ದಿನದ ಸುದ್ದಿ
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) 76ನೇ ಸ್ಥಾಪನಾ ದಿನಾಚರಣೆ
- ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಬ್ಯಾಂಕ್ ಗ್ರಾಹಕರಿಗೆ ಹಾಗೂ ಪುಟ್‌ಪಾತ್ ವ್ಯಾಪಾರಸ್ಥರಿಗೆ ಮಾಸ್ಕ್ ಹಾಗೂ ಸಾನಿಟೈಸರ್ ನೀಡುವ ಮೂಲಕ ಸ್ಥಾಪನಾ ದಿನದ ಆಚರಣೆ.
- ಎ.ಐ.ಬಿ.ಇ.ಎ. ಪ್ರತಿಯೊಬ್ಬ ಬ್ಯಾಂಕ್ ನೌಕರರ ಹೆಮ್ಮೆಯ ಸಂಘ
- ಎ.ಐ.ಬಿ.ಇ.ಎ. ದೇಶ ಪ್ರೇಮಿ ಸಂಘ
ಸುದ್ದಿದಿನ, ದಾವಣಗೆರೆ : ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) 76 ನೇ ಸ್ಥಾಪನಾ ದಿನದ ಅಂಗವಾಗಿ ಇಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಕೆನರಾ ಬ್ಯಾಂಕ್‌ನ ಮಂಡಿಪೇಟೆ ಮತ್ತು ವಿದ್ಯಾನಗರ ಶಾಖೆಯಲ್ಲಿ ಬ್ಯಾಂಕ್ ಗ್ರಾಹಕರಿಗೆ ಹಾಗೂ ಪುಟ್‌ಪಾತ್ ವ್ಯಾಪಾರಿಗಳಿಗೆ ಮಾಸ್ಕ್ ಹಾಗೂ ಸಾನಿಟೈಸರ್ ನೀಡುವ ಮೂಲಕ ಹಾಗೂ ಕೊರೋನಾ ಸಾಂಕ್ರಾಮಿಕ ರೋಗದ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ರಾಜ್ಯ ಉಪಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು 1946 ರ ಎಪ್ರಿಲ್ 20 ರಂದು ಬ್ಯಾಂಕ್ ಉದ್ಯೋಗಿಗಳ ಪ್ರಪ್ರಥಮ ಸಂಘಟನೆಯಾಗಿ ಸ್ಥಾಪನೆಗೊಂಡಿತು. ಸ್ಥಾಪನೆಯಾದ ದಿನದಿಂದಲೂ ಬ್ಯಾಂಕ್ ಉದ್ಯೋಗಿಗಳ ಪರವಾಗಿ ಹೋರಾಟ ಮಾಡಿ ಬ್ಯಾಂಕ್ ನೌಕರರಿಗೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದರು.
1960 ರ ದಶಕದಲ್ಲಿ ಬ್ಯಾಂಕ್ ರಾಷ್ಟ್ರೀಕರಣಕ್ಕಾಗಿ ಸುದೀರ್ಘವಾದ ಹೋರಾಟ ಮಾಡಿ 1969ರಲ್ಲಿ ಬ್ಯಾಂಕ್ ರಾಷ್ಟ್ರೀಕರಣಕ್ಕೆ ಕಾರಣವಾದ ಏಕೈಕ ಬ್ಯಾಂಕ್ ಸಂಘಟನೆ ಎಂಬ ಕೀರ್ತಿಗೆ ಭಾಜನವಾಯಿತು. ಬ್ಯಾಂಕ್ ರಾಷ್ಟ್ರೀಕರಣದ ಮೂಲಕ ಲಕ್ಷಾಂತರ ನಿರುದ್ಯೋಗಿಗಳಿಗೆ ಬ್ಯಾಂಕ್ ಉದ್ಯೋಗ ಹಾಗೂ ಕೊಟ್ಯಾಂತರ ನಿರುದ್ಯೋಗಿಗಳಿಗೆ ಬ್ಯಾಂಕ್ ಸಾಲವನ್ನು ನೀಡಿ ಸ್ವ ಉದ್ಯೋಗ ಮಾಡಲು ಅವಕಾಶ ಕಲ್ಪಿಸಲಾಯಿತು.
