ಲೈಫ್ ಸ್ಟೈಲ್
ಪವಿತ್ರ ರಂಜಾನ್ ತಿಂಗಳಲ್ಲಿ..!
ಹಿಂದು ಮುಸ್ಲಿಂ ಇಬ್ಬರೂ ಭಾಯಿ-ಭಾಯಿ ಎನ್ನುವ ಸಂಪ್ರದಾಯ ನಮ್ಮ ಭಾರತ ದೇಶದಲ್ಲಿ ಇದೆ. ಭಾರತದಲ್ಲಿ ಹಿಂದು ಮುಸ್ಲಿಂ ಎನ್ನುವ ಭೇಧವಿಲ್ಲ. ಹಿಂದುಗಳು ಸಹ ಈ ಹಬ್ಬವನ್ನು ಆಚರಿಸುತ್ತಾರೆ. ಹಿಂದುಗಳಿಗೆ ಹಿಂದು ಪಂಚಾಂಗದ ಪ್ರಕಾರ ಬರುವ ವರ್ಷದ ನಾಲ್ಕನೇ ತಿಂಗಳಾದ ಶ್ರಾವಣ ಮಾಸದ ಅತ್ಯಂತ ಪ್ರಮುಖವಾಗಿದೆ.
ಈ ಮಾಸದಲ್ಲಿ ಎಲ್ಲರೂ ದೇವರಿಗೆ ಉಪವಾಸ, ದೇವಸ್ಥಾನಗಳಲ್ಲಿ ವಿಶೇಷವಾದ ಪೂಜೆ ಹೋಮ ಹವನಗಳನ್ನು ಮಾಡುವುದು, ವ್ರತಗಳ ಆಚರಣೆ ಮಾಡುತ್ತಾರೆ. ಹೀಗೆ ಶ್ರಾವಣ ಮಾಸ ಮಹತ್ವ ಪಡೆದುಕೊಂಡರೆ, ಇನ್ನು ಮುಸ್ಲಿಂ ಧರ್ಮದಲ್ಲಿ ರಂಜಾನ್ ತಿಂಗಳಗೆ ವಿಶೇಷವಾದ ಮಹತ್ವವನ್ನು ನೀಡುತ್ತಾರೆ. ಈ ತಿಂಗಳಲ್ಲಿ ಮುಸ್ಲಿಂ ಬಾಂಧವರ ಮನೆ ಮನದಲ್ಲಿ ಕುರಾನ್ ಪಠಣ ಮಾಡುತ್ತಾರೆ.
ರಂಜಾನ್ ಮಾಸ ಆರಂಭವಾಗಿ ಈಗಾಗಲೇ 25 ದಿನ ಕಳೆದಿದೆ. ಉಪವಾಸ, ಪ್ರಾರ್ಥನೆ, ದುಡಿಮೆಯಲ್ಲಿ ಅಲ್ಲಾಹುನನ್ನು ಕಾಣುತ್ತಿರುವ ಮುಸ್ಲಿಮರು ಕೆಲವೇ ದಿನಗಳಲ್ಲಿ ಮತ್ತೆ ಮೂಡುವ ಚಂದ್ರನಿಗಾಗಿ ಕಾಯುತ್ತಿದ್ದಾರೆ.
ರಂಜಾನ್ ಹಬ್ಬದ ಮಹತ್ವ
ಮಸೀದಿಗಳ ಮಿನಾರುಗಳಿಂದ ಹೊರಡುವ ಪ್ರಾರ್ಥನೆಯ ಕರೆಗೆ ಈಗ ದಿವ್ಯಶಕ್ತಿ ಇದೆ. ಕರೆ ಕೇಳಿದ ಕೂಡಲೇ ವ್ರತನಿಷ್ಠ ಮುಸ್ಲಿಮರು ಕೆಲಸ ನಿಲ್ಲಿಸಿ, ಮಸೀದಿಗಳತ್ತ ಹೆಜ್ಜೆ ಹಾಕುತ್ತಾರೆ. ಇವರೊಂದಿಗೆ ಪುಟ್ಟ ಮಕ್ಕಳೂ ಅವರೊಡನೆ ಸಜ್ಜಾಗುತ್ತಾರೆ.
ದೊಡ್ಡವರಿಗೆ ಪ್ರಾರ್ಥನೆಯು ನಿಷ್ಠೆಯ ವಿಷಯ. ಪುರುಷರು ಮಸೀದಿಗಳ ಕಡೆಗೆ ಹೆಜ್ಜೆ ಹಾಕುವ ವೇಳೆಯಲ್ಲೇ ಮಹಿಳೆಯರು, ಬಾಲಕಿಯರು ಮನೆಯನ್ನೇ ಮಸೀದಿ ಎಂದು ಭಾವಿಸಿ ಪ್ರಾರ್ಥನೆಗೆ ಸಜ್ಜಾಗುತ್ತಾರೆ. ಹೀಗೆ ಮುಸ್ಲಿಮರ ಮನೆ ಮತ್ತು ಮಸೀದಿಗಳು ಪ್ರಾರ್ಥನೆಯ ಮೌನದಲ್ಲಿ ಅಲ್ಲಾನನ್ನು ನೆನೆಯುತ್ತಾರೆ.
ರಂಜಾನ್ ಮಾಸವೆಂದರೆ ಬಹುಪಾಲು ಮುಸ್ಲಿಂ ಮಹಿಳೆಯರಿಗೆ ಉಪವಾಸ, ಪ್ರಾರ್ಥನೆ ಅಷ್ಟೇ ಅಲ್ಲ. ನಿತ್ಯ ಕುರಾನ್ ಪಠಣ, ವಿಶ್ರಾಂತಿ ಇಲ್ಲದ ದುಡಿಮೆ. ಅವರ ದಿನಚರಿ ಆರಂಭವಾಗುವುದು ಬೆಳಗಿನ ಜಾವ. ಪತಿ, ಮನೆಯ ಹಿರಿಯರು, ಮಕ್ಕಳಿಗಾಗಿ ಇಡೀ ದಿನ ಮೀಸಲು.
ಉಪವಾಸದ ಜತೆಗೆ ಸತತ ಕೆಲಸ. ಆದರೂ ಭಕ್ತಿ ಕುಂದಿಲ್ಲ. ಕುರಾನ್ ಕೈ ಬಿಡುವುದಿಲ್ಲ, ನಮಾಜು ತಪ್ಪುವುದಿಲ್ಲ ಎಂದು ಕುರಾನ ಸಂದೇಶ ಸಾರುತ್ತದೆ. ರಂಜಾನ್ ಮಾಸದಲ್ಲಿ ದಿನಕ್ಕೆ 5 ಬಾರಿ ಪ್ರಾರ್ಥನೆ (ನಮಾಜ್) ಮಾಡುವುದು ಕಡ್ಡಾಯ. ಮಕ್ಕಳು- ಗಂಡಸರು ಐದು ಬಾರಿ ಪ್ರಾರ್ಥಿಸಿ ಸುಮ್ಮನಾದರೆ, ಮಹಿಳೆಯರು ಪ್ರಾರ್ಥನೆ ಜತೆ ಕುರಾನ್ ಓದುತ್ತಾರೆ. ಕೆಲವರು ಇಡೀ ಮಾಸದಲ್ಲಿ ಒಂದು ಬಾರಿ ಕುರಾನ್ ಓದಿದರೆ, ಮತ್ತೆ ಕೆಲವರು ಮೂರ್ನಾಲ್ಕು ಬಾರಿ ಕುರಾನ್ ಓದುತ್ತಾರೆ. ಮನೆಯಲ್ಲಿ ಕುರಾನ್ ಸಂದೇಶ ಪ್ರತಿಧ್ವನಿಸುತ್ತದೆ.
ರಂಜಾನ್‍ದ ತತ್ವಗಳು
ಕಲ್ಮಾ (ಮನಸ್ಸಿನಲ್ಲಿ ದೇವರ ಸ್ಮರಣೆ), ನಮಾಜ್ (ಪ್ರಾರ್ಥನೆ), ರೋಜಾ (ಉಪವಾಸ), ಜಕಾತ್ (ದಾನ) ಹಾಗೂ ಹಜ್ (ಮೆಕ್ಕಾ ಯಾತ್ರೆ) ಇವು ಇಸ್ಲಾಂ ಧರ್ಮದ ಪಂಚ ತತ್ವಗಳು. ಪ್ರತಿಯೊಬ್ಬರು ನಿತ್ಯ ಕಲ್ಮಾ ಆಚರಿಸಬೇಕು. ನಿತ್ಯವೂ ಐದು ಬಾರಿ ಮಸೀದಿಗೆ ತೆರಳಿ ಪಾರ್ಥನೆ ಸಲ್ಲಿಸಬೇಕು. ರಂಜಾನ್ ಮಾಸದಲ್ಲಿ ಉಪವಾಸ ಆಚರಿಸಬೇಕು, ತಮ್ಮ ಆದಾಯದಲ್ಲಿ ಶೇಕಡಾ 2.5ರಷ್ಟು?ಭಾಗವನ್ನು ಬಡವರಿಗೆ ದಾನ ಮಾಡಬೇಕು, ಪವಿತ್ರ ಮೆಕ್ಕಾಗೆ ಯಾತ್ರೆ ಹೋಗಬೇಕು ಎಂಬುದೇ ಈ ತತ್ವಗಳ ಸಾರಾಂಶ.
ವಿಜಯಪುರ ಜಿಲ್ಲೆ ಅಂದರೆ ತಟ್ಟನೆ ನೆನಪಾಗುವುದೆ ಇಲ್ಲಿನ ಐತಿಹಾಸಿಕ ಗುಮ್ಮಟ, ಇಬ್ರಾಹಿಂ ರೋಜಾ, ಹೀಗೆ ಹಲವು ಕಟ್ಟಡಗಳು. ಇವುಗಳ ಜೊತೆಗೆ ಇಲ್ಲಿನ ಸಂಸ್ಕøತಿಯು ಸಹ ಒಂದಾಗಿದೆ. ಜಿಲ್ಲೆಯಲ್ಲಿ ರಂಜಾನ್ ಹಬ್ಬ ಕಳೆಕಟ್ಟಿದೆ. ಇಲ್ಲಿನ ಗುಂಬಜಗಳು, ಮಿನಾರುಗಳು ಆಕರ್ಷಕವಾಗಿ ಮಸೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ನಗರದ ಮಾರುಕಟ್ಟೆಗಳಲ್ಲಿ ರಂಗು ರಂಗಿನ ಹೊಸ ಬಟ್ಟೆ, ಸರ, ಒಲೆಗಳು, ವಿವಿದ ಬಗೆಯ ಚಿತ್ತಾರದಲ್ಲಿ ಮೆಹಂದಿ ಡಿಸೈನ್‍ಗಳು, ವಿಭಿನ್ನ ವಿನ್ಯಾಸದ ಚಪ್ಪಲಿಗಳು ಲಗ್ಗೆ ಇಟ್ಟಿವೆ. ಇವುಗಳ ಜೊತೆಗೆ ರಂಜಾನ್ ಹಬ್ಬದಲ್ಲಿ ಮಾಡುವ ವಿಶೇಷವಾಗಿ ಮಾಡುವ ಸುರಕುಂಬದ ಬೇಕಾದ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಪ್ರತಿವರ್ಷಕ್ಕಿಂತ ಈ ವರ್ಷವು ದುಪ್ಪಟಾಗಿದೆ.
ಹಬ್ಬಕ್ಕೆ ವಿಶೇಷವಾಗಿ ಸುರಕುಂಬ ಎನ್ನುವ ಸಿಹಿ ಮಾಡುತ್ತಾರೆ, ಇದರ ಜೊತೆಗೆ ಮಾಸದ ಬಾಡೂಟವನ್ನು ಮಾಡುತ್ತಾರೆ. ಸುರಕುಂಬ ಮಾಡಿ ಎಲ್ಲರಿಗೂ ಹಂಚಿ ಆನಂದ ಪಡುತ್ತಾರೆ. ಆದರೆ ಈ ಸುರಕುಂಬ ಹಾಗೂ ಬಾಡೂಟ ತಯಾರಿಕೆಗೆ ಬೇಕಾದ ಡ್ರೈ ಪ್ರೂಟ್ಸ್, ಮಸಾಲೆ ಪದಾರ್ಥಗಳ ಬೆಲೆಗಳು ಗಗನಕ್ಕೆ ಏರೀವೆ. ಪ್ರತಿ ವರ್ಷಕ್ಕಿಂತಲೂ ಈ ವರ್ಷವೂ ಎಲ್ಲಾ ಪದಾರ್ಥಗಳು 200 ರಿಂದ 300 ರೂ.ಗಳ ವರೆಗೆ ಏರೀಕೆಯಾಗಿವೆ. ಈ ಖಾದ್ಯಗಳ ತಯಾರಿಕೆಗೆ ಬೇಕಾದ ಕಾಜು, ಬದಾಮಿ, ಚಾರುಳ್ಳಿ, ಅಕ್ರೋಟ್, ಫಿಸ್ತಾ, ಕೇರಬೀಜ, ಒಣದ್ರಾಕ್ಷಿ, ಕಾರೀಕ, ಗಸಗಸೆ, ಜಾಜಿಕಾಯಿ, ಯಾಲಕ್ಕಿ, ಕಲ್ಲಗಡಿ ಬೀಜಹೀಗೆ ಅನೇಕ ವಸ್ತುಗಳು ದರದಲ್ಲಿ ವ್ಯತ್ಯಾಸವಾಗಿವೆ. ಆದರೆ ಚಕ್ಕೆ, ಲವಂಗ, ಮಸಾಲೆ ಎಲೆ, ಇವುಗಳ ದರದಲ್ಲಿ ವ್ಯತ್ಯಾಸವಿಲ್ಲ.
ಸಾಮಗ್ರಿಗಳ ಬೆಲೆ ಕೆ.ಜಿಗಳಲ್ಲಿ
ಕಾಜು-700ರೂ, ಬದಾಮಿ-700, ಚಾರುಳ್ಳಿ-870 ರಿಂದ 900ರೂ, ಅಕ್ರೋಟ್-800ರೂ, ಫಿಸ್ತಾ-1700ರೂ, ಕೇರಬೀಜ-500ರೂ, ಒಣದ್ರಾಕ್ಷಿ-200ರೂ, ಕಾರೀಕ-200ರೂ, ಗಸಗಸೆ-800ರೂ, ಜಾಜಿಕಾಯಿ-700ರೂ, ಯಾಲಕ್ಕಿ-2500 ರಿಂದ 3000ರೂ, ಕಲ್ಲಂಗಡಿ ಬೀಜ-200ರೂ. ಇದೆಲ್ಲವು ಪ್ರಸ್ತುತ ದಿನದ ಪದಾರ್ಥಗಳ ಬೆಲೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 200ರಿಂದ 300ರೂ ವರೆಗೆ ದರ ಹೆಚ್ಚಳವಾಗಿದೆ. ಎಲಕ್ಕಿ ಮಾತ್ರ ಕಳೆದ ವರ್ಷದಲ್ಲಿ 800 ರಿಂದ 1000ರೂ.ಗಳ ವರೆಗೆ ಇದ್ದ ಬೆಲೆ ಒಮ್ಮೆಲೆ 2500ರಿಂದ 3000ರೂ.ಗೆ ಏರಿಕೆಯಾಗಿದೆ. ಈ ವರ್ಷ ಎಲಕ್ಕಿ ಬೆಳೆಗಾರರು ಬಂಪರ್ ಜಾಕ್‍ಪಾಟ್ ಹೊಡೆಯಲ್ಲಿದ್ದಾರೆ.
ಗಾಂಧಿ ಬಜಾರದಲ್ಲಿ ಹಲವು ವರ್ಷಗಳಿಂದ ಕೇವಲ 10ದಿನ ಅಥವಾ ವಾರದ ಮಟ್ಟಿಗೆ ಅಂಗಡಿಗಳನ್ನು ಹಾಕಿ ವ್ಯಾಪಾರ ಮಾಡುವ ವ್ಯಾಪಾರಿಗಳನ್ನು ಮಾತನಾಡಿಸಿದಾಗ ಅವರ ಪ್ರಕಾರ ಈ ವರ್ಷವು ಪ್ರತಿ ವರ್ಷಗಿಂತಲೂ ಹಬ್ಬಕ್ಕೆ ಬೇಕಾದ ವಸ್ತುಗಳ ಬೆಲೆ ದ್ವೀಗುಣಗೊಂಡಿದೆ. ಆದರೂ ಸಹ ವ್ಯಾಪಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆಗಳು ಇಲ್ಲ. ಗ್ರಾಹಕರು ಉತ್ಸಾಹದಿಂದಲೆ ಖರೀದಿಸುತ್ತಿದ್ದಾರೆ.
ಪ್ರತಿವರ್ಷವು ಅಂಗಡಿಗಳನ್ನು ಹಾಕಲು 15ದಿನಗಳ ಮುಂಚಿತವಾಗಿಯೇ ಅನುಮತಿ ನೀಡುತ್ತಿದ್ದರು, ಆದರೆ ಈ ವರ್ಷ 10ರಿಂದ 8ದಿನಗಳವರೆಗೆ ಮಾತ್ರ ಅನುಮತಿ ನೀಡಿದ್ದಾರೆ. ಸುಮಾರು 2.50 ಲಕ್ಷದವರೆಗೆ ಬಂಡವಾಳ ಹಾಕಿ ಎಲ್ಲಾ ಪದಾರ್ಥಗಳನ್ನು ಬಾಂಬೆ ಹಾಗೂ ವಿಜಯಪುರದಿಂದ ಖರೀದಿಸಿದ್ದಾರೆ. ಇದರಿಂದ ಸುಮಾರು 50 ರಿಂದ 60ಸಾವಿರ ರೂ.ಗಳ ಲಾಭ ಪಡೆಯುವ ನೀರಿಯಲ್ಲಿ ವ್ಯಾಪಾರಿಗಳು ಇದ್ದಾರೆ.
ಅಭಿಪ್ರಾಯ
- ನಾನು ಸಿಂದಗಿ ತಾಲ್ಲೂಕಿನ ಜಾಳವಾದ ಗ್ರಾಮದವರು. ನಾನು ಸುಮಾರು 30ವರ್ಷಗಳಿಂದ ನಗರದ ಗಾಂಧಿ ಬಜಾರದಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ನಮಗೆ ಗ್ರಾಹಕರು ಉತ್ತಮ ರೀತಿಯಲ್ಲಿ ಸಹಕರಿಸುತ್ತಿದ್ದಾರೆ. ನನಗೆ ಸುಮಾರು ಜನರು ತುಂಬಾ ಆತ್ಮೀಯರು ಹಾಗೂ ಕಾಯಂ ಗ್ರಾಹಕರು ಆಗಿದ್ದಾರೆ. ಈ ವರ್ಷ 2ಲಕ್ಷ ಬಂಡವಾಳ ಹಾಕಿದ್ದೇನೆ. ಈವರ್ಷ ತಡವಾಗಿ ವ್ಯಾಪಾರ ಪ್ರಾರಂಭವಾಗಿದೆ. ಹಾಗಾಗಿ ಲಾಭದ ನಿರೀಕ್ಷೆವು ಕಡಿಮೆ ಪ್ರಮಾಣದಲ್ಲಿದೆ ಹಾಗಾಗಿ ವ್ಯಾಪಾರ ಯಾವ ರೀತಿಯಲ್ಲಿ ಆಗುವುದು ಅಂತ ಕಾದು ನೋಡಬೇಕಾಗಿದೆ. | ಸುರೇಶ. ಮಲ್ಲಪ್ಪ. ದೊಡ್ಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.



