ದಿನದ ಸುದ್ದಿ
ಸಿಲ್ವರ್ ಸ್ಟಾರ್ ಇಂಡಿಯಾ ಪ್ರೆಸೆಂಟ್ಸ್ ಮಿಸ್ಟರ್ ಅಂಡ್ ಮಿಸ್ ಇಂಡಿಯಾ ಸೂಪರ್ ಮಾಡೆಲ್-2019 ಸೀಸನ್-8
ಸುದ್ದಿದಿನ, ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಸಿಲ್ವರ್ ಸ್ಟಾರ್ ಇಂಡಿಯಾ ಪ್ರತಿ ವರ್ಷವೂ ಫ್ಯಾಷನ್ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದೆ. ಈ ಬಾರಿಯೂ ನವಯುಗದ 2019ರ ಮೊದಲನೇ ಬೆಂಗಳೂರಿನ ಫ್ಯಾಷನ್ ಶೋ ಇದಾಗಿದ್ದೂ ಇದರಲ್ಲಿ 16 ಯುವತಿಯರು 13 ಯುವಕರು ಸ್ಪರ್ಧಿಯಾಗಿದ್ದಾರೆ.
ಈ 29ರಲ್ಲಿ ಸ್ಪರ್ಧಿಗಳಲ್ಲಿ ಯುವತಿಯರ ತಂಡದಿಂದ 3 ಹಾಗೂ ಯುವಕರ ತಂಡದಿಂದ 3 ಸೂಪರ್ ಮಾಡೆಲ್‍ಗಳು ತಮ್ಮ ಮುಡಿಗೆ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದರ ಜೊತೆ ಸ್ಯಾಂಡಲ್‍ವುಡ್‍ನ ಹೆಸರಾಂತ ನಾಯಕ ಹಾಗೂ ನಾಯಕಿಯರು ಪಾಲ್ಗೊಂಡಿದ್ದರು.
ಪಾಲ್ಗೊಂಡಿದ್ದ ಚಲನಚಿತ್ರರಂಗದ ನಟ ನಟಿಯರಿವರು : ನಟ ಯಶಸ್ ಸೂರ್ಯ, ನಟಿ ಸಾಕ್ಷಿ, ನಟ ಸಂಚಾರಿ ವಿಜಯ್, ನಟ ಧನು ಗೌಡ, ನಟಿ ನಿಮಿಕಾ ರತ್ನಾಕರ್, ಶುಭಾ ರಕ್ಷಾ, ನಿರ್ದೇಶಕಿ ರಿಶಿಕಾ ಶರ್ಮ, ನಟ ನಿಹಾಲ್ , ಕಲಾವಿದ ರವಿ ರೆಡ್ಡಿ ಹಾಗೂ ರಾಣಿ ರಿಯಾ, ಸೇರಿದಂತೆ ಮುಂತಾದವರು ಭಾಗವಹಿಸಿದರು.
ಈ ಬಾರಿಯ ಫ್ಯಾಷನ್ ಶೋ ಗೋಕುಲ ಎಕ್ಸ್‍ಟೆಕ್ಷನ್‍ನಲ್ಲಿರುವ ಗೋಕುಲ ಗ್ರ್ಯಾಂಡ್ ಹೋಟೆಲ್ ಮತ್ತಿಕೆರೆ(ಯಶವಂತಪುರ) ಆಯೋಜಿಸಲಾಗಿತ್ತು. ಸಂಜೆ 6 ಗಂಟೆಯಿಂದ ಪ್ರಾರಂಭವಾದ ಫ್ಯಾಷನ್ ಶೋ ಅದ್ಧೂರಿಯಾಗಿ ಮೆರಗು ಮೂಡಿತ್ತು. ಇದರ ಬಗ್ಗೆ ಮಾತನಾಡಿದ ಆಯೋಜಕ ರವಿ “ಸತತವಾಗಿ ಹತ್ತು ವರ್ಷಗಳಿಂದ ಸಿಲ್ವರ್ ಸ್ಟಾರ್ಸ್ ಸಂಸ್ಥೆಯೂ ಚಿತ್ರರಂಗಕ್ಕೆ ಹಾಗೂ ಫ್ಯಾಷನ್ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. 2019ರ ಮೊದಲ ಫ್ಯಾಷನ್ ಶೋ ಇದಾಗಿದ್ದೂ, ವರ್ಷಾಂತ್ಯದ ಒಳಗೆ ನಾಲ್ಕಕ್ಕೂ ಅಧಿಕ ಫ್ಯಾಷನ್ ಶೋಗಳನ್ನು ಆಯೋಜಿಸಲಿದ್ದೇವೆ ನಮ್ಮಲ್ಲಿ ಗೆದ್ದಂತಹ ಮಾಡೆಲ್‍ಗಳಿಗೆ ಸಿನಿಮಾ ಮಾಡುವ ಯೋಜನೆಯನ್ನು ಹೊಂದಿದ್ದೇವೆ.
ಯುವತಿಯರು
ವಿನ್ನರ್: ಅಸ್ಮಿತಾ ಸಿಂಗ್-ಮಿಸ್ ಇಂಡಿಯಾ ಸೂಪರ್ ಮಾಡೆಲ್-2019 ಆಗಿ ಕಿರೀಟವನ್ನು ಮುಡಿಗೇರಿಸಿಕೊಂಡರು.
ರಿಮ್‍ಜಿಂಮ್ ಗುಪ್ತ- ಫಸ್ಟ್ ರನ್ನರ್ ಅಪ್
ಸಪ್ನ ಸಿಂಗ್ -ಸೆಕೆಂಡ್ ರನ್ನರ್ ಅಪ್
ಯುವಕರು
ಜಗದೀಶ್-ಮಿಸ್ಟರ್ ಇಂಡಿಯಾ ಸೂಪರ್ ಮಾಡೆಲ್-2019 ಆಗಿ ಕಿರೀಟವನ್ನು ಮುಡಿಗೇರಿಸಿಕೊಂಡರು.
ಅಭಿಷೇಕ್ -ಫಸ್ಟ್ ರನ್ನರ್ ಅಪ್
ವಿಕ್ರಮ್-ಸೆಕೆಂಡ್ ರನ್ನರ್ ಅಪ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9035313303
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ22 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

