ದಿನದ ಸುದ್ದಿ
ಮಹತ್ವಾಕಾಂಕ್ಷಿ ಜಿಲ್ಲೆ ಎಂದು ಆಯ್ಕೆಯಾದ ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 6 ಸಾವಿರದ 445ಕೋಟಿ ರೂ ಅನುದಾನ
ಸುದ್ದಿದಿನ, ಯಾದಗಿರಿ : ನೀತಿ ಆಯೋಗದಡಿ ಮಹತ್ವಾಕಾಂಕ್ಷಿ ಜಿಲ್ಲೆ ಎಂದು ಆಯ್ಕೆಯಾದ ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2021-22ರ ಸಾಲಿನಲ್ಲಿ 6 ಸಾವಿರದ445 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ.
ಅದರಲ್ಲಿ 5ಸಾವಿರದ 260ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಯಾದಗಿರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹತ್ವಾಕಾಂಕ್ಷಿ ಜಿಲ್ಲೆಯಲ್ಲಿ ಮೂಲಭೂತ ಸೌಲಭ್ಯ, ಆರೋಗ್ಯ, ಶಿಕ್ಷಣ, ಅಂಗನವಾಡಿ ಸೇರಿದಂತೆ ಪ್ರಮುಖ ವಿಭಾಗಗಳಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಗಣನೀಯ ಅಭಿವೃದ್ಧಿಯಾಗಿದೆ ಎಂದರು.
ರಾಯಚೂರು ಬಳಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೆಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಶೀಘ್ರದಲ್ಲೇ ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243