Connect with us

ಸಿನಿ ಸುದ್ದಿ

ವಿಡಿಯೋ | ‘ವಿರಹಿಗಳ ಮೋಸ್ಟ್ ಪೇವರೆಟ್’ ಆಗ್ಬಿಟ್ಟಿದ್ದೆ ಟಗರು ಸಿನೆಮಾದ ಈ ಹಾಡು..!

Published

on

ಸುದ್ದಿದಿನ ಡೆಸ್ಕ್: ಟಗರು ಸಿನೆಮಾ ಈ ವರ್ಷದ ಮೊದಲ ಸೂಪರ್ ಹಿಟ್ ಸಿನೆಮಾ. ದುನಿಯಾ ಸೂರಿ ನಿರ್ದೇಶನದ ಈ ಸಿನೆಮಾ ಬೀರಿದ ಹವಾ ಅಷ್ಟಿಷ್ಟಲ್ಲ. ಸಿನೆಮಾದ ಪ್ರತಿಯೊಂದು ವಿಭಾಗದಲ್ಲಿಯೂ ತಂತ್ರಜ್ಞರು ಮಾಡಿರುವ ಕೆಲಸಕ್ಕೆ ಪ್ರೇಕ್ಷಕ ಫುಲ್ ಮಾರ್ಕ್ಸ್ ಕೊಟ್ಟು ಸಿನೆಮಾ ಗೆಲ್ಲಿಸಿದ್ದಾಯಿತು.

ಸೂರಿಯವರ ಸಿನೆಮಾ ಮೇಕಿಂಗ್, ಎಡಿಟಿಂಗ್, ಮಾಸ್ತಿಯವರ ಡೈಲಾಗ್, ಹೊಸ ಪ್ರತಿಭೆ ಚರಣ್ ರಾಜ್ ಅವರ ಸುಮಧುರ ಸಂಗೀತ, ಕಲೆ, ಎಲ್ಲಾ ವಿಭಾಗದ ಕೆಲಸವೂ ಅದ್ಭುತ. ಅಂದಹಾಗೆ ಈ ಸಿನೆಮಾದ ಹಾಡುಗಳಂತೂ ನಿತ್ಯ ನೂತನ. ಅದರಲ್ಲೂ ವಿರಹಿಗಳ ಮೋಸ್ಟ್ ಫೇವರೆಟ್ ಸಾಂಗ್ ‘ ಜೀವ ಸಖಿ’. ವಿರಹಿಗಳ ಮನಸ್ಸಿಗೆ ತಾಕುವ; ಸಿಹಿ- ಕಹಿ ನೆನಪುಗಳನ್ನು ಎದೆಯಲ್ಲಿ ಜೀಕುವಂತೆ ಮಾಡುವ ಶಕ್ತಿ ಈ ಹಾಡಿಗಿದೆ. ನೀವೂ ಕೇಳಿ ಈ ಹಾಡು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

Published

on

ಹುಟ್ಟುಹಬ್ಬದ ಸಂಭ್ರಮಕ್ಕೆ ಬ್ರೇಕ್: ಅಭಿಮಾನಿಗಳಿಗೆ ಕಿಚ್ಚ ಸುದೀಪ್‌ ಭಾವುಕ ಮನವಿ, ಸಮಾಜಮುಖಿ ಕಾರ್ಯಕ್ಕೆ ಕರೆ!

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್‌ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.

ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್‌ ಅವರ ಮನವಿ ವಿಶೇಷ ಗಮನ ಸೆಳೆದಿದೆ.

ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ

ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್‌ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.

30 ವರ್ಷಗಳ ಸಿನಿ ಪಯಣದ ನೆನಪು

ಕನ್ನಡ ಚಿತ್ರರಂಗಕ್ಕೆ ಸುದೀಪ್‌ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್‌ ಡೈಲಾಗ್‌ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್‌ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.

https://x.com/KicchaSudeep/status/2092857077706506638

“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”

ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್‌ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.

“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

 

Continue Reading

ದಿನದ ಸುದ್ದಿ

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

Published

on

toxic-movie-geethu-mohandas-old-statement-viral-yash-fans-troll
‘ಟಾಕ್ಸಿಕ್’ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್: ಸ್ಕ್ರಿಪ್ಟ್‌ ಬಗ್ಗೆ ಹೇಳಿಕೆಗೆ ಯಶ್ ಅಭಿಮಾನಿಗಳ ಆಕ್ರೋಶ!

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.

ವೈರಲ್ ವಿಡಿಯೋದಲ್ಲಿ ಗೀತು ಮೋಹನ್‌ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್‌ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

http://Visit : www.suddidina.com

‘ಸ್ಕ್ರಿಪ್ಟ್‌ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ

ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್‌ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.

ಸಾಮಾನ್ಯವಾಗಿ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

https://x.com/alpasankhyata/status/2092620787698094334

‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?

‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್‌ವರ್ಲ್ಡ್‌ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ

ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.

ಸದ್ಯ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

 

 

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

bengaluru-clubs-food-safety-raid-cockroaches-expired-food-found bengaluru-clubs-food-safety-raid-cockroaches-expired-food-found
ದಿನದ ಸುದ್ದಿ4 hours ago

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು...

ದಿನದ ಸುದ್ದಿ4 hours ago

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ...

toxic-movie-geethu-mohandas-old-statement-viral-yash-fans-troll toxic-movie-geethu-mohandas-old-statement-viral-yash-fans-troll
ದಿನದ ಸುದ್ದಿ4 hours ago

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು...

ದಿನದ ಸುದ್ದಿ4 hours ago

ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ

ಸುದ್ದಿದಿನ,ಬೆಂಗಳೂರು: ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ...

ದಿನದ ಸುದ್ದಿ7 hours ago

ಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್‌ಕಟ್‌ ಹೇಳಿದ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತಮ್ಮ ಆಸ್ತಿ ಮತ್ತು ಸರಳ ಜೀವನಶೈಲಿಯ ಕುರಿತು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಮಾತ್ರವಲ್ಲ, ಸಾರ್ವಜನಿಕರಲ್ಲೂ ಚರ್ಚೆಗೆ...

ದಿನದ ಸುದ್ದಿ7 hours ago

ಹೆಬ್ಬಾಳ–ಮೇಖ್ರಿ ಸುರಂಗ ಮಾರ್ಗ: ಸಂಚಾರ ಪರಿಹಾರವೇ, ಹೊಸ ಸಮಸ್ಯೆಯೇ?

ಸುದ್ದಿದಿನ,ಬೆಂಗಳೂರು: ಬೆಂಗಳೂರು ನಗರದ ಪ್ರಮುಖ ಸಂಚಾರ ಕಿರಿಕಿರಿ ಕೇಂದ್ರವಾಗಿರುವ ಹೆಬ್ಬಾಳ ಜಂಕ್ಷನ್‌ನಿಂದ ಮೇಖ್ರಿ ವೃತ್ತದವರೆಗೆ ಉದ್ದೇಶಿಸಿರುವ ಸುರಂಗ ಮಾರ್ಗ ಯೋಜನೆ ಇದೀಗ ತಜ್ಞರ ವರದಿಯಿಂದ ಚರ್ಚೆಗೆ ಬಂದಿದೆ....

ದಿನದ ಸುದ್ದಿ10 hours ago

ಶಿವರಾಮ ಕಾರಂತ ಬಡಾವಣೆಗೆ ಮುಹೂರ್ತ: ಆ.31ಕ್ಕೆ 18 ಸಾವಿರ ನಿವೇಶನ ಹಂಚಿಕೆ?

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ದೀರ್ಘಕಾಲದ ಕಾನೂನು ವಿವಾದಗಳ ಬಳಿಕ...

ದಿನದ ಸುದ್ದಿ10 hours ago

ಗೃಹಜ್ಯೋತಿ ಮರುಸಮೀಕ್ಷೆಗೆ ಕೌಂಟ್‌ಡೌನ್: 1.17 ಲಕ್ಷ ಫಲಾನುಭವಿಗಳಿಗೆ ಇನ್ನೂ 5 ದಿನ ಮಾತ್ರ!

ಸುದ್ದಿದಿನ, ಮೈಸೂರು: ನೈಜ ಫಲಾನುಭವಿಗಳಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಸಬ್ಸಿಡಿ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮರುಸಮೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಶೇ.84ರಷ್ಟು ಪರಿಶೀಲನೆ...

august-27-2026-daily-horoscope-kannada-rashi-bhavishya august-27-2026-daily-horoscope-kannada-rashi-bhavishya
ನಿತ್ಯ ಭವಿಷ್ಯ11 hours ago

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ...

bread_trick_fix_sticky_overcooked bread_trick_fix_sticky_overcooked
ಲೈಫ್ ಸ್ಟೈಲ್11 hours ago

ಅನ್ನ ಜಿಗುಟಾಯಿತಾ? ಬ್ರೆಡ್‌ನ ಈ ಸರಳ ಟ್ರಿಕ್‌ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!

ಸುದ್ದಿದಿನ: ಅನ್ನ ಬೇಯಿಸುವಾಗ ನೀರು ಹೆಚ್ಚಾಗಿ ಬಿದ್ದು ಮೆತ್ತಗಾಗುವುದು ಅಥವಾ ಹೆಚ್ಚು ಹೊತ್ತು ಬೇಯಿಸಿ ಜಿಗುಟಾಗುವುದು ಸಾಮಾನ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಅನ್ನವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ....

Trending