Connect with us

ಸಿನಿ ಸುದ್ದಿ

ವಿಡಿಯೋ | ‘ಯಜಮಾನ’ ನ ‘ಒಂದು ಮುಂಜಾನೆ’ ಹಾಡಿಗೆ ಭರ್ಜರಿ ರೆಸ್ಪಾನ್ಸ್ ..!

Published

on

ಸುದ್ದಿದಿನ ಡೆಸ್ಕ್ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನೆಮಾ ತೆರೆಕಂಡ ಅಷ್ಟೂ ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ವಿ.ಹರಿಕೃಷ್ಣ ಸಂಗೀತ ನಿರ್ದೇಶನವಿರುವ ಈ ಸಿನೆಮಾದ ಹಾಡುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಶಿವನಂದಿ ಹಾಡನ್ನು ಪ್ರೇಕ್ಷಕರು ಮೆಚ್ಚಿ ಹಾರೈಸಿದ್ದಾಯಿತು. ಈಗ ‘ ಒಂದು ಮುಂಜಾನೆ’ ವಿಡಿಯೋ ಸಾಂಗ್ ಇಂದು ರಿಲೀಸ್ ಆಗಿದ್ದು ಯೂಟ್ಯೂಬ್ ನಲ್ಲಿ ಐದು ಲಕ್ಷ ವೀಕ್ಷಣೆಯತ್ತ ಮುನ್ನುಗ್ಗುತ್ತಿದೆ.

ಒಂದು ಮುಂಜಾನೆ ಹಾಡು ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಈ ಕ್ಷಣದ ಪ್ರಮುಖ ಸುದ್ದಿಗಳು

Published

on

ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)

  1. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
  2. ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
  3. ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
  4. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
  5. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
  6. ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್‌ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ದಾವಣಗೆರೆ | ಏಪ್ರಿಲ್-ಮೇ ನಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ದಾಖಲು : ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ....

ದಿನದ ಸುದ್ದಿ14 hours ago

ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ...

ದಿನದ ಸುದ್ದಿ19 hours ago

ಪುಸ್ತಕ ಬಹುಮಾನ ; ಜಾನಪದ ಕೃತಿಗಳ ಆಹ್ವಾನ

ಸುದ್ದಿದಿನಡೆಸ್ಕ್ : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಹಾಗೂ 2023ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಪ್ರಥಮ ಆವೃತ್ತಿಯಲ್ಲ...

ದಿನದ ಸುದ್ದಿ20 hours ago

ಭಾರತ ಹಿಂದೂ ರಾಷ್ಟ್ರವಲ್ಲ ; ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ...

ದಿನದ ಸುದ್ದಿ22 hours ago

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ; ಅರ್ಜಿ ಆಹ್ವಾನ

ಸುದ್ದಿದಿನ,ಶಿವಮೊಗ್ಗ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ. ರೆಗ್ಯೂಲರ್‍ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ...

ದಿನದ ಸುದ್ದಿ23 hours ago

ನ್ಯಾಯವಾದಿ ವೃತ್ತಿ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ಶಿವಮೊಗ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2024-25 ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಅರ್ಜಿ...

ದಿನದ ಸುದ್ದಿ23 hours ago

ಲೇಖಕಿ ಅರುಂಧತಿ ರಾಯ್ ಗೆ ‘PEN Pinter’ ಪ್ರಶಸ್ತಿ

ದಿಟ್ಟ ಮನಸ್ಸಿನ ಗಟ್ಟಿ ಲೇಖಕಿ ಅರುಂಧತಿ ರಾಯ್ ಅವರಿಗೆ ಈ ಬಾರಿಯ PEN Pinter Prize ಲಭಿಸಿದೆ.”ಅಳುಕದ ಹಾಗೂ ವಿಚಲಿತಗೊಳ್ಳದ” (Unflinching and Unswerving) ಅವರ ಬರಹಗಳನ್ನು...

ದಿನದ ಸುದ್ದಿ24 hours ago

ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಸುದ್ದಿದಿನ ಡೆಸ್ಕ್:ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಪ್ರಾಥಮಿಕ...

ದಿನದ ಸುದ್ದಿ2 days ago

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪಿ.ಯು.ಸಿ. ಮತ್ತು ಪಿ.ಯು. ಸಮಾನಾಂತರ ಕೋರ್ಸ್‍ನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd...

ದಿನದ ಸುದ್ದಿ2 days ago

ಭಾರೀ ಮಳೆ ; ಭೂ ಕುಸಿತ

ಸುದ್ದಿದಿನಡೆಸ್ಕ್:ಕಳೆದ ನಾಲ್ಕು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ಥವ್ಯಸ್ತವಾಗಿದೆ. ಇದರ ಪರಿಣಾಮವಾಗಿ ಹೊನ್ನಾವರ ಬಳಿ ಭಾಸ್ಕೆರಿ ಬಳಿ ಗುಡ್ಡ ಕುಸಿದಿದೆ. ಸಿದ್ದಾಪುರ...

Trending