Connect with us

ದಿನದ ಸುದ್ದಿ

ಗದಗ : ತರಳಬಾಳು ಶ್ರೀ ಜಗದ್ಗುರುವರ್ಯರ ಸಾನಿಧ್ಯದಿ ‘ಅಪರಂಜಿ’ ಗ್ರಂಥ ಬಿಡುಗಡೆ

Published

on

ಸುದ್ದಿದಿನ ಡೆಸ್ಕ್ :ಗದುಗಿನ ಶಿವಾನಂದ ಕಲ್ಯಾಣ ಮಂಟಪದಲ್ಲಿ ಭಾನುವಾರ ಎಸ್.ಬಿ.ಸಂಶಿ ದಂಪತಿ ಅಭಿನಂದನಾ ಸಮಾರಂಭದಲ್ಲಿ ‘ಅಪರಂಜಿ’ ಗ್ರಂಥ ಬಿಡುಗಡೆಗೊಳಿಸಲಾಯಿತು.

ಗದಗ: ‘ಉತ್ತರ ಕರ್ನಾಟಕದಲ್ಲೇ ಸುಸ
ಜ್ಜಿತ ಆಯುರ್ವೇದ ಆಸ್ಪತ್ರೆ ಸ್ಥಾಪಿಸಿ, ಅದಕ್ಕೆ ವಿಶಿಷ್ಟ ರೂಪ ಕೊಟ್ಟ ಸಂಸ್ಥೆಯ ಅಧ್ಯಕ್ಷ ಎನ್.ಬಿ.ಸಂಶಿ ಅವರ ವ್ಯಕ್ತಿತ್ವ, ಪ್ರಾಮಾಣಿಕತೆ, ನಿಷ್ಠೆಯ ಕಾರ್ಯಶೈಲಿ ಯುವಕರಿಗೆ ಮಾದರಿಯಾಗಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಹೇಳಿದರು.
ಇಲ್ಲಿನ ಕಳಸಾಪುರ ರಸ್ತೆಯಲ್ಲಿರುವ ಶಿವಾನಂದ ಕಲ್ಯಾಣ ಮಂಟಪದಲ್ಲಿ ಶಿವಾನಂದ ವಿದ್ಯಾವರ್ಧಕ ಸಂಸ್ಥೆಯಿಂದ ಭಾನುವಾರ ನಡೆದ ಎಸ್.ಬಿ.ಸಂಶಿ ದಂಪತಿ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಅಪರಂಜಿ’ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿದ ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಎಸ್.ಬಿ.ಸಂಶಿ ಅವರು ಈ ಭಾಗದ ಜನರಿಗೆ ಸಾಂಪ್ರದಾಯಿಕ ಆರೋಗ್ಯ ಸೇವೆ ಒದಗಿ
ಸಲು ಆಯುರ್ವೇದ ಕಾಲೇಜು ಆರಂ
ಭಿಸಿ, ದಕ್ಷತೆ ಹಾಗೂ ಪ್ರಾಮಾಣಿಕತೆ
ಯಿಂದ ಕಾರ್ಯನಿರ್ವಹಿಸಿದ್ದಾರೆ’
ಹೇಳಿದರು.

ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಎಸ್.ಬಿ.ಸಂಶಿ ಹಾಗೂ ಸುಭದ್ರಮ್ಮ ಅವರನ್ನು ಸನ್ಮಾನಿಸಲಾಯಿತು. ಮಾಜಿ
ಶಾಸಕ ಡಿ.ಆರ್.ಪಾಟೀಲ, ಅಭಿನವ ಶಿವಾನಂದ ಸ್ವಾಮೀಜಿ, ಮಾಜಿ ಸಚಿವ ಎಸ್.ಎಸ್.ಪಾಟೀಲ, ನಿಜಗುಣ ಶ್ರೀ, ಡಾ.ಬಸವರಾಜ ಸ್ವಾಮೀಜಿ, ಮಲ್ಲಯ್ಯ ಸ್ವಾಮೀಜಿ, ಕೈವಲ್ಯಾನಂದ ಸ್ವಾಮೀಜಿ, ಅಭಿನವ ರೇವಣಸಿದ್ಧೇಶ್ವರ ಸ್ವಾಮೀಜಿ, ಬಸವರಾಜ ಸ್ವಾಮೀಜಿ, ನಿಜಾನಂದ ಸ್ವಾಮೀಜಿ, ವಿದ್ಯಾನಂದ ಸ್ವಾಮೀಜಿ, ಅಭಿನವ ಬ್ರಹ್ಮಾನಂದ ಸ್ವಾಮೀಜಿ, ಚಿದ್ರೂಪನಾಂದ ಸ್ವಾಮೀಜಿ, ಶಂಕ್ರಣ್ಣ ಸಂಶಿ, ಎಸ್.ಬಿ.ಕೆ.ಗೌಡರ, ಡಾ.ಉಮೇಶ ಪುರದ, ಲಲಿತಾ ಸಂಶಿ, ಸಂಜನಾ ಸಂಶಿ ಅವರು ಎಸ್.ಬಿ.ಸಂಶಿ, ಅಶೋಕ ಸಂಶಿ, ಪ್ರಾಚಾರ್ಯ ಡಾ.ಎಂ.ಸಿ.ಪಾಟೀಲ, ಬಿ.ಎಸ್.ಪಾಟೀಲ, ನಂದಪ್ಪ ಗುಡಸಾಲಿ, ಶಂಕರಣ್ಣ ಸಂಶಿ, ಡಾ.ಎಸ್.ಡಿ.ಯರಗೇರಿ ಈ ಸಂದರ್ಭದಲ್ಲಿ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ58 minutes ago

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕಗಳನ್ನು...

ದಿನದ ಸುದ್ದಿ20 hours ago

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app...

ದಿನದ ಸುದ್ದಿ21 hours ago

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ,...

ದಿನದ ಸುದ್ದಿ2 days ago

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ...

ದಿನದ ಸುದ್ದಿ5 days ago

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ...

ದಿನದ ಸುದ್ದಿ5 days ago

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...

ದಿನದ ಸುದ್ದಿ1 week ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ1 week ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ1 week ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ1 week ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

Trending