ಬ್ಯಾಂಕ್‌ನಲ್ಲಿ ಖಾಲಿಯಿರುವ ಅನೇಕ ಖಾಯಂ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಕೂಡ ಸಂಘದ ವತಿಯಿಂದ ಹೋರಾಟವನ್ನು ಮಾಡಲಾಯಿತು. ಬ್ಯಾಂಕ್ ಉದ್ಯೋಗಿಗಳ ಉದ್ಯೋಗ ಭದ್ರತೆಗೆ ಹೋರಾಡಿ ಜಯಗಳಿಸಿದ ಪರಿಣಾಮವಾಗಿ ಇಂದಿಗೂ ಅಸಂಖ್ಯಾತ ಯುವಕರು ತಾವು ಇಂಜಿನಿಯರಿಂಗ್, ಎಮ್.ಬಿ.ಎ., ಎಮ್.ಸಿ.ಎ., ಮೊದಲಾದ ಉನ್ನತ ಶಿಕ್ಷಣ ಪದವಿಯನ್ನು ಹೊಂದಿದ್ದರೂ ಸಹ ಬ್ಯಾಂಕ್ ಉದ್ಯೋಗಕ್ಕೆ ಭದ್ರತೆ ಇರುವ ಕಾರಣಕ್ಕಾಗಿ ಬ್ಯಾಂಕ್ ನೌಕರಿಯನ್ನೇ ಅರಸಿಕೊಂಡು ಬರುತ್ತಿದ್ದಾರೆ ಎಂದು ನುಡಿದರು.
1991 ರಲ್ಲಿ ಆರಂಭವಾದ ಖಾಸಗೀಕರಣ, ಜಾಗತೀಕರಣ ಮತ್ತು ಉದಾರೀಕರಣದ ನೀತಿಗಳ ವಿರುದ್ಧವೂ ನಿರಂತರವಾಗಿ ಹೋರಾಡಿದ ಶ್ರೇಯಸ್ಸು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಕ್ಕೆ ಸಲ್ಲುತ್ತದೆ. ಬ್ಯಾಂಕ್ ನೌಕರರ ಶ್ರೇಯೋಭಿವೃದ್ಧಿಗಾಗಿ ಹೋರಾಡುವುದರ ಜೊತೆ ಜೊತೆಗೆ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯ ಉಳಿವಿಗಾಗಿ, ಅಸಂಘಟಿತ ವಲಯದ ನೌಕರರ ಹಕ್ಕಿಗಾಗಿ, ಬ್ಯಾಂಕ್ ಖಾಸಗಿಕರಣದ ವಿರುದ್ಧ, ವಿದೇಶೀ ನೇರ ಬಂಡವಾಳದ ಒಳ ಹರಿವಿನ ವಿರುದ್ದ, ಆಳುವ ಸರಕಾರಗಳ ಕಾರ್ಮಿಕ ವಿರೋಧಿ ಧೋರಣೆಗಳ ವಿರುದ್ಧ ಅವಿರತವಾಗಿ ಸಂಘವು ಹೋರಾಡಿದೆ ಎಂದು ಹೇಳಿದರು.
“ಬ್ಯಾಂಕಿಂಗ್ ಸೌಲಭ್ಯವು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಬೇಕು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳು ಗಳಿಸುವ ಲಾಭವು ದೇಶದ ಜನರ ಕಲ್ಯಾಣಕ್ಕಾಗಿ ವಿನಿಯೋಗಿಸಬೇಕೇ ವಿನಹ ಖಾಸಗೀ ಬಂಡವಾಳಷಾಹಿಗಳ ಲೂಟಿಗಾಗಿ ಅಲ್ಲ” ಎನ್ನುವುದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸ್ಪಷ್ಟವಾದ ನಿಲುವಾಗಿದೆ. ಇದಕ್ಕಾಗಿ ಸತತವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಕಾಂII ಪ್ರಭಾತ್‌ಕರ್, ಕಾಂII ಹೆಚ್.ಎಲ್.ಪರ್ವಾನಾ, ಕಾಂII ಡಿ.ಪಿ.ಚಡ್ಡಾ, ಕಾಂII ತಾರಕೇಶ್ವರ್ ಚಕ್ರವರ್ತಿ, ಕಾಂII ಏಕನಾಥ್ ಪೈ, ಕಾಂII ಸಿ.ಸುಬ್ರಹ್ಮಣ್ಯನ್ ಮೊದಲಾದ ಮಹಾನ್ ನಾಯಕರುಗಳು ತಮ್ಮ ಜೀವನವನ್ನೇ ಬ್ಯಾಂಕ್ ನೌಕರರ ಸಂಘಟನೆಗಾಗಿ ಮುಡಿಪಾಗಿಟ್ಟ ಮಹಾನ್ ಚೇತನಗಳು. ಪ್ರಸ್ತುತ ಕಾಂII ಸಿ.ಹೆಚ್.ವೆಂಕಟಾಚಲಂ.
ಕಾಂII ಹೆಚ್.ವಸಂತ ರೈ, ಕಾಂII ಪಿ.ಸುಂದರೇಶನ್, ಕಾಂII ಅಜಯ್ ಮಾಂಜ್ರೇಕರ್, ಕಾಂII ಸಿ.ಎಸ್.ವೇಣುಗೋಪಾಲ್, ಕಾಂII ಪಿ.ಆರ್.ಕಾರಂತ್, ಕಾಂII ರಾಮಕೃಷ್ಣ ರೆಡ್ಡಿ, ಕಾಂII ಜಯನಾಥ್ ಮೊದಲಾದವರ ಸಾರಥ್ಯದಲ್ಲಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಅತ್ಯಂತ ಸಮರ್ಥವಾಗಿ ಮುನ್ನಡೆಯುತ್ತಿದೆ.
ಕಳೆದ 75 ವರ್ಷಗಳ ಅವಧಿಯಲ್ಲಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ನೆರಳಿನಲ್ಲಿ ಲಕ್ಷಾಂತರ ಬ್ಯಾಂಕ್ ನೌಕರರು ನೆಮ್ಮದಿಯ ಹಾಗೂ ಸುಭದ್ರವಾದ ಜೀವನವನ್ನು ಕಂಡಿದ್ದಾರೆ. ಪ್ರತಿಯೊಬ್ಬ ಬ್ಯಾಂಕ್ ನೌಕರರು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವನ್ನು ಅಭಿಮಾನದಿಂದ, ಹೆಮ್ಮೆಯಿಂದ “ಇದು ನಮ್ಮ ಸಂಘ” – “ಇದು ನಮ್ಮ ಎ.ಐ.ಬಿ.ಇ.ಎ.” ಎಂದು ಗರ್ವದಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದಮೂರ್ತಿ, ಕೆನರಾ ಬ್ಯಾಂಕ್ ವಿದ್ಯಾನಗರ ಶಾಖೆಯ ಮುಖ್ಯ ಪ್ರಬಂಧಕ ಆರ್.ಬಿ.ಸಂಜೀವಪ್ಪ, ಕೆನರಾ ಬ್ಯಾಂಕ್ ವರ್ಕಮೆನ್ ಎಂಪ್ಲಾಯೀಸ್ ಯೂನಿಯನ್‌ನ ಕೇಂದ್ರ ಸಮಿತಿ ಸದಸ್ಯ ಆರ್.ಆಂಜನೇಯ, ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಪದಾಧಿಕಾರಿಗಳಾದ ಕೆ.ರಾಘವೇಂದ್ರ ನಾಯರಿ, ಕೆ.ವಿಶ್ವನಾಥ ಬಿಲ್ಲವ, ಸಿ.ಪರಶುರಾಮ ಹಾಗೂ ಕಾಡಜ್ಜಿ ಎನ್.ವೀರಪ್ಪ, ಕೆ.ಶಶಿಶೇಖರ್, ದಾದಾಪೀರ್. ಸಿದ್ದಲಿಂಗೇಶ್ ಕೋರಿ, ಕೆ.ಸುನಂದಮ್ಮ, ಡಿ.ಎಮ್.ಆನಂದಕುಮಾರ್, ಎಮ್. ಸಂದೀಪ್, ಡಿ.ಎ.ಸಾಕಮ್ಮ, ಬಿ.ಎನ್.ಶ್ವೇತಾ, ಆಶಾ ವಿದ್ಯಾಸಾಗರ್, ದರ್ಶನ್, ಡಿ.ಎ.ರವಿ, ಅಂಬರೀಶ್ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


