Connect with us

ದಿನದ ಸುದ್ದಿ

ಸಂತೆಬೆನ್ನೂರು ಪುಷ್ಕರಣಿ ಆವರಣದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕದಲ್ಲಿ ಸುಮಾರು ಮೂರು ಕೋಟಿಗಿಂತಲೂ ಹೆಚ್ಚು ಜನರು ಬಿಪಿ, ಶುಗರ್ ಕಾಯಿಲೆಗೆ ಔಷಧಿ ಸೇವಿಸುತ್ತಿದ್ದಾರೆ. ಔಷಧಿಗೆ ಹಾಕುವ ಹಣ ನಿಂತರೆ ಸಾಕು. ನಮ್ಮ ಆರ್ಥಿಕ ಸ್ಥಿತಿ ಸುಧಾರಣೆ ಆಗಲಿದೆ. ಈ ನಿಟ್ಟಿನಲ್ಲಿ ನಾವುಗಳು ನಿರೋಗಿಗಳಾಗಲು ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಡಾ.ಜಿ.ಎಂ ಸಿದ್ದೇಶ್ವರ ಕರೆ ನೀಡಿದರು.

ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿಕ ಸ್ಥಳವಾದ ಪುಷ್ಕರಣಿಯ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ,ಆಯುμï ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಮಾನವೀಯತೆಗಾಗಿ ಯೋಗ’ ಘೋಷವಾಕ್ಯದಡಿ ಆಯೋಜಿಸಿದ್ದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯೋಗ ಎನ್ನುವುದು ಪುರಾತನ ಕಾಲದಿಂದ ಬಂದಿದ್ದು, ಸ್ವಾತಂತ್ರ ಬಂದ ನಂತರ ಇದನ್ನು ಕಡೆಗಣಿಸಿದ್ದರು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಸಿಕೊಂಡುಬರುತ್ತಿದ್ದಾರೆ ಇದನ್ನು ಸುಮಾರು 127 ದೇಶಗಳಲ್ಲಿ ಆಚರಣೆ ಮಾಡಲಾಗುತ್ತಿದೆ. ಸ್ವತಂತ್ರ ಅಮೃತಮಹೋತ್ಸವದ ಅಂಗವಾಗಿ ಭಾರತದಾದ್ಯಂತ 75 ವಿವಿಧ ಪ್ರಸಿದ್ಧ ಸ್ಥಳಗಳಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ದೇಶದ ಎಲ್ಲಾ ರಾಜ್ಯ ಜಿಲ್ಲೆ ಹೋಬಳಿ ಗ್ರಾಮ ಮಟ್ಟಗಳಲ್ಲಿಯೂ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮನುಷ್ಯನಿಗೆ ದೈಹಿಕ-ಮಾನಸಿಕ ಆರೋಗ್ಯ ಹಾಗೂ ಯೋಗಕ್ಷೇಮಕ್ಕೆ ಯೋಗವು ಅವಶ್ಯವಾಗಿದೆ. ಹಾಗಾಗಿ ಪಾಲಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಯೋಗವನ್ನು ಕಲಿಸಬೇಕು ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ, ಆರುಸಾವಿರ ವರ್ಷದ ಹಿಂದೆಯೇ ಯೋಗ ಭಾರತದಲ್ಲಿ ಹುಟ್ಟಿತ್ತು ಅಂದಿನವರು ಶತಾಯುಷಿಗಳಾಗಿದ್ದರು, ಖುಷಿಮುನಿಗಳು ಯೋಗದ ಮೂಲಕ ಆರೋಗ್ಯವಂತರಾಗಿದ್ದರು. ಪ್ರಧಾನಿ ಮೋದಿಯವರು ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದರು. ಯೋಗದ ಮೂಲಕ ನಾವು ಆರೋಗ್ಯ ಪಡೆಯೋಣ. ಪಾರಂಪರಿಕ ಸ್ಥಳವಾದ ಸಂತೇಬೆನ್ನೂರು ಪುಷ್ಕರಣಿಯಲ್ಲಿ ಯೋಗದಿನಾಚರಣೆ ಹಮ್ಮಿಕೊಂಡಿರುವುದು ಹಾಗೂ ಇಂತಹ ಸ್ಥಳಗಳ ಇತಿಹಾಸ ಪರಿಚಯ ಮಾಡಿರುವುದು ಉತ್ತಮಕಾರ್ಯ ಎಂದರು.

ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಸನಾತನ ಕಾಲದಿಂದಲೂ ದೇಶದಲ್ಲಿ ಯೋಗ ಇತ್ತು ಆ ದಿನಗಳು ಮತ್ತೆ ಮರುಕಳಿಸುತ್ತಿದೆ. ಆರೋಗ್ಯವೇ ದೇವರು ಯೋಗದಿಂದ ಆರೋಗ್ಯ ಸಾಧ್ಯ. ಇಂತಹ ಪುಣ್ಯನೆಲದಲ್ಲಿ ಜನ್ಮತಳೆದ ನಾವು ಇಂದು ತ್ಯಾಗ ಬಲಿದಾನಕ್ಕೆ ಹೆಸರಾಗಿರುವ ಚನ್ನಗಿರಿಯ ಐತಿಹಾಸಿಕ ಸ್ಥಳದಲ್ಲಿ ಯೋಗದಿನ ಆಚರಿಸುತ್ತಿರುವುದು ನಮ್ಮೆಲ್ಲರ ಪುಣ್ಯ. ಇಡೀ ಜಗತ್ತಿನಲ್ಲಿ ಶಾಂತಿ, ನೆಮ್ಮದಿ, ವೈಭವ ಹಣದಿಂದ ಸಿಗುವುದಿಲ್ಲ ಇದು ಯೋಗದಿಂದ ಮಾತ್ರ ಸಾಧ್ಯ ಎಂದರು.

