Connect with us

ರಾಜಕೀಯ

ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ‌ ‘ಜಿ.ಎಂ. ಸಿದ್ದೇಶ್ವರ್‌’ ಸಂದರ್ಶನ : ಮಿಸ್ ಮಾಡ್ದೆ ಓದಿ..!

Published

on

  • ಸಂದರ್ಶನ: ಗಣೇಶ್ ಕಮ್ಲಾಪುರ

ಅಲೆ, ಅನುಕಂಪ, ಆಶೀರ್ವಾದದಿಂದ ಗೆದ್ದಿಲ್ಲ, ಅಭಿವೃದ್ಧಿಯಿಂದ ಗೆದ್ದಿದ್ದೇನೆ
ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲವಿಗೆ ಶ್ರೀರಕ್ಷೆ
ಮೈತ್ರಿಪಕ್ಷಕ್ಕೆ ಚೌಕಿದಾರ್ ಮಣಿಯಲ್ಲ
ಮೂರು ಬಾರಿ ಸಂಸದನಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರವನ್ನು ಸಮರ್ಥವಾಗಿ ಪ್ರತಿನಿಧಿಸುತ್ತಿದ್ದು, ನನ್ನ ಅಭಿವೃದ್ಧಿ ಕಾರ್ಯಗಳು ಗೆಲವಿಗೆ ಕಾರಣವಾಗಿವೆಯೇ ಹೊರತು ನನ್ನ ರಾಜಕೀಯ ವಿರೋಧಿಗಳು ಹೇಳುವಂತೆ ಯಾವುದೇ ಅಲೆ, ಅನುಕಂಪ, ಆಶೀರ್ವಾದದಿಂದ ನಾನು ಗೆದ್ದಿಲ್ಲ. ಸಂಸತ್ತಿನ ಒಳ, ಹೊರಗೆ ಜನರ ಸಮಸ್ಯೆ, ಸಂಕಷ್ಟದ ಕುರಿತು ದನಿ ಎತ್ತುವ ಮೂಲಕ ಕಳೆದ 5 ವರ್ಷದಲ್ಲಿ ಸುಮಾರು 10 ಸಾವಿರ ಕೋಟಿ ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿಪಡಿಸಿ ಜನದನಿಯಾಗಿದ್ದೇನೆ. ಈ ಬಾರಿಯೂ ನಾನು ಮಾಡಿದ ಅಭಿವೃದ್ಧಿ, ಜನಪರ ಕಾರ್ಯಗಳೇ ಗೆಲವಿಗೆ ಕಾರಣವಾಗಲಿವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸುತ್ತಾರೆ ಮೂರು ಬಾರಿ ಸಂಸದರಾಗಿ ನಾಲ್ಕನೇ ಬಾರಿ ಬಿಜೆಪಿ ದಾವಣಗೆರೆ ಲೋಕಸಭಾ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಜಿ.ಎಂ. ಸಿದ್ದೇಶ್ವರ್. ಈ ಕುರಿತು ಅವರು “ಸುದ್ದಿದಿನ”ಕ್ಕೆ ನೀಡಿದ ಸಂದರ್ಶನ ಪೂರ್ಣಪಾಠ ಇಲ್ಲಿದೆ.

ಚುನಾವಣಾ ಪ್ರಚಾರದ ಭರಾಟೆ ಹೇಗಿದೆ?

ಚುನಾವಣಾ ಘೋಷಣೆಗೂ ಮುನ್ನವೇ ಶೇ. 60ರಷ್ಟು ಭಾಗ ಜಿಲ್ಲೆಯ ತಾಲೂಕು, ಗ್ರಾಮಗಳನ್ನು ಸುತ್ತಿದ್ದೇನೆ. ಈಗಾಗಲೇ ಹೊನ್ನಾಳಿ ತಾಲೂಕಿನ 80 ಹಳ್ಳಿಗಳು, ಮಾಯಕೊಂಡ ಕ್ಷೇತ್ರದ 60 ಹಳ್ಳಿಗಳು, ಹರಪನಹಳ್ಳಿ ಕ್ಷೇತ್ರದಲ್ಲಿ ಶೇ. 75ರಷ್ಟು ಭಾಗ ಹಾಗೂ ಹರಿಹರ, ಜಗಳೂರಿನ ನೂರಾರು ಹಳ್ಳಿಗಳಿಗೆ ತಲುಪಿದ್ದೇನೆ. ಇನ್ನೊಮ್ಮೆ ಎಲ್ಲಾ ತಾಲೂಕು, ಗ್ರಾಮಕ್ಕೆ ತೆರಳಲಿದ್ದೇನೆ. ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಭದ್ರ ಆಡಳಿತ, ದಿಟ್ಟ ನಿರ್ಧಾರ ಕೈಗೊಳ್ಳುವಂತಹ ನಾಯಕತ್ವವನ್ನು ಜನರು ಪ್ರಧಾನಿ ಮೋದಿ ಅವರಲ್ಲಿ ಕಂಡಿದ್ದು, ಈ ಬಾರಿಯೂ ಕಮಲದ ಕೈಹಿಡಿಯಲು ಜನತೆ ನಿರ್ಧರಿಸಿಯಾಗಿದೆ.

3 ಬಾರಿ ಸಂಸದರಾಗಿ ಜಿಲ್ಲೆಗೆ ನಿಮ್ಮ ಕೊಡುಗೆ ಏನು?

ಕಳೆದ 5 ವರ್ಷದ ಅವಧಿಯಲ್ಲಿಯೇ ಕೇಂದ್ರದಿಂದ ಜಿಲ್ಲೆಗೆ ನಾನು ತಂದಿರುವ ಅನುದಾನ ಬರೋಬ್ಬರಿ 10 ಸಾವಿರ ಕೋಟಿ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ರೇಲ್ವೆ ಅಭಿವೃದ್ಧಿ, ಸ್ಮಾರ್ಟ್‍ಸಿಟಿ, ತುಂಗಾನಾಲಾ ಆಧುನೀಕರಣ, ಅಮೃತ್ ಯೋಜನೆ, ಸಂಸದರ ಸ್ಥಳೀಯಾಭಿವೃದ್ಧಿ, ಇಎಸ್‍ಐ ಆಸ್ಪತ್ರೆ ಮೇಲ್ದರ್ಜೆಗೆ ಯೋಜನೆ ಸೇರಿದಂತೆ ನೂರಾರು ಯೋಜನೆ ಜಿಲ್ಲೆಗೆ ಒತ್ತುತಂದಿದ್ದೇನೆ. ಇದರಲ್ಲಿ ಕೆಲ ಯೋಜನೆಗಳು ಪೂರ್ಣಗೊಂಡಿದ್ದು, ಮತ್ತೊಂದಿಷ್ಟು ಪ್ರಗತಿಯಲ್ಲಿವೆ. ಅಲ್ಲದೆ, ಜಿಲ್ಲೆಯ ಕಟ್ಟಕಡೆ ಗ್ರಾಮ ತಲುಪಿ, ಅಲ್ಲಿನ ಕಷ್ಟಕಾರ್ಪಣ್ಯ ಅರಿತಿದ್ದೇನೆ. ತಪ್ಪದೇ ನನ್ನ ಕಚೇರಿಯಲ್ಲಿ ಜನಸಂಪರ್ಕ ಸಭೆ ಆಯೋಜಿಸಿ ಸಾರ್ವಜನಿಕರಿಂದ ಆಹವಾಲು ಸ್ವೀಕಾರ, ಸಮಸ್ಯೆ ಶೀಘ್ರ ಪರಿಹಾರ ಕಾರ್ಯ ನಡೆಸುತ್ತಾ ಬಂದಿದ್ದೇನೆ.

ಜೆಡಿಎಸ್, ಕಾಂಗ್ರೆಸ್ ಮೈತ್ರಿಯಿಂದ ನಿಮಗೆ ಗೆಲವು ಕಷ್ಟ ಸಾಧ್ಯವೇ?

ಯಾವ ಮಹಾಘಟಬಂದನ್ ಏರ್ಪಟ್ಟರೂ, ಎಷ್ಟೇ ಎದುರಾಳಿಗಳು ಹುಟ್ಟಿಕೊಂಡರೂ ದೇಶದಲ್ಲಿ ಬಿಜೆಪಿ ಈ ಬಾರಿ 300ಕ್ಕೂ ಅಧಿಕ, ರಾಜ್ಯದಲ್ಲಿ 22ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಮೋದಿ ಅಲೆ ಸುನಾಮಿಯಂತಿದೆ. ನಮ್ಮ ಜಿಲ್ಲೆಯಲ್ಲಿ ಈ ಬಾರಿ 1.20 ಲಕ್ಷ ನೂತನ ಮತದಾರರಲ್ಲಿ ಶೇ. 80ರಷ್ಟು ಯುವಮತದಾರರು ಮೋದಿ ಸುಭದ್ರ ಆಡಳಿತ, ದೇಶದ ಭದ್ರತೆ ವಿಷಯದಲ್ಲಿ ಅವರು ತೆಗೆದುಕೊಂಡ ದಿಟ್ಟ ನಿರ್ಧಾರ ಬೆಂಬಲಿಸಿದ್ದಾರೆ. ಆದ್ದರಿಂದ ಯಾರು ಎಷ್ಟೇ ಒಗ್ಗಟ್ಟಾದರೂ ಬಿಜೆಪಿ ಚೌಕಿದಾರ್‍ರನ್ನು ಮಣಿಸಲು ಸಾಧ್ಯವೇ ಇಲ್ಲ. ಇನ್ನು, ಜಿಲ್ಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಿಂದ ಬಿಜೆಪಿಗೆ ಗೆಲವಿಗೆ ಯಾವುದೇ ತೊಂದರೆ ಇಲ್ಲ. ಮೂರು ಬಾರಿ ಸಂಸದನಾಗಿ ಮಾಡಿರುವ ಅಭಿವೃದ್ಧಿ ಕಾರ್ಯ ನನ್ನ ಗೆಲವಿನ ಅಂತರವನ್ನು ಈ ಬಾರಿ ಮತ್ತಷ್ಟು ಹೆಚ್ಚಿಸಲಿವೆ.

ನಿಮ್ಮ ಎದುರಾಳಿಯ ನಕಾರಾತ್ಮಕ ಅಂಶಗಳು ಗೆಲವಿಗೆ ಸಹಾಯಕವೇ?

ಖಂಡಿತಾ ಇಲ್ಲ. ಎದುರಾಳಿ ಎಷ್ಟೇ ಪ್ರಭಲ ಅಥವಾ ದುರ್ಬಲನಾಗಿದ್ದರೂ ಅದು ನನಗೆ ಲೆಕ್ಕಕ್ಕಿಲ್ಲ. ನಾನು ಯಾವುದೇ ಯಾರದ್ದೋ ಅಲೆ, ಮತ್ಯಾರದ್ದೋ ಅನುಕಂಪ, ಇನ್ಯಾರದ್ದೋ ಆಶೀರ್ವಾದದಿಂದಲೇ ಗೆದ್ದುಬಂದಿಲ್ಲ. ನಾನು ಜನತೆಯ ಆಶೀರ್ವಾದಿಂದ ಗೆದ್ದಿದ್ದೇನೆ. ನಾನು ಮತ್ತು ನಮ್ಮ ಬಿಜೆಪಿ ಪಕ್ಷ ಮಾಡಿದ ಅಭಿವೃದ್ಧಿ ಕಾರ್ಯಗಳು, ಜನಸಾಮಾನ್ಯರಿಗೆ ತಕ್ಷಣಕ್ಕೆ ಸ್ಪಂದಿಸುವ, ಅವರ ಸಮಸ್ಯೆಗೆ ಮುಕ್ತಿ ಕಾಣಿಸುವಂತ ಜನಪರ ಖಾಳಜಿ, ನಿಲುವುಗಳು, ದಿಟ್ಟ ನಿರ್ಧಾರ ಗೆಲವಿಗೆ ಸಹಾಯಕವಾಗಿವೆಯೇ ವಿನಾ ಎದುರಾಳಿ ಸ್ಪರ್ಧಿಗಳ ನಕಾರಾತ್ಮಕ ಅಂಶ, ವೈಫಲ್ಯ ಕಾರಣವಲ್ಲ. ಈ ಬಾರಿಯು ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳು ನಮ್ಮೊಂದಿಗೆ ಪೈಪೋಟಿ ನಡೆಸಲು ಸಜ್ಜಾಗಿವೆ. ಆದರೆ, ನಾನು ಮಾಡಿದ ಅಭಿವೃದ್ಧಿ ಕಾರ್ಯ ನನ್ನ ಕೈ ಹಿಡಿಯಲಿದ್ದು, ಗೆಲವು ನಿಶ್ಚಿತ.

ಗೆದ್ದರೆ, ಮುಂದಿನ ನಿಮ್ಮ ಯೋಜನೆಗಳೇನು?

ಗೆದ್ದರೇ. ಎಂಬುದು ಬೇಡ, ಗೆದ್ದೆ ಗೆಲ್ಲುವೆ. ಮುಖ್ಯವಾಗಿ, 3 ದಶಕಗಳ ಬೇಡಿಕೆಯಾದ ದಾವಣಗೆರೆಯ ಅಶೋಕ ಥೇಟರ್ ಮೇಲ್ಸೆತುವೆ ನಿರ್ಮಾಣಕ್ಕೆ ಮುಂದಾಗುವೆ. 2014ರಲ್ಲೇ ಬಜೆಟ್‍ನಲ್ಲಿ 35 ಕೋಟಿ ಮೇಲ್ಸೇತುವೆ ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಆದರೆ, ರಾಜ್ಯ ಸರ್ಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ, ಅಸಹಕಾರದಿಂದ ನೆನೆಗುದಿಗೆ ಬಿದ್ದಿದೆ. ಲೋಕಾ ಚುನಾವಣೆ ನಂತರ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಮತ್ತೆ ಅಧಿಕಾರಕ್ಕೇರಿ, ಕೇಂದ್ರ, ರಾಜ್ಯಗಳೆರೆಡು ಬಿಜೆಪಿ ಅಧಿಕಾರದಲ್ಲಿರುವುದರಿಂದ ಮೇಲ್ಸೆತುವ ಖಂಡಿತಾ ಪೂರ್ಣಗೊಳ್ಳುತ್ತದೆ. ಅಲ್ಲದೆ, ಜಿಲ್ಲೆಯಲ್ಲಿ ಕಾರ್ಖಾನೆಗಳ ಸಂಖ್ಯೆ ಕಡಿಮೆ ಇದೆ ಎಂಬ ಕೊರಗು ಹೋಗಲಾಡಿಸುವ ನಿಟ್ಟಿನಲ್ಲಿ ರಾಸಾಯನಿಕ ಕಾರ್ಖಾನೆಗಳ ಘಟಕಗಳ ಅಭಿವೃದ್ಧಿ, ದೇಶದಲ್ಲಿಯೇ ಅತಿದೊಡ್ಡದಾದ 2ಜಿ ಎಥೆನಾಲ್ ಘಟಕ 2 ಲಕ್ಷ ಮಿಲಿಯನ್ ಟನ್ ಸಾಮಾಥ್ರ್ಯವಿದ್ದು, ಇದರಿಂದ ಪ್ರತ್ಯಕ್ಷ, ಪರೋಕ್ಷವಾಗಿ ಸಾವಿರಾರು ಜನರಿಗೆ ಉದ್ಯೋಗವಕಾಶ ಸಿಗಲಿದೆ. ಅಲ್ಲದೆ, ಶೀಘ್ರವೇ ರಾಷ್ಟ್ರೀಯ ಹೆದ್ದಾರಿ ಮುಂದಿನ ವರ್ಷದೊಳಗೆ ಪೂರ್ಣಗೊಳಿಸುವುದು ಸೇರಿದಂತೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಯತ್ನಿಸುವೆ.

ದಿನದ ಸುದ್ದಿ

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

Published

on

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.


  • ಲ್ಯಾಟರಲ್ ಪ್ರವೇಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ಪ್ರಕಟಿಸಿದೆ. ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಪ್ರಕಟಿಸಿದೆ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

Published

on

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.

ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ...

ದಿನದ ಸುದ್ದಿ6 hours ago

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ....

ದಿನದ ಸುದ್ದಿ8 hours ago

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು....

ದಿನದ ಸುದ್ದಿ20 hours ago

ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿದೆ ; ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಮಂಜೂರಾಗಿರುವ 8 ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ನಗರದಲ್ಲಿ ವಿದ್ಯಾರ್ಥಿನಿಲಯಗಳನ್ನು ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ...

ದಿನದ ಸುದ್ದಿ20 hours ago

ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ

ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್​​​ನಲ್ಲೂ ಗೋಲ್​​ಮಾಲ್ ನಡೆದಿದೆ. ಬಳಿಕ ನೆಟ್​​​ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ...

ದಿನದ ಸುದ್ದಿ21 hours ago

ಹಿರಿಯ ನಾಗರಿಕರಿಗಿರುವ ಸರ್ಕಾರಿ ಸೌಲಭ್ಯಗಳೇನು..? ; ಮಾಹಿತಿಗೆ ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ...

ದಿನದ ಸುದ್ದಿ1 day ago

ಇನ್ನು ಜನನ-ಮರಣ ಪ್ರಮಾಣ ಪತ್ರ ಕೊಡುವ ಅಧಿಕಾರ ಗ್ರಾಮ ಪಂಚಾಯತಿಗೆ

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಜನನ ಅಥವಾ ಮರಣ ನೋಂದಣಿ ಮಾಡಿ 30 ದಿನಗಳ ಒಳಗೆ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ ಮುಖ್ಯ ನೋಂದಣಾಧಿಕಾರಿ ಸುತ್ತೊಲೆ ಹೊರಡಿಸಿದ್ದಾರೆ. ಇದು...

ದಿನದ ಸುದ್ದಿ1 day ago

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ,...

ದಿನದ ಸುದ್ದಿ1 day ago

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ....

ದಿನದ ಸುದ್ದಿ1 day ago

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ...

Trending