Connect with us

ದಿನದ ಸುದ್ದಿ

ಮರಿ ಕೋಗಿಲೆ ‘ಜೀವಿತಾ’ಳ ಕುಹೂ ಕುಹೂ!

Published

on

ಹಾಡು ಎಂದ ಕೂಡಲೇ ಹಾಡದು ಯಾವ ಕೋಗಿಲೆ” ಅಂತ ನಾದ ಬ್ರಹ್ಮ ಹಂಸಲೇಖ ಹೇಳ್ತಾರೆ. ಆದರೆ ಈ ಮರಿ ಕೋಗಿಲೆಯೊಂದು ಹಾಡು ಎಂದರೆ ಸಾಕು ಪರಮೋತ್ಸಾಹದೊಂದಿಗೆ ಒಂದರ ಮೇಲೊಂದರಂತೆ ಹಾಡಲು ಶುರು ಮಾಡುತ್ತೆ. ಹಾಡು ಕೇಳಿದವರಂತೂ ‘ನಿಲ್ಲಿಸು’ ಎಂಬ ಮಾತೇ ಮರೆತು ತಲೆತೂಗಿ, ಮುತ್ತಿಕ್ಕಿಸಿಕೊಂಡು ಹಾರೈಸಿಕೊಂಡುಬಿಡುತ್ತೆ ಈ ಮರಿ ಕೋಗಿಲೆ.

ಅಂದಹಾಗೆ ಯಾರೀ ಮರಿ ಕೋಗಿಲೆ ಎಂಬ ಕುತೂಹಲದ ಪ್ರಶ್ನೆ ನಿಮ್ಮಲ್ಲೀಗ ಮೂಡಿರ ಬಹುದು. ಅವರೇ ಬೆಣ್ಣೆ ನಗರಿಯ ಬೆಣ್ಣೆಯಂತಹ ದಾವಣಗೆರೆಯ ಜೀವಿತಾ ಮೌನೇಶ್.
ಆಡಿಕೊಂಡು ತುಂಟಾಟ ಮಾಡಿಕೊಂಡು, ಅಪ್ಪ ಅಮ್ಮಂದಿರಿಗೆ ಪ್ರೀತಿಯಿಂದ ಕಾಡುತ್ತಾ ಕುಣಿಯುವ ಈ ಚಿನಕುರುಳಿ ಮರಿಕೋಗಿಲೆಗಿನ್ನೂ ವಯಸ್ಸು ಐದು. ಇಲ್ಲಿನ ತರಳಬಾಳು ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಾಳೆ.ಆಡುವುದರ ಜೊತೆಗೆ ಹಾಡುವ ಪ್ರತಿಭೆಯಾಗಿ, ಭವಿಷ್ಯದ ಭರವಸೆಯ ಗಾಯಕಿಯಾಗುವ ಎಲ್ಲ ಲಕ್ಷಣಗಳೂ ಈ ಮರಿ ಕೋಗಿಲೆಗಿವೆ.

“ ಈಕೆ ತನ್ನ ಎರಡು-ಮೂರನೇ ವಯಸ್ಸಿನಲ್ಲೇ ನಾವು ಹೇಳಿಕೊಡುವ, ಟಿವಿ, ಮೊಬೈಲ್‍ಗಳಲ್ಲಿ ಕೇಳುವ ಹಾಡುಗಳನ್ನು ತನಗಿಷ್ಟ ಬಂದಂತೆ ಮುದ್ದಾಗಿ ಹಾಡುವ ಗೀಳೊಂದನ್ನು ಬೆಳೆಸಿಕೊಂಡಳು. ಅದನ್ನು ಗುರುತಿಸಿ ನಾವು ಸಂಗೀತದ ಜಾಡಿನಲ್ಲಿಯೇ ಬೆಳೆಸುವ ಪ್ರಯತ್ನ ಮಾಡುತ್ತಿದ್ದೇವೆ.” ಎಂಬುದು ಜೀವಿತಾ ಮೌನೇಶ ಅವರ ತಾಯಿ ಶ್ವೇತಾ ಮೌನೇಶ್ ಹಾಗೂ ತಂದೆ ಡಾ.ಮೌನೇಶ್ ಆಚಾರ್ ಅವರ ಮನದ ಮಾತು.

ಈ ಮರಿಕೋಗಿಲೆಗೆ ಶಾಸ್ರ್ತೀಯ ಸಂಗೀತದ ಅಭ್ಯಾಸ ಬಹುಮುಖ್ಯವಾದ್ದರಿಂದ ‘ಮಾನಸ’ ಎಂಬ ಸಂಗೀತ ಗುರುಗಳಿಂದ ಕರ್ನಾಟಕ ಸಂಗೀತದ ಪಾಠ ಈಗಾಗಲೇ ಶುರುವಾಗಿದ್ದು, ಶ್ರದ್ಧೆಯಿಂದ ದಿನಕ್ಕೊಂದು ಗಂಟೆ ಅಭ್ಯಾಸ ಮಾಡುತ್ತಾಳಂತೆ ಜೀವಿತಾ.
ಜೀ ಟಿವಿಯ ಸರಿಗಮಪ ಲಿಟ್ಲ್ ಚಾಂಪ್ಸ್ 14 ನೇ ಸೀಸನ್ ನಲ್ಲಿ ಸಾವಿರಾರು ಅಭ್ಯರ್ಥಿಗಳೊಟ್ಟಿಗೆ ಸ್ಪರ್ಧಿಸಿ, ಟಾಪ್ 30ರವರೆಗೆ ಟಾಕು ಟೀಕಾಗಿ ಪ್ರವೇಶ ಮಾಡಿದ್ದಳು ಈ ಮರಿ ಕೋಗಿಲೆ ಜೀವಿತಾ ಮೌನೇಶ್.

ಇನ್ನೇನು ಸ್ಪರ್ಧೆ ಆಯ್ಕೆಯಾಗಬೇಕು ಅನ್ನುವಷ್ಟರಲ್ಲಿ ದಿಢೀರನೆ ಕಾಡಿದ ಜ್ವರದಿಂದ ಕರ್ನಾಟಕದ ಮರಿಕೋಗಿಲೆ ಎಂದು ಜನರ ಬಾಯ್ಮಾತಾಗುವಲ್ಲಿ ಸುವರ್ಣ ಅವಕಾಶವೊಂದು ತಪ್ಪಿ ಹೋಯಿತು. ಈ ಮರಿಕೋಗಿಲೆಯು ‘ಕನ್ನಡವೇ ನಮ್ಮಮ್ಮ’, ‘ಅಮ್ಮಾನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ’ ಹೇಳುವ ಹಾಡುಗಳಂತೂ ಕೇಳುಗರ ಕೈಕಾಲುಗಳು ತಮಗರಿವಿಲ್ಲದೇ ತಾಳ ಹಾಕಲು ಶುರುಮಾಡುತ್ತವೆ. ಅಂತಹದೊಂದು ತಾಕತ್ತು ಈ ಮರಿ ಕೋಗಿಲೆ ಜೀವಿತಾಳ ಧ್ವನಿಯಲ್ಲಿದೆ.

ದಾವಣಗೆರೆಯಲ್ಲಿ ನಡೆಯುವ ಸಂಗೀತ ಕಾರ್ಯಕ್ರಮಗಳಲ್ಲಿ ಈ ಮರಿ ಕೋಗಿಲೆ ಭಾಗವಹಿಸಿ ಹಾಡಲಿಲ್ಲವೆಂದರೆ ಆ ಕಾರ್ಯಕ್ರಮ ಅಪೂರ್ಣವೇ ಸರಿ. ನಗರದಲ್ಲಿ ಸುರೇಶ್ ಬಾಬು ಎಂಬುವವರು ಆಯೋಜಿಸಿದ್ದ, ‘ಕುಹೂ ಕುಹೂ’ ಕ್ಯಾರಿಯೋಕೆ ಸ್ಪರ್ಧೆಯಲ್ಲಿ ಮಧುರವಾಗಿ ಹಾಡಿ ಎರಡನೇ ಬಹುಮಾನಗಿಟ್ಟಿಸಿದ್ದಳು. ಜೀ ಟಿವಿ ಆಯೀಜಿಸಿದ್ದ ‘ದಸರಾ ವಿಶೇಷ’ ಕಾರ್ಯಕ್ರಮದಲ್ಲಿ ಈ ಮರಿ ಬೊಂಬೆ “ ಬೊಂಬೆ ಹೇಳುತೈತೆ” ಎಂಬ ಹಾಡೇಳಿ ಎದುರಿದ್ದವರನ್ನು ವೇದಿಕೆಮೇಲಿದ್ದವರನ್ನು ಮಂತ್ರ ಮುಗ್ಧಗೊಳಿಸಿ ಅವರೆನ್ನೆಲ್ಲಾ ಗಾನಲೋಕಕ್ಕೆ ಕರೆದ್ಯೊಯ್ದಿದ್ದಳು ಎಂದು ಜೀವಿತಾ ಆಭಿಮಾನಿಯೊಬ್ಬರು ಹೇಳುತ್ತಾರೆ.

ಹಾಗೇ, ಶಂಕರ ಹಾಗೂ ಆಯುಶ್ ಟಿವಿಯ ‘ಪ್ಲಾಟ್ ಫಾರಂ ಟು ಪರ್‍ಪಾರ್ಮ್’ ಎಂಬ ಕಾರ್ಯಕ್ರಮದಲ್ಲಿ ‘ಬಾನಿಗೊಂದು ಎಲ್ಲೆ ಎಲ್ಲಿದೆ’ ಹಾಡ ಹೇಳಿ ರಂಜಿಸಿದ್ದಾಳೆ. ನಂತರ ಚಿತ್ರದುರ್ಗದಲ್ಲಿ ನಡೆದಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಮರಿ ಕೋಗಿಲೆ ಭಾಗವಹಿಸಿದ್ದಾಳೆ. ಅವೆಂದರೆ, ಪಿ.ಬಿ. ಶ್ರೀವಾಸ್ ಹಿಟ್ಸ್, ಕನ್ನಡ ರಾಜ್ಯೋತ್ಸವದ ಹಲವು ಕಾರ್ಯಕ್ರಮಗಳು, ಸಾಹಿತಿ ಚಂಪಾ ಹಾಗೂ ಮುರುಘಾ ಶರಣರ ಎದುರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅವರ ಪ್ರೀತಿಯ ಮೆಚ್ಚುಗೆ ಪಡೆದವಳಾಗಿದ್ದಾಳೆ ಈ ಮರಿ ಕೋಗಿಲೆ ಜೀವಿತಾ.

ಒಟ್ಟಾರೆ ದಾವಣಗೆರೆಯ ಈ ಮರಿಕೋಗಿಲೆ ಜೀವಿತಾ ಮೌನೇಶ್ ಹಾಡಿಗೊಂದು ಹಾಡ ಹೇಳಿ, ಶೃತಿ, ತಾಳದೊಂದಿಗೆ ಬೆರೆತು ಭಾರತದ ಬಹುದೊಡ್ಡ ಗಾಯಕಿಯಾಗಲಿ ಎಂಬುದೇ ಈ ಕ್ಷಣದ ಅಂಬೋಣ.

ಜೀವಿತಾಳ ಹಾಡು ಮತ್ತು ನಟನೆಯ ವೀಡಿಯೋಗಳನ್ನು ಯೂಟ್ಯೂಬಿನಲ್ಲಿ ನೋಡಲು |    jeevitha mounesh ಎಂದು type ಮಾಡಿ.

ಇದುವರೆಗೆ ಜೀವಿತಾ ನೀಡಿರುವ  ಕಾರ್ಯಕ್ರಮಗಳು

  • Zee Kannadaದಲ್ಲಿ ಬರುವ Sa Re Ga Ma Pa Season – 14 ರಲ್ಲಿ ದಾವಣಗೆರೆಯಲ್ಲಿ ನಡೆದ Audition ನಲ್ಲಿ ಸುಮಾರು 250 ಸ್ಪರ್ದಿಗಳೊಂದಿಗೆ ಭಾಗವಹಿಸಿ select ಆಗಿ, ಕರ್ನಾಟಕದಾದ್ಯಂತ 2.5 ಲಕ್ಷ ಸ್ಪರ್ದಿಗಳಲ್ಲಿ Top30 ವರೆಗೆ select ಆಗಿದ್ದರು.
  • 16.6.2017 ರಲ್ಲಿ ನಡೆದ ಜಿಲ್ಲಾ ಮಟ್ಟದ “ಕುಹೂ ಕುಹೂ ದಾವಣಗೆರೆ ಕೋಗಿಲೆ” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.
  • 2.3.2018 ರಂದು ನಡೆದ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 61ನೇ ಸ್ಮರಣೋತ್ಸವ 2018 ಹಾಗೂ ಶರಣ ಸಂಸ್ಕøತಿ ಉತ್ಸವದಲ್ಲಿ ಹಾಡಿ, ಡಾ|| ಶ್ರೀ ಶಿವಮೂರ್ತಿ ಮುರಘಾಶರಣರಿಂದ ಆಶಿರ್ವಾದ ಮತ್ತು ಗೌರವ ಸಮರ್ಪಣೆಯನ್ನು ಸ್ವೀಕರಿಸಿರುತ್ತಾರೆ.
  • 20.11.2017 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಾವಣಗೆರೆ ಇವರು ನಡೆಸಿದ “ಚಿಗುರು” ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾವಗೀತೆ ಹಾಗೂ ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
  • 1.12.2017 ರಂದು ದಾವಣಗೆರೆ ಜಿಲ್ಲೆ ಹೆಬ್ಬಾಳ ಮಠದಲ್ಲಿ ನಡೆದ 330ನೇ ಕಾರ್ತಿಕ ಮಹೋತ್ಸವದಲ್ಲಿ ವಚನ, ಭಾವಗೀತೆ ಹಾಗು ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
  • 28.11.2017 ರಂದು ದಾವಣಗೆರೆ ಮಹಾನಗರ ಪಾಲಿಕೆ ಇವರು ನಡೆಸಿದ 62ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
  • 12.8.2017 ರಂದು ಶಂಕರ ಹಾಗು ಆಯುಷ್ ಟಿವಿ ಯವರು ನಡೆಸಿದ Platform to Perform ನಲ್ಲಿ ಭಾಗವಹಿಸಿ ಚಿತ್ರಗೀತೆ ಹಾಡಿರುತ್ತಾರೆ.
  • 21.9.2017 ರಂದು Zee Kannada ನಡೆಸಿದ ದಸರ ಪ್ರಯುಕ್ತ ವಿಶೇಷ ಕಾರ್ಯಕ್ರಮದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
  • 2.2.2018 ರಂದು ವನಿತಾ ಸಮಾಜ ಪ್ರೇರಣಾ ರವರು ನಡೆಸಿದ ಕಾರ್ಯಕ್ರಮದಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
  • 7.1.2018 ರಂದು “Davangere Expo 2018” ರಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
  • 21.1.2018 ರಲ್ಲಿ Vasavi Cultural Academy, Chitradurga ಇವರು ಎರ್ಪಡಿಸಿದ ಪಿ.ಬಿ. ಶ್ರಿನಿವಾಸ್ ಹಿಟ್ಸ್ ಅಲ್ಲಿ ಹಾಡಿ ಜನರ ಮೆಚ್ಚುಗೆಯನ್ನ ಪಡೆದಿರುತ್ತಾರೆ.
  • 28.12.2017 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
  • 26.11.2017 ರಂದು GMIT ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ “ನಂದಿತ” ರವರೊಂದಿಗೆ ಸ್ಟೆಜ್ ಶೇರ್ ಮಾಡಿ ಚಿತ್ರಗೀತೆಯನ್ನು ಹಾಡಿ ಅವರ ಮೆಚ್ಚುಗೆ ಪಡೆದಿರುತ್ತಾರೆ.
  • ಶಾಲೆಯಲ್ಲಿ ನಡೆಯುವ ಎಲ್ಲಾ ಸಿಂಗಿಂಗ್ Competition ನಲ್ಲಿ ಪ್ರತೀ ಬಾರಿಯು ಮೊದಲ ಬಹುಮಾನ ಗಳಿಸಿರುತ್ತಾರೆ.
  • 28.12.2016 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
  • ಇವರು ಹಾಡಿರುವ ಗೀತೆಗಳು facebook ನಲ್ಲಿ 1.7 ಸಾವಿರಕ್ಕೂ ಹೆಚ್ಚು view ಗಳು ಹಾಗು ಮೆಚ್ಚುಗೆಗಳು ಸಿಕ್ಕಿವೆ.

 

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ |9986715401

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 hour ago

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ...

ದಿನದ ಸುದ್ದಿ3 days ago

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ...

ದಿನದ ಸುದ್ದಿ3 days ago

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...

ದಿನದ ಸುದ್ದಿ5 days ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ5 days ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ1 week ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ1 week ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ1 week ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ1 week ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ1 week ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

Trending