Connect with us

ದಿನದ ಸುದ್ದಿ

800ಕ್ಕೂ ಹೆಚ್ಚು ಅಸ್ಲೀಲ ವೆಬ್ ಸೈಟ್ ಬಂದ್ ಮಾಡುವಂತೆ ಆದೇಶ !

Published

on

ಸುದ್ದಿದಿನ, ದೆಹಲಿ: ಸಮಾಜದಲ್ಲಿ ಹೆಚ್ಚುತ್ತಿರುವ ಲೈಂಗಿಕ ಕಿರುಕುಳ ತಡೆಗೆ ಉತ್ತರಾಖಂಡ ಮುಂದಾಗಿದೆ. ಉತ್ತರಾಖಂಡರಾಜ್ಯದಲ್ಲಿ 859 ಅಸ್ಲೀಲ ವೆಬ್ ಸೈಟ್ ಗಳನ್ನು ಕೂಡಲೇ ಬಂದ್ ಮಾಡುವಂತೆ ಇಂಟರ್ ನೆಟ್ ಸರ್ವಿಸ್ ಪ್ರೊವೈಡರ್ ಗಳಿಗೆ ಹೈಕೋರ್ಟ್ ಆದೇಶ ಮಾಡಿದೆ. ಆಜ್ಞೆಯನ್ನು ಪಾಲಿಸದಿದ್ದರೆ ಇಂಟರ್ ನೆಟ್ ಸರ್ವಿಸ್ ಸಂಸ್ಥೆಗಳ ಪರವಾನಗಿಯನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಕೇಂದ್ರ ಸರ್ಕಾರವು 2015ರಲ್ಲಿ ಒಂದು ಅಧಿಸೂಚನೆ ಜಾರಿ ಮಾಡಿ ಐಟಿ ಕಾಯ್ದೆಯಡಿ ಸೆಕ್ಸ್ ವೆಬ್ ಸೈಟ್ ಗಳನ್ನು ಬಂದ್ ಮಾಡುವಂತೆ ಇಂಟರ್ ನೆಟ್ ಸರ್ವಿಸ್ ಸಂಸ್ಥೆಗಳಿಗೆ ಸೂಚಿಸಿತ್ತು.

ದಿನದ ಸುದ್ದಿ

ಡಿಎಸ್‍ಟಿ/ಪಿಹೆಚ್‍ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್‍ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್‍ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಿದ್ದು, ಅರ್ಜಿಯನ್ನು ಆನ್‍ಲೈನ್ http://ksteps.karnataka.gov.in ಮುಖಾಂತರ ಫೆಬ್ರವರಿ 10, 2021 ರೊಳಗಾಗಿ ಸಲ್ಲಿಸಬೆಕೆಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೈತರು- ಕೇಂದ್ರ ಸರ್ಕಾರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

Published

on

ಸುದ್ದಿದಿನ,ನವದೆಹಲಿ : ಇಂದು ನಡೆಯಬೇಕಾಗಿದ್ದ ರೈತ ಮುಖಂಡರು ಮತ್ತು ಕೇಂದ್ರದ ಮಂತ್ರಿಗಳ ನಡುವಿನ 10ನೇ ಸುತ್ತಿನ ಮಾತುಕತೆ ಜ. 20ರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಕೃಷಿ ಸಚಿವ ನರೇಂದ್ರ ಸಿಂಗ್‌ ತಡರಾತ್ರಿ ರೈತ ಮುಖಂಡರಿಗೆ ಬರೆದಿರುವ ಪತ್ರದಲ್ಲಿ, ತಳ್ಳಿ ಹಾಕಲಾದ ಕಾರಣಗಳಿಂದಾಗಿ ಇಂದು ಸಭೆ ನಡೆಸಲಾಗುತ್ತಿಲ್ಲ ಎಂದು,’ ಜ. 20ರಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ್‌ ಭವನದಲ್ಲಿ ಸಭೆ ನಡೆಸಲಾಗುವುದು” ಎಂದು ತಿಳಿಸಲಾಗಿದೆ.

ಮಧ್ಯಪ್ರದೇಶದ ತಮ್ಮ ಕ್ಷೇತ್ರದ ವೀಕ್ಷಣೆಗೆ ತೆರಳಿದ್ದ ಕೃಷಿ ಸಚಿವ ನರೇಂದ್ರ ಸಿಮಗ್‌ ತೋಮರ್‌ ಸೋಮವಾರ ತಡರಾತ್ರಿ ದೆಹಲಿಗೆ ಮರಳಿದರು. ಗ್ವಾಲಿಯರ್‌ನಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರೈತ ಸಂಘಟನೆಗಳು ಕಾಯ್ದೆಗಳಲ್ಲಿರುವ ನಿರ್ದಿಷ್ಟ ರಿಯಾಯಿತಿಗಳ ಕುರಿತು ಚರ್ಚಿಸುವುದಕ್ಕೆ ಮನಸ್ಸು ಮಾಡುತ್ತಿಲ್ಲ. ಪಟ್ಟು ಸಡಿಸಲು ಸಿದ್ಧರೇ ಇಲ್ಲ. ನಾಳೆ ಸಭೆ ಇದೆ. ಅಲ್ಲಿ ರೈತ ಸಂಘಟನೆಗಳು ಪರ್ಯಾಯ ಸಾಧ್ಯತೆಗಳ ಕುರಿತು ಚರ್ಚಿಸುವ ನಂಬಿಕೆ ಇದೆ. ಹಾಗಾದರೆ ನಾವು ಪರಿಹಾರ ಕಂಡುಕೊಳ್ಳಲು ಸಾಧ್ಯ” ಎಂದಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending