23292 ಎಕರೆ ಪ್ರದೇಶ ವಿಸ್ತೀರ್ಣ ಹೊಂದಿರುತ್ತದೆ. ಇದರಲ್ಲಿ 486 ಕೆರೆಗಳ ಅಳತೆ ಮಾಡಿ 16604.22 ಎಕರೆ ವಿಸ್ತೀರ್ಣ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಅವರು ಶನಿವಾರ ಆನಗೋಡು ಬಳಿಯ ಸೈನ್ಸ್ ಭವನದಲ್ಲಿ ನಡೆದ ಜಿಲ್ಲೆಯ ಕಂದಾಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅಳತೆ ಮಾಡಲು 52 ಕೆರೆಗಳಿಂದ 6687.24 ಎಕರೆ ಅಳತೆಗೆ ಬಾಕಿ ಇರುತ್ತದೆ. ಅಳತೆ ಮಾಡಿದ 283 ಕರೆಗಳಲ್ಲಿ 1816.39 ಎಕರೆ ಒತ್ತುವರಿ ಪ್ರದೇಶವೆಂದು ಗುರುತಿಸಿ 37 ಕೆರೆಗಳ 66.38 ಎಕರೆ ವಿಸ್ತೀರ್ಣ ತೆರವು ಮಾಡಲಾಗಿದೆ. ಇನ್ನೂ 246 ಕೆರೆಗಳ 1750 ಎಕರೆ ವಿಸ್ತೀರ್ಣ ತೆರವಿಗೆ ಬಾಕಿ ಇದ್ದು 203 ಕೆರೆಗಳು 14787 ಎಕರೆ ವಿಸ್ತೀರ್ಣದಲ್ಲಿದ್ದು ಯಾವುದೇ ಒತ್ತುವರಿಯಾಗಿರುವುದಿಲ್ಲ. ಒತ್ತುವರಿಯಾದ ಕೆರೆಗಳನ್ನು ಶೀಘ್ರದಲ್ಲಿ ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

538 ಕೆರೆಗಳಲ್ಲಿ 212 ಪಂಚಾಯತ್ ರಾಜ್ ವಿಭಾಗ, 82 ಸಣ್ಣ ನೀರಾವರಿ, 36 ಜಲಸಂಪನ್ಮೂಲ ಇಲಾಖೆ, 2 ಮಹಾನಗರ ಪಾಲಿಕೆ, 144 ಗ್ರಾಮ ಪಂಚಾಯತ್ ಕೆರೆ, 28 ಅರಣ್ಯ, ಕೆಪಿಸಿಎಲ್ 2, ಎಸ್.ಎಸ್.ಎಲ್.ಆರ್.2 ಹಾಗೂ ಇತರೆ 30 ಸೇರಿವೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಅಭಿಷೇಕ್, ಆಯಾ ತಾಲ್ಲೂಕಿನ ತಹಶೀಲ್ದಾರರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending