ದಿನದ ಸುದ್ದಿ
ಆರು ಮತ್ತು ಏಳನೇ ಹಂತದ ಲೋಕಸಭಾ ಚುನಾವಣೆಗೆ ರಾಜಕೀಯ ನಾಯಕರಿಂದ ಬಿರುಸಿನ ಪ್ರಚಾರ
ಸುದ್ದಿದಿನ ಡೆಸ್ಕ್ : ಚುನಾವಣೆಯ ಉಳಿದ ಹಂತಗಳಿಗೆ ಬಿರುಸಿನ ಪ್ರಚಾರ ನಡೆಯುತ್ತಿದೆ. ಆರನೇ ಹಂತದ ಚುನಾವಣಾ ಪ್ರಚಾರಕ್ಕೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತದಾರರ ಬೆಂಬಲ ಗಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.
ಪ್ರಧಾನಿ ಮತ್ತು ಬಿಜೆಪಿಯ ಹಿರಿಯ ನಾಯಕ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ ಇಂದು ೨೫ ಸಾವಿರಕ್ಕೂ ಹೆಚ್ಚು ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ವಾರಾಣಸಿಯಲ್ಲಿ ಜೂನ್ 1 ರಂದು ಚುನಾವಣೆ ನಡೆಯಲಿದೆ.
ಮತ್ತೊಂದೆಡೆ, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿನ್ನೆ ಪಟ್ಪರ್ಗಂಜ್, ಶಹದಾರ ಮತ್ತು ಗಾಂಧಿ ನಗರ ಪ್ರದೇಶಗಳಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ನಿನ್ನೆ ಸಂಜೆ ಬವಾನಾ ಗ್ರಾಮದಲ್ಲಿ ಗ್ರಾಮೀಣ ಜನರನ್ನು ಉದ್ದೇಶಿಸಿ ಮಾತನಾಡಿದರು. ಆರನೇ ಹಂತಕ್ಕೆ ಸೇರಿರುವ ಈ ಕ್ಷೇತ್ರಗಳ ಚುನಾವಣಾ ಪ್ರಚಾರ ಗುರುವಾರ ಮುಕ್ತಾಯವಾಗಲಿದೆ. ಇದೇ 25ರ ಶನಿವಾರ ಮತದಾನ ನಡೆಯಲಿದೆ.
ರಾಜಧಾನಿಯಲ್ಲಿ ಚುನಾವಣಾ ಪ್ರಚಾರ ಇದೇ 23 ರ ಸಂಜೆ ಮುಕ್ತಾಯಗೊಳ್ಳಲಿದೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರಗಳಿಗೆ ಇದೇ 25ರ ಶನಿವಾರದಂದು ಮತದಾನ ನಡೆಯಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿವೆ.
ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ನಿನ್ನೆ ಸಂಜೆ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದ ಸಂಗಮ್ ವಿಹಾರ್ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನವದೆಹಲಿ ಲೋಕಸಭಾ ಕ್ಷೇತ್ರದ ಮಾಳವೀಯ ನಗರದಲ್ಲಿ ರೋಡ್ ಶೋ ನಡೆಸಿದರು. ಬಿಜೆಪಿಯ ಹಿರಿಯ ನಾಯಕ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಮಯೂರ್ ವಿಹಾರ್ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ನಿನ್ನೆ ಸಂಜೆ ಬವಾನಾ ಗ್ರಾಮದಲ್ಲಿ ಗ್ರಾಮೀಣ ಜನರನ್ನು ಉದ್ದೇಶಿಸಿ ಮಾತನಾಡಿದರು. ವಾಯವ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಉದಿತ್ ರಾಜ್ ನಂಗ್ಲೋಯ್ ಮತ್ತು ಟಿಕ್ರಿ ಕಲಾನ್ ನಲ್ಲಿ ರೋಡ್ ಶೋ ನಡೆಸಿದರು.
ಎರಡು ದಿನಗಳ ಬಿಹಾರ ಪ್ರವಾಸಕ್ಕಾಗಿ ಪ್ರಧಾನಿ ಮತ್ತು ಬಿಜೆಪಿಯ ಹಿರಿಯ ನಾಯಕ ನರೇಂದ್ರ ಮೋದಿ ನಿನ್ನೆ ಸಂಜೆ ಪಾಟ್ನಾ ತಲುಪಿದ್ದಾರೆ.
ಪಾಟ್ನಾದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿಗೆ ಪ್ರಧಾನಿ ಭೇಟಿ ನೀಡಿ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಇಂದು ಅವರು ಪೂರ್ವಿ ಚಂಪಾರಣ್‌ನ ಮೋತಿಹಾರಿ ಮತ್ತು ಸಿವಾನ್ ಸಂಸದೀಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ ಗೋರಿಯಾಕೋಠಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243