ದಿನದ ಸುದ್ದಿ
8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ : ಸಾಮೂಹಿಕ ಯೋಗ ಪ್ರದರ್ಶನಕ್ಕೆ ಮೈಸೂರು ಆಯ್ಕೆ
ಸುದ್ದಿದಿನ ಡೆಸ್ಕ್ : 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಾಮೂಹಿಕ ಯೋಗ ಪ್ರದರ್ಶನ ನಡೆಯುವ ಸ್ಥಳವಾಗಿ ಮೈಸೂರನ್ನು ಆಯ್ಕೆ ಮಾಡಲಾಗಿದೆ ಎಂದು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷದಲ್ಲಿ ದೇಶಾದ್ಯಂತ 75 ಪ್ರಮುಖ ಸ್ಥಳಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲು ಯೋಜಿಸಲಾಗಿದೆ ಎಂದರು.
ಈ ವರ್ಷ ಜೂನ್ 21ರಂದು ಮೈಸೂರಿನಲ್ಲಿ ಮುಖ್ಯ ಕಾರ್ಯಕ್ರಮದ ಜೊತೆಗೆ ಮತ್ತೊಂದು ಆಕರ್ಷಣೆ ಗಾರ್ಡಿಯನ್ ರಿಂಗ್ ಆಗಿದ್ದು, ಯೋಗದ ನೇರ ಪ್ರಸಾರ ಕಾರ್ಯಕ್ರಮ ದೇಶ, ವಿದೇಶಗಳಲ್ಲಿ ಪ್ರಸಾರವಾಗಲಿದೆ ಎಂದರು. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243