ದಿನದ ಸುದ್ದಿ
ಮದ್ದೂರು | 63 ನೇ ಕನ್ನಡ ರಾಜ್ಯೋತ್ಸವದ ಆಚರಣೆ
ಸುದ್ದಿದಿನ ಡೆಸ್ಕ್ : 63 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮದ್ದೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದಿಂದ ಕಾರ್ಯಕ್ರಮವನ್ನು ಆಚರಿಸಲಾಯಿತು.
ಮಂಡ್ಯ ಜಿಲ್ಲೆಯ ಲೋಕಸಭಾ ಉಪಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವುದರಿಂದ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಿರಲಿಲ್ಲ.ಪಟ್ಟಣದ ಶ್ರೀ ನರಸಿಂಹ ಸ್ವಾಮಿ ದೇವಾಲಯದಿಂದ ವಿವಿಧ ಶಾಲಾ ಮಕ್ಕಳು ಸ್ಥಬ್ಧ ಚಿತ್ರಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಾಲ್ಲೂಕು ದಂಡಾಧಿಕಾರಿ ಮಹೇಶ್ ರವರು ಧ್ವಜಾರೋಹಣ ನೆರವೇರಿಸಿದರು
ನಂತರ ಮಹೇಶ್ ರವರು ಪ್ರಮುಖ ಭಾಷಣ ಮಾಡಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು.
ಬಳಿಕ ಪೋಲಿಸ್ ಇಲಾಖೆ, ಸ್ಕೌಟ್ಸ್ ಆಂಡ್ ಗೈಡ್ಸ್, ಹಾಗೂ ವಿವಿಧ ಶಾಲಾ ಕಾಲೇಜಿನ ಮಕ್ಕಳು ಪಥ ಸಂಚಲನ ತಂಡಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ವಿವಿಧ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲಾ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಮಹೇಶ್, ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ , ತಾಲ್ಲೂಕು ಆರೋಗ್ಯಾಧಿಕಾರಿ ಆಶಾಲತಾ, ಕೃಷಿ ಇಲಾಖೆ ಅಧಿಕಾರಿ ರವಿ, ಬಿ.ಇ.ಓ.ರೇಣುಕಮ್ಮ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401