ಇಂದು ನಾವು ಭಾರತೀಯತೆಯನ್ನು ಸಂಭ್ರಮಿಸಬೇಕಾದ ದಿನ ಇದಾಗಿದೆ. ಯೋಗವನ್ನು ಭಾರತೀಯರು ಹೊಸದಾಗಿ ನೀಡುತ್ತಿಲ್ಲ ನಮ್ಮ ಸನಾತನ ಪರಂಪರೆಯಲ್ಲಿ ಯೋಗವಿತ್ತು ಎಂದರು. ವಿಶ್ವದಲ್ಲೇ ಸುಮಾರು 200 ರಾಷ್ಟ್ರಗಳಲ್ಲಿ ಯೋಗದಿನ ಆಚರಿಸಲಾಗುತ್ತಿದೆ. ಜಗತ್ತಿಗೆ ಯೋಗದ ರಾಯಭಾರಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಸಂಸ್ಕøತಿಯನ್ನು ಜಗತ್ತಿಗೆ ಸಾರಿದ್ದಾರೆ. ನಮ್ಮ ಪರಂಪರೆ, ಇತಿಹಾಸ, ಸಂಸ್ಕೃತಿ ಉಳಿಸಿ ಬೆಳೆಸಿಕೊಂಡರೆ ಅದೇ ನಾವು ನೀಡುವ ದೊಡ್ಡ ಕೊಡುಗೆ ಎಂದು ಹೇಳಿದರು.

ಜಿ.ಪಂ ಸಿಇಒ ಡಾ.ಎ.ಚನ್ನಪ್ಪ ಮಾತನಾಡಿ, ಯೋಗ ಯುಕ್ತ ರೋಗ ಮುಕ್ತ ಕಾರ್ಯಕ್ರಮ ಇದಾಗಿದೆ. ಯೋಗದ ಮೂಲಕ ನಾವು ಬದುಕೋಣ, ಬದುಕಲು ಕಲಿಸೋಣ ಎಂದರು.
ಈ ವೇಳೆ ಯೋಗಗುರು ವೈದ್ಯಶ್ರೀ ಚೆನ್ನಬಸವಣ್ಣ ಸ್ವಾಮಿ ಯೋಗದ ಮಹತ್ವ ಸಾರುವ ಮೂಲಕ ಯೋಗಾಸನದ ವಿವಿಧ ಭಂಗಿಗಳನ್ನು ಹೇಳಿಕೊಟ್ಟರು.

ಯೋಗ ಪ್ರಾತ್ಯಕ್ಷಿಕೆಯ ಪ್ರಾರ್ಥನಾ ನೃತ್ಯದೊಂದಿಗೆ ಅಂತರಾಷ್ಟ್ರೀಯ ಯೋಗಪಟು ಸೃಷ್ಠಿ ಸ್ವಾಗತಕೋರಿದರು. ಯೋಗ ಕಾರ್ಯಕ್ರಮಕ್ಕೆ ನುರಾರು ಯೋಗಾಸಕ್ತರು ದಾವಣಗೆರೆ ಸೇರಿದಂತೆ ಇತರೆ ಭಾಗಗಳಿಂದ ಆಗಮಿಸಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೆÇೀಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್ ಯೋಗ ದಿನಕ್ಕೆ ಶುಭ ಕೋರಿದರು. ವೇದಿಕೆಯಲ್ಲಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಆಯುಷ್ಯ ಇಲಾಖೆ ಜಿಲ್ಲಾಧಿಕಾರಿ ಡಾ.ಶಂಕರಗೌಡ, ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸುದೇವ ರಾಯ್ಕರ್, ಎನ್.ಪರಶುರಾಮ, ದಾವಣಗೆರೆ ಪ್ರಜಾಪಿತ ಬ್ರಹ್ಮಕುಮಾರೀಸ್‍ನ ಲೀಲಾಕುಮಾರಿ, ಸಂತೇಬೆನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿಲ್ಪಾ ಮರುಳಸಿದ್ದಪ್ಪ, ಚನ್ನಗಿರಿ ಪುರಸಭಾ ಅಧ್ಯಕ್ಷೆ ಲಕ್ಷ್ಮೀದೇವಿ, ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ, ಚನ್ನಗಿರಿ ತಹಶೀಲ್ದಾರ್ ಪಟ್ಟರಾಜು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಯೋಗಪಟುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆಯಾಗಿತ್ತು. ಆಹಾರ ಉತ್ಪಾದನೆ ಮಾಡುವವರು ಕಾಯಕ ಜೀವಿಗಳು ಹಸಿವಿನಿಂದ ಮಲಗಬಾರದು. 5 ಕೆ.ಜಿ. ಅಕ್ಕಿಗೆ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ನೇರ ನಗದು ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ. ಸರ್ಕಾರದ ಯೋಜನೆಗಳಿಂದ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಹಕ ರಕ್ಷಕ ತಪಾಸಣೆ ವಾಹನಗಳಿಗೆ ಚಾಲನೆ ಹಾಗೂ ತೂಕ ಮತ್ತು ಅಳತೆಗಳ ಗ್ರಾಹಕರ ಜಾಗೃತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending