ದಿನದ ಸುದ್ದಿ

ಎಸ್ಸಿ-ಎಸ್ಟಿ ಗಳಿಗೆ 75 ಯೂನಿಟ್‍ ವಿದ್ಯುತ್ ಉಚಿತ

Published

on

ಸುದ್ದಿದಿನ, ದಾವಣಗೆರೆ : ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಉಚಿತವಾಗಿ 75 ಯೂನಿಟ್‍ನಷ್ಟು ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಶುಕ್ರವಾರ ಜಗಳೂರು ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಏರ್ಪಡಿಸಲಾದ ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವುದು ಹಾಗೂ 18 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಇತರೆ ಕಾಮಗಾರಿಗಳು ಸೇರಿ 1383.10 ಕೋಟಿ ಮೌಲ್ಯದ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ರೂ.21.05 ಕೋಟಿ ಮೌಲ್ಯದ 18 ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸಿರು. ಮತ್ತು ಸುಮಾರು 12 ಇಲಾಖೆಗಳಿಂದ 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಣೆ ಮಾಡಿ ಮಾತನಾಡಿದರು.

ಭೂಮಿ ಇಲ್ಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗೆ ಭೂಮಿ ತೆಗೆದುಕೊಳ್ಳಲು ರೂ. 20 ಲಕ್ಷ ಸಹಾಯಧನ ನೀಡಲಾಗುತ್ತದೆ. ದೀನದಲಿತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಏಳಿಗೆಗಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version