ಸಿನಿ ಸುದ್ದಿ
ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ದೂರು ದಾಖಲು
ಸುದ್ದಿದಿನ ಡೆಸ್ಕ್ : ಖ್ಯಾತ ಕನ್ನಡ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ವೆಂಕಟರಾಜು ಅವರಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಹಿರಿಯ ಪತ್ರಕರ್ತ ಬಿ.ಜಿ.ವೈಕುಂಠರಾಜು ರವರನ್ನ ವೈಯುಕ್ತಿಕವಾಗಿ ತೇಜೋವಧೆ ಮಾಡಿದ ನಿಟ್ಟಿನಲ್ಲಿ ಖಾಸಗಿ ದೂರು ದಾಖಲಾಗಿದ್ದು, 1 ಕೋಟಿಗೆ ಮಾನನಷ್ಟ ಪರಿಹಾರವಾಗಿ 8ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ವೆಂಕಟರಾಜು.
ಬಿ.ಜಿ.ವೈಕುಂಠರಾಜುರವರು ಕರ್ನಾಟಕ ನಾಟಕ ಹಾಗೂ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿದ್ದವರು, ನಾಗತಿಹಳ್ಳಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಪರಮೇಶ್ವರ್ ನಿರ್ದೇಶಿಸಿದ್ದ ಬಿ ಎಲ್ ವೇಣು ರವರ ಸಾಕ್ಷ್ಯಚಿತ್ರ ದಲ್ಲಿ ವೈಯಕ್ತಿಕ ತೇಜೋವಧೆ ಮಾಡಿರೋ ಆರೋಪ ಹಿನ್ನೆಲೆ ದೂರು ದಾಖಲಾಗಿದೆ.
ಸರ್ಕಾರದ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರ ಪ್ರಕಟಗೊಂಡಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವೆಂಕಟರಾಜು ಅವರಿಂದ ಖಾಸಗಿ ದೂರು ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ : ಡಿಸಿ ಗಂಗಾಧರಸ್ವಾಮಿ ಜಿ.ಎಂ.
-
ದಿನದ ಸುದ್ದಿ7 days ago
ಒಳಮೀಸಲಾತಿ ಜಾರಿಗೆ ಚಾಲನೆ ; ಜಾತಿಗಣತಿ ವರದಿ ವಿರೋಧಕ್ಕೆ ಬೇಡ ಮನ್ನಣೆ : ಮಾಜಿ ಸಚಿವ ಎಚ್.ಆಂಜನೇಯ
-
ದಿನದ ಸುದ್ದಿ2 days ago
ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ನೂತನ ಕಟ್ಟಡದ ಲೋಕಾರ್ಪಣೆ ; ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಕಾನೂನು ಇಲಾಖೆಗೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್
-
ದಿನದ ಸುದ್ದಿ7 days ago
ದಾವಣಗೆರೆ | ಬಿರ್ಸಾ ಮುಂಡಾ ಜನ್ಮ ದಿನಾಚರಣೆ ; ಬುಡಕಟ್ಟು ಜನರ ಆರ್ಥಿಕ ಸಬಲೀಕರಣಕ್ಕಾಗಿ ಯೋಜನೆಗಳ ಸಮರ್ಪಕ ಬಳಕೆಗೆ ಸೂಚನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್