Connect with us

ದಿನದ ಸುದ್ದಿ

6397 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ತುಮಕೂರು-ಶಿವಮೊಗ್ಗ ಚತುಷ್ಪಥ ಹೆದ್ದಾರಿ ತ್ವರಿತವಾಗಿ ಪೂರ್ಣ: ಸಂಸದ ಬಿ.ವೈ.ರಾಘವೇಂದ್ರ

Published

on

ಸುದ್ದಿದಿನ,ಶಿವಮೊಗ್ಗ : ತುಮಕೂರು-ಶಿವಮೊಗ್ಗ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ 6397.47 ಕೋಟಿ ರೂ. ಪರಿಷ್ಕøತ ಅಂದಾಜಿಗೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರು ಅನುಮೋದನೆ ನೀಡಿರುವುದರಿಂದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

ಈ ಯೋಜನೆಯಿಂದಾಗಿ ತುಮಕೂರು-ಶಿವಮೊಗ್ಗ ನಡುವೆ 5 ದೊಡ್ಡ ಸೇತುವೆಗಳು, 66 ರೈಲ್ವೆ ಕೆಳಸೇತುವೆ/ಮೇಲ್ಸೇತುವೆಗಳು, 7 ಕಡೆ ಬೈಪಾಸ್‍ಗಳು ನಿರ್ಮಾಣವಾಗಲಿದ್ದು, ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗುವುದರ ಜೊತೆಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಕ್ಕೆ ಸಹಕಾರಿಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸಚಿವರನ್ನು ಭೇಟಿಯಾಗಿ ಯೋಜನೆಗೆ ಈಗಾಗಲೇ ನೀಡಲಾಗಿರುವ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ, ಭೂಸ್ವಾಧಿನ ಹಾಗೂ ಇತರ ವೆಚ್ಚಗಳಿಗಾಗಿ ಹೆಚ್ಚುವರಿಯಾಗಿ 1,796.24 ಕೋಟಿ ರೂ. ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಭಾರತಮಾಲಾ ಯೋಜನೆಯಡಿ ಒಟ್ಟಾರೆ ಯೋಜನೆ ಅನುಷ್ಟಾನಕ್ಕೆ 6,397.47 ಕೋಟಿ ರೂ. ಮಂಜೂರು ಮಾಡಿರುವುದಕ್ಕೆ ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರು ಇಂಗಿಸುವ ಯೋಜನೆ : ಸಚಿವ ಕೆ.ಎಸ್.ಈಶ್ವರಪ್ಪ

ಒಟ್ಟು ನಾಲ್ಕು ಪ್ಯಾಕೇಜ್‍ಗಳಲ್ಲಿ ಕಾಮಗಾರಿ ಅನುಷ್ಟಾನಗೊಳಿಸಲಾಗುತ್ತಿದ್ದು, ಬೆಟ್ಟದಹಳ್ಳಿ (ತರೀಕೆರೆ)ಯಿಂದ ಶ್ರೀರಾಂಪುರ (ಶಿವಮೊಗ್ಗ) ಪ್ಯಾಕೇಜಿನಲ್ಲಿ 56.335 ಕಿಮಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರೊಂದಿಗೆ 33ಕಿಮಿ ಸರ್ವಿಸ್ ರಸ್ತೆ, ತುಂಗಾ ಮತ್ತು ಭದ್ರಾ ನದಿಗೆ 3 ಬೃಹತ್ ಸೇತುವೆಗಳು, 20 ಅಂಡರ್ ಮತ್ತು ಓವರ್ ಪಾಸ್‍ಗಳು, ಶಿವಮೊಗ್ಗದಲ್ಲಿ 14.74 ಕಿಮಿ ಹಾಗೂ ತರೀಕೆರೆಯಲ್ಲಿ 9 ಕಿಮಿ ಬೈಪಾಸ್, ರಂಗಾಪುರ ಗ್ರಾಮದಲ್ಲಿ ಟೋಲ್ ಪ್ಲಾಜಾ ನಿರ್ಮಾಣವಾಗಲಿದೆ. ಈ ಪ್ಯಾಕೇಜಿಗೆ ಈ ಮೊದಲು 1331.77 ಕೋಟಿ ರೂ. ಅಂದಾಜಿಸಲಾಗಿದ್ದು, ಇದೀಗ ಪರಿಷ್ಕøತ ಅಂದಾಜಿನಲ್ಲಿ 2082.98 ಕೋಟಿ ರೂ. ಅಂದಾಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೆದ್ದಾರಿಗಳ ನಿರ್ಮಾಣದಿಂದ ದೇಶದ ಅಭಿವೃದ್ಧಿಗೆ ಹಾಗೂ ಪ್ರವಾಸೋಧ್ಯಮಕ್ಕೆ ಅನುಕೂಲ ಎಂಬ ಪ್ರಧಾನಿ ನರೇಂದ್ರ ಮೋದೀ ಅವರ ಕನಸಿನಂತೆ ಈ ಯೋಜನೆಗೆ ಅನುಮೋದನೆ ನೀಡಲು ಸಹಕರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಹಾಗೂ ಕೇಂದ್ರ ಸರ್ಕಾರದಿಂದ ಪರಿಷ್ಕøತ ಅಂದಾಜಿಗೆ ಅನುಮೋದನೆ ದೊರಕಿಸಿಕೊಟ್ಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪರವರಿಗೂ, ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸುವಲ್ಲಿ ಸಹಕರಿಸಿದ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರಿಗೆ, ರಾಜ್ಯದ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೂ ಸಹ